ದಕ್ಷಿಣಕನ್ನಡ(www.thenewzmirror.com): ಶ್ರೀ ಕ್ಷೇತ್ರ ಧರ್ಮಸ್ಥಳ ದೇವಳದಲ್ಲಿ ವಿಷು ಜಾತ್ರೆ ಪ್ರಯುಕ್ತ ವಿಶೇಷ ಪೂಜಾ-ಕೈಂಕರ್ಯಗಳು ನಡೆಯುವುದರಿಂದ ದೇವರ ದರ್ಶನ ಸಮಯದಲ್ಲಿ ವ್ಯತ್ಯಯವಾಗಲಿದೆ ಎಂದು ಧರ್ಮಸ್ಥಳ ದೇವಾಲಯ ಸಮಿತಿ ಮಾಹಿತಿ ನೀಡಿದೆ.

ದಿ.18-04-2025 ರಿಂದ 23-04-2025 ರವರೆಗೆ ಬೆಳಿಗ್ಗೆ 6:30ರಿಂದ 8:30ರವರೆಗೆ ಹೊರಾಂಗಣದಿಂದ ಮಾತ್ರ ದೇವರ ದರ್ಶನಕ್ಕೆ ಅವಕಾಶವಿದೆ. ಬೆಳಿಗ್ಗೆ 8:30ರ ಬಳಿಕ ಎಂದಿನಂತೆ ದೇವರ ದರ್ಶನ ನಡೆಯಲಿದೆ.ಸಂಜೆ 5:00 ಗಂಟೆಯಿಂದ ರಾತ್ರಿ 8:30 ಗಂಟೆಯ ವರೆಗೆ ಮಾತ್ರ ದೇವರ ದರ್ಶನಕ್ಕೆ ಅವಕಾಶವಿದೆ ಎಂದು ಪ್ರಕಟಣೆ ಮೂಲಕ ತಿಳಿಸಿದೆ.
ದಿ.22-04-2025 ರಂದು ಬೆಳಿಗ್ಗೆ 9:00 ಗಂಟೆಯ ಬಳಿಕ ದೇವರ ದರ್ಶನ ಪ್ರಾರಂಭವಾಗಲಿದೆ ಭಕ್ತಾಧಿಗಳು ಸಹಕರಿಸಬೇಕಾಗಿ ವಿನಂತಿ ಎಂದು ಮನವಿ ಮಾಡಿದೆ.