ಹನಿಟ್ರ್ಯಾಪ್ ವಿಚಾರ ಸಿಬಿಐ ತನಿಖೆಗೆ ವಹಿಸಿ: ವಿಜಯೇಂದ್ರ ಆಗ್ರಹ

RELATED POSTS

ಬೆಂಗಳೂರು(thenewzmirror.com): ಸಚಿವರು ಸೇರಿ ಪ್ರಮುಖರ ಹನಿಟ್ರ್ಯಾಪ್ ವಿಚಾರದ ಕುರಿತು ಸಿಬಿಐ ತನಿಖೆ ನಡೆಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ.

ವಿಧಾನಸೌಧದ ಮುಂಭಾಗದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು ಮಾತನಾಡಿದ ಅವರು, ನ್ಯಾಯಾಧೀಶರು ಅಥವಾ ನಿವೃತ್ತ ನ್ಯಾಯಾಧೀಶರಿಂದ ಇದರ ತನಿಖೆ ಸಾಧ್ಯವಿಲ್ಲ; ಎಸ್‍ಐಟಿಯಿಂದ ಇದು ಖಂಡಿತ ಅಸಾಧ್ಯ.ಸದನ ನಡೆಯುವ ಸಂದರ್ಭದಲ್ಲಿ ಆಡಳಿತ ಪಕ್ಷದ ಸದಸ್ಯರು ಹಾಗೂ ಸಹಕಾರಿ ಸಚಿವರಾದ ರಾಜಣ್ಣ ಅವರು ಬಹಳ ಗಂಭೀರವಾದ ವಿಚಾರವನ್ನು ಪ್ರಸ್ತಾಪಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಸಚಿವರ ಮೇಲೆ ಹನಿಟ್ರ್ಯಾಪ್ ಆಗಿದೆ; ಈ ವಿಚಾರ ಸಾಕಷ್ಟು ಸದ್ದು ಮಾಡುತ್ತಿತ್ತು ಎಂದರು.

ಮತ್ತೊಬ್ಬ ಸಚಿವ ಸತೀಶ್ ಜಾರಕಿಹೊಳಿ ಅವರು ಬೆಳಿಗ್ಗೆ ಅದನ್ನು ಪುಷ್ಟೀಕರಿಸುವ ಹೇಳಿಕೆ ಕೊಟ್ಟಿದ್ದಾರೆ. ಸಚಿವರಾದ ರಾಜಣ್ಣ ಅವರು, ಘಟನೆ ನಡೆದಿರುವುದು ಸತ್ಯ. 48-49 ಜನರ ಮೇಲೆ ಹನಿಟ್ರ್ಯಾಪ್ ಆಗಿದೆ ಎಂಬ ಅರ್ಥದಲ್ಲಿ ಹೇಳಿಕೆ ಕೊಟ್ಟಿದ್ದು ಬಹಳ ನೋವಿನಿಂದ ಮಾತನಾಡಿದ್ದಾರೆ. ಇದರ ಬಗ್ಗೆ ಸೂಕ್ತ ತನಿಖೆ ಆಗಬೇಕೆಂದು ರಾಜಣ್ಣನವರೇ ಹೇಳಿದ್ದಾರೆ ಎಂದು ಗಮನ ಸೆಳೆದರು.

ಗೃಹ ಸಚಿವರು ಇದರ ಕುರಿತು ಮಾತನಾಡಿದ್ದಾರೆ. ಪಕ್ಷಾತೀತವಾಗಿ ಇದರ ಬಗ್ಗೆ ಮಾತನಾಡಿದ್ದಾರೆ. ಇದೊಂದು ಗಂಭೀರ ವಿಚಾರ ಎಂದು ವಿವರಿಸಿದರು. 48-49 ಜನರ ಮೇಲೆ ಹನಿಟ್ರ್ಯಾಪ್ ವಿಚಾರ ರಾಜ್ಯದ ಸದನದಲ್ಲಿ ಹಿಂದೆಂದೂ ಚರ್ಚೆ ಆಗಿರಲಿಲ್ಲ ಎಂದು ತಿಳಿಸಿದರು.

ಹನಿಟ್ರ್ಯಾಪ್ ವಿಚಾರದಲ್ಲಿ ಇಷ್ಟೊಂದು ಶಕ್ತಿ ಇರುವವರು ಯಾರೆಂದು ರಾಜಣ್ಣ ಅವರೇ ತಿಳಿಸಬೇಕಾಗುತ್ತದೆ. ಯಾರ್ಯಾರ ಬಗ್ಗೆ ಚರ್ಚೆ ನಡೆಯುತ್ತಿದೆ ಎಂದು ಉಲ್ಲೇಖಿಸುವುದಿಲ್ಲ. ಸ್ವತಃ ಒಬ್ಬ ಹಿರಿಯ ಸಚಿವರು ಇರುವ ವಿಷಯ ತಿಳಿಸಿದ್ದಾರೆ. ಇದು ಮುಖ್ಯಮಂತ್ರಿಗಳ ಗಮನಕ್ಕೂ ಹೋಗಿದೆ. ಬೇರೆ ಬೇರೆ ಪಕ್ಷಗಳ ರಾಷ್ಟ್ರೀಯ ನಾಯಕರ ಹನಿಟ್ರ್ಯಾಪ್ ಕುರಿತಂತೆ ಸ್ವತಃ ರಾಜಣ್ಣ ಅವರು ಹೇಳಿದ್ದಾರೆ. ಇದರ ಹಿಂದೆ ಯಾರಿದ್ದಾರೆ ಎಂದು ಅವರೇ ಬಹಿರಂಗ ಪಡಿಸಬೇಕು ಎಂದು ಆಗ್ರಹಿಸಿದರು.

ಮುನಿರತ್ನ ಅವರ ಮೇಲೆ ಆರೋಪ ಬಂದಿತ್ತು. ಅವರನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸುವ ಕೆಲಸ ಆಗಿದೆ. ಅವರು ಕೂಡ ಪ್ರಕರಣದ ಹಿನ್ನೆಲೆಯಲ್ಲಿ ತೇಜೋವಧೆಗೆ ಒಳಗಾಗಿದ್ದಾರೆ. ಅಂದಿನಿಂದ ಅವರು ಇದರ ಸಿಬಿಐ ತನಿಖೆಗೆ ಆಗ್ರಹಿಸಿದ್ದಾರೆ. ಇವತ್ತು ಕೂಡ ಸಿಬಿಐ ತನಿಖೆಗೆ ಒತ್ತಾಯಿಸಿದ್ದಾರೆ ಎಂದು ತಿಳಿಸಿದರು.

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist