ಮೀಸಲು ಧರ್ಮಾಧಾರಿತ ಅಲ್ಲ. ಅದು ಸಾಮಾಜಿಕ ನ್ಯಾಯದ ತಳಹದಿಯ ಮೇಲೆ ನಿಂತಿರಬೇಕು: ಕುಮಾರಸ್ವಾಮಿ

RELATED POSTS

ನವದೆಹಲಿ(thenewzmirror.com): ಮೀಸಲು ಧರ್ಮಾಧಾರಿತ ಅಲ್ಲ. ಅದು ಸಾಮಾಜಿಕ ನ್ಯಾಯದ ತಳಹದಿಯ ಮೇಲೆ ನಿಂತಿದೆ. ನಿಂತಿರಬೇಕು ಎನ್ನುವುದು ಜೆಡಿಎಸ್ ಅಚಲ ನಿಲುವು ಎಂದು ಜೆಡಿಎಸ್ ರಾಜ್ಯಾಧ್ಯಕ್ಷರು ಹಾಗೂ ಕೇಂದ್ರದ ಬೃಹತ್ ಕೈಗಾರಿಕೆ, ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಸ್ಪಷ್ಟ ಮಾತುಗಳಲ್ಲಿ ಹೇಳಿದ್ದಾರೆ.

ಮುಸ್ಲಿಮರಿಗೆ ಗುತ್ತಿಗೆ ಮೀಸಲಾತಿ ನಿಲುವು ಸ್ಪಷ್ಟಪಡಿಸಿರುವ ಜೆಡಿಎಸ್; ಜೆಡಿಎಸ್ – ಬಿಜೆಪಿ ಮೈತ್ರಿ ನಡುವೆ ಮೀಸಲಾತಿ ಬೆಂಕಿ ಹಚ್ಚಲು ಹೊರಟಿದ್ದವರಿಗೆ ಚೆಕ್ ಮೆಟ್ ಇಟ್ಟಿದೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕುಮಾರಸ್ವಾಮಿ, ಮುಸ್ಲಿಮರಿಗೆ ಕಾಂಗ್ರೆಸ್ ಸರಕಾರ.ಶೇ.4ರಷ್ಟು  ಗುತ್ತಿಗೆ ಮೀಸಲಾತಿ ನೀಡಿರುವುದರ ವಿರುದ್ಧದ ಹೋರಾಟದಲ್ಲಿ ಜೆಡಿಎಸ್ ಮತ್ತು ಬಿಜೆಪಿ ನಡುವೆ ಹೊಂದಾಣಿಕೆ ಇಲ್ಲ, ಗೊಂದಲವಿದೆ ಎನ್ನುವುದು ಸತ್ಯಕ್ಕೆ ದೂರ. ಕೆಲ ಪತ್ರಿಕೆ ಮತ್ತು ಸುದ್ದಿವಾಹಿನಿಗಳಲ್ಲಿ ವರದಿಯಾಗಿರುವ ವರದಿಗಳು ಸತ್ಯಕ್ಕೆ ದೂರ ಎಂದು ಕೇಂದ್ರ ಸಚಿವರು ಸ್ಪಷ್ಟಪಡಿಸಿದ್ದಾರೆ.

ವಿಧಾನಮಂಡಲ ಅಧಿವೇಶನ ಆರಂಭಕ್ಕೆ ಮೊದಲೇ ಬೆಂಗಳೂರಿನಲ್ಲಿ NDA ‘ಸಮನ್ವಯ ಸಮಿತಿ’ ಸಭೆ ನಡೆದು ಎಲ್ಲಾ ವಿಚಾರಗಳನ್ನೂ ಸಮಗ್ರವಾಗಿ ಚರ್ಚಿಸಲಾಗಿದೆ. ಸರಕಾರದ ವಿರುದ್ಧ ಹೋರಾಟದ ರೂಪುರೇಷೆ ರೂಪಿಸಲಾಗಿತ್ತು. ಆ ಸಭೆಯಲ್ಲಿ ಸ್ವತಃ ನಾನೂ ಭಾಗವಹಿಸಿದ್ದೆ ಎಂದು ಅವರು ಹೇಳಿದ್ದಾರೆ.

ಕಾಂಗ್ರೆಸ್ ಸರಕಾರವು ಕೇವಲ ಚುನಾವಣಾ ಸ್ವಾರ್ಥಕ್ಕೆ, ವೋಟ್ ಬ್ಯಾಂಕ್ ರಾಜಕೀಯಕ್ಕಾಗಿ ‘ಸಾಮಾಜಿಕ ನ್ಯಾಯದ ಆದರ್ಶ ಪರಿಕಲ್ಪನೆ’ಯಾದ ಮೀಸಲಾತಿ ವ್ಯವಸ್ಥೆಯನ್ನು ಹಾಳು ಮಾಡುತ್ತಿದೆ. ಮೀಸಲಾತಿಯನ್ನೇ ಓಲೈಕೆ ಅಸ್ತ್ರವನ್ನಾಗಿ ಮಾಡಿಕೊಂಡು ರಾಜ್ಯದ ಜನತೆಯ ದಿಕ್ಕು ತಪ್ಪಿಸುತ್ತಿದೆ. ರಾಷ್ಟ್ರದ ಉದ್ದಗಲಕ್ಕೂ ಕಾಂಗ್ರೆಸ್  ಮೀಸಲು ಅರಾಜಕತೆ ಸೃಷ್ಟಿಸುತ್ತಿದೆ ಎಂದು ಅವರು ನೇರ ಆರೋಪ ಮಾಡಿದ್ದಾರೆ.

ಜೆಡಿಎಸ್ – ಬಿಜೆಪಿ ಪಕ್ಷಗಳು ಈಗಾಗಲೇ  ಒಟ್ಟಾಗಿ ಅನೇಕ ಜನಪರ ಹೋರಾಟಗಳಲ್ಲಿ ಭಾಗಿಯಾಗಿವೆ, ಮುಂದೆಯೂ ಹೋರಾಡುತ್ತವೆ. ಈ ಬಗ್ಗೆ ರಾಜಿ ಪ್ರಶ್ನೆಯೇ ಇಲ್ಲ. ಶೈಕ್ಷಣಿಕ, ಆರ್ಥಿಕ, ಸಾಮಾಜಿಕವಾಗಿ ದುರ್ಬಲವಾಗಿರುವ ಎಲ್ಲಾ ಸಮುದಾಯಗಳಿಗೆ ಸಮಾನ ಅವಕಾಶಗಳು, ಸೌಲಭ್ಯಗಳು ಸಿಗಬೇಕು. ಆದರೆ, ಒಂದು ನಿರ್ದಿಷ್ಟ ಸಮುದಾಯದ ತುಷ್ಟೀಕರಣ, ಬಹು ಸಮುದಾಯಗಳ ತುಚ್ಚೀಕರಣ ನ್ಯಾಯ ಸಮ್ಮತವಲ್ಲ. ಇದು ಸಂವಿಧಾನಕ್ಕೆ ಎಸಗುವ ಅಪಚಾರ ಎಂದು ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೀಸಲು ಧರ್ಮಾಧಾರಿತ ಅಲ್ಲ. ಅದು ಸಾಮಾಜಿಕ ನ್ಯಾಯದ ತಳಹದಿಯ ಮೇಲೆ ನಿಂತಿದೆ. ನಿಂತಿರಬೇಕು ಎನ್ನುವುದು ಜೆಡಿಎಸ್ ಅಚಲ ನಿಲುವು ಎಂದಿರುವ ಅವರು, ತುಷ್ಟೀಕರಣ VS ತುಚ್ಚೀಕರಣ ನಡೆಯುತ್ತಿದೆ ಎಂದು ರಾಜ್ಯ ಸರ್ಕಾರದ ಕಾಲೆಳೆದಿದ್ದಾರೆ.

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist