ಬೆಂಗಳೂರು(www.thenewzmirror.com): ಕರ್ನಾಟಕ ವಿಧಾನ ಪರಿಷತ್ ಸಚಿವಾಲಯದ ವಿವಿಧ ವೃಂದಗಳ ಒಟ್ಟು 27 ಹುದ್ದೆಗಳಿಗೆ ನಡೆದ ಲಿಖಿತ ಪರೀಕ್ಷೆ ಅಂತಿಮ ಅರ್ಹತಾ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶನಿವಾರ ತನ್ನ ವೆಬ್ ಸೈಟ್ ನಲ್ಲಿ ಪ್ರಕಟಿಸಿದೆ.
ಅಭ್ಯರ್ಥಿಗಳು ಗಳಿಸಿದ ಅಂಕಗಳ ಸಮೇತ ಅರ್ಹತಾ ಪಟ್ಟಿಯನ್ನು ಪರಿಷತ್ತಿನ ಸಚಿವಾಲಯಕ್ಕೆ ಸೋಮವಾರ ರವಾನಿಸಲಾಗುತ್ತದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.
ಒಟ್ಟು ಏಳು ವೃಂದಗಳ ಈ ಹುದ್ದೆಗಳಿಗೆ ಮಾ.22ರಿಂದ 25ರವರೆಗೆ ಪರೀಕ್ಷೆ ನಡೆಸಲಾಗಿತ್ತು ಎಂದು ಅವರು ತಿಳಿಸಿದ್ದಾರೆ.