ಬಿಡುಗಡೆಯಾದ್ದು ನಕಲಿ ಜಾತಿಗಣತಿ ವರದಿ, ಅಸಲಿ ವರದಿ ಸಿಎಂ ಸಿದ್ದರಾಮಯ್ಯನವರ ಮನೆಯಲ್ಲಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ ಆರೋಪ

RELATED POSTS

ಬೆಂಗಳೂರು(www.thenewzmirror.com): ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಸರ್ಕಾರಕ್ಕೆ ಬರೆದ ಪತ್ರದ ಪ್ರಕಾರ, ಜಾತಿ ಗಣತಿ ವರದಿಯ ಮೂಲ ಪ್ರತಿ ಲಭ್ಯವಾಗಿಲ್ಲ. ಈಗ ಇರುವುದು ನಕಲಿ ವರದಿ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. 

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದ ಅಭಿವೃದ್ಧಿ ಬಗ್ಗೆ ಯೋಚಿಸದೆ ಜಾತಿ ಗಣತಿ ವರದಿ ಬಿಡುಗಡೆ ಮಾಡುತ್ತಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲಿ ಬಾಣಂತಿಯರು ಸಾಯುತ್ತಿದ್ದಾರೆ. ಒಂದು ರಸ್ತೆ ಕೂಡ ನಿರ್ಮಾಣವಾಗಿಲ್ಲ. ಪರಿಸ್ಥಿತಿ ಹೀಗಿರುವಾಗ ಜಾತಿ ಗಣತಿ ವರದಿ ಬಗ್ಗೆ ಸರ್ಕಾರ ಚಿಂತಿಸುತ್ತಿದೆ. ಕಾಂಗ್ರೆಸ್‌ನ ಸಚಿವರು ಇದನ್ನು ವೈಜ್ಞಾನಿಕ ಹಾಗೂ ಅಸಲಿ ಎಂದು ಹೇಳುತ್ತಿದ್ದಾರೆ. ಜಯಪ್ರಕಾಶ್‌ ಹೆಗ್ಡೆ ವರದಿ ಬಗ್ಗೆ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. 26-08-2021 ರಂದು ಸೀಲ್‌ ಮಾಡಿದ ಬಾಕ್ಸ್‌ ತೆರೆದಾಗ ವರದಿಯಲ್ಲಿ ಆಯೋಗದ ಹಿಂದಿನ ಅಧ್ಯಕ್ಷರ ಸಹಿ ಇಲ್ಲ ಎಂಬುದನ್ನು ಗಮನಿಸಲಾಗಿದೆ. ಹಸ್ತಪ್ರತಿ ಅಥವಾ ಮೂಲ ವರದಿ ಲಭ್ಯವಿಲ್ಲ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.  

ಹಿಂದಿನ ಅಧ್ಯಕ್ಷ ಕಾಂತರಾಜು ಸಹಿ ಹಾಕದೆ ಓಡಿಹೋಗಿದ್ದಾರೆ. ಮೂಲ ವರದಿ ಸಿಎಂ ಸಿದ್ದರಾಮಯ್ಯನವರ ಮನೆಯಲ್ಲಿದೆ. ಬೇಕಾದ ಜಾತಿಗಳಿಗೆ ಪ್ರಾಮುಖ್ಯತೆ ನೀಡಲಾಗಿದೆ ಎಂದು ಸಚಿವ ಸಂಪುಟದಲ್ಲಿ ಗಲಾಟೆಯಾಗಿದೆ. ಯಾರ ಮನೆಗೂ ಹೋಗದೆ ಸಮೀಕ್ಷೆ ಮಾಡಲಾಗಿದೆ. ಎಲ್ಲರೂ ಸಿದ್ದರಾಮಯ್ಯನವರ ಮನೆ, ಕಚೇರಿಯಲ್ಲಿ ಕುಳಿತು ವರದಿ ತಯಾರಿಸಿದ್ದಾರೆ. 150 ಕೋಟಿ ರೂ. ಎಲ್ಲಿ ಹೋಗಿದೆ ಎಂದು ಸರ್ಕಾರ ತಿಳಿಸಲಿ ಎಂದು ಆಗ್ರಹಿಸಿದರು. 

ನ್ಯಾಷನಲ್‌ ಹೆರಾಲ್ಡ್‌ ಹಗರಣ:

ಕಾಂಗ್ರೆಸ್‌ನ ಗಾಂಧಿ ಕುಟುಂಬದವರು ನ್ಯಾಷನಲ್‌ ಹೆರಾಲ್ಡ್‌ ಪತ್ರಿಕೆಯನ್ನು 2008 ರಲ್ಲಿ ಮುಚ್ಚಿಹಾಕಿದ್ದರು. ಆ ಸಂಸ್ಥೆಗೆ ವಿವಿಧೆಡೆ ಎರಡೂವರೆ ಸಾವಿರ ಕೋಟಿ ರೂ. ಆಸ್ತಿ ಇತ್ತು. ಆ ಸಂಸ್ಥೆಯನ್ನೇ ಯಂಗ್‌ ಇಂಡಿಯಾ ಸಂಸ್ಥೆಯಾಗಿ ಬದಲಿಸಿ ಚಾರಿಟೇಬಲ್‌ ಉದ್ದೇಶ ಎಂದು ತೋರಿಸಲಾಯಿತು. ಆದರೆ ಯಾವುದೇ ಸಾಮಾಜಿಕ ಕಾರ್ಯ ಮಾಡಲಿಲ್ಲ. ಗಾಂಧಿ ಕುಟುಂಬದಲ್ಲೇ ಎರಡು ಷೇರಿನಂತೆ ಒಟ್ಟು ಶೇ.38 ರಷ್ಟು ಷೇರು ಪಡೆಯಲಾಯಿತು. ಕೇವಲ 50 ಲಕ್ಷ ರೂ. ಹೂಡಿಕೆ ಮಾಡಿ ಎರಡೂವರೆ ಸಾವಿರ ಕೋಟಿ ರೂ. ಆಸ್ತಿಯನ್ನು ಗಾಂಧಿ ಕುಟುಂಬ ಪಡೆದಿದೆ. ಒಟ್ಟು 5,000 ಜನರು ಷೇರುದಾರರು ಇದ್ದರೂ, ಅವರು ಯಾರು ಎಂದು ಪತ್ತೆಯಾಗಿಲ್ಲ ಎಂದರು. 

ಇದು ಸ್ವಾತಂತ್ರ್ಯ ಹೋರಾಟಗಾರರು ಆರಂಭಿಸಿದ ಪತ್ರಿಕೆಯೇ ಹೊರತು ಕಾಂಗ್ರೆಸ್‌ ಪಕ್ಷದ ಪತ್ರಿಕೆಯಲ್ಲ. ಜನದ ಧ್ವನಿಯಾಗಬೇಕಾದ ಪತ್ರಿಕೆ ಒಂದು ಕುಟುಂಬದ ಸ್ವತ್ತಾಗಿದೆ. ಈಗ ಕೋರ್ಟ್‌ ಕೂಡ ಈ ಪ್ರಕರಣವನ್ನು ವಜಾ ಮಾಡಿಲ್ಲ. ಇದು ಸರ್ಕಾರದ ಆಸ್ತಿಯೇ ಹೊರತು ಕಾಂಗ್ರೆಸ್‌ ನಾಯಕರ ಆಸ್ತಿಯಲ್ಲ. ಕಾಂಗ್ರೆಸ್‌ ಇದರ ವಿರುದ್ಧ ಹೋರಾಟ ಮಾಡುವುದು ಬೂಟಾಟಿಕೆ ಎಂದು ದೂರಿದರು. 

ಪಿಎಸ್‌ಐ ಪರಶುರಾಮ್‌ ಅವರ ಪತ್ನಿ ಈಗ ಸಂಕಷ್ಟಲ್ಲಿದ್ದಾರೆ. ಸರ್ಕಾರಿ ಕೆಲಸ ಕೊಡುತ್ತೇವೆಂದು ಹೇಳಿ ಸರ್ಕಾರ ಏನೂ ಮಾಡಿಲ್ಲ. ಈಗ ಆ ಪ್ರಕರಣಕ್ಕೆ ಬಿ ರಿಪೋರ್ಟ್‌ ನೀಡಲಾಗಿದೆ. ವರ್ಗಾವಣೆಯ ಕಿರುಕುಳದಿಂದಲೇ ಅವರು ಸತ್ತಿದ್ದರು. ಆದರೆ ಸರ್ಕಾರ ಈ ಸಾವಿಗೆ ನ್ಯಾಯ ನೀಡಿಲ್ಲ ಎಂದರು. 

ಸಿಇಟಿ ಪರೀಕ್ಷೆಯಲ್ಲಿ ಒಬ್ಬ ಬ್ರಾಹ್ಮಣ ವಿದ್ಯಾರ್ಥಿಯ ಜನಿವಾರ ಕತ್ತರಿಸಿ ಬಿಸಾಡಲಾಗಿದೆ. ಸಾವಿರಾರು ವರ್ಷಗಳಿಂದ ನಂಬಿಕೊಂಡು ಬಂದ ನಂಬಿಕೆಯನ್ನೇ ಸರ್ಕಾರ ಕಿತ್ತುಹಾಕಿದೆ. ಲಿಂಗಾಯತರ ಶಿವದಾರವನ್ನೂ ಕತ್ತರಿಸಿದ್ದಾರೆ. ಹಿಜಾಬ್‌ ಬಗ್ಗೆ ಪ್ರಶ್ನೆ ಮಾಡಿದ್ದಾಗ ಅದನ್ನು ಕಾಂಗ್ರೆಸ್‌ ನಾಯಕರು ಸಮರ್ಥಿಸಿಕೊಂಡಿದ್ದರು. ಬಟ್ಟೆಯೊಳಗೆ ಏನು ಬೇಕಾದರೂ ಬಚ್ಚಿಟ್ಟುಕೊಳ್ಳಬಹುದು. ಆದರೆ ಜನಿವಾರದಲ್ಲಿ ಏನೂ ಅಡಗಿಸಿಕೊಳ್ಳಲಾಗುವುದಿಲ್ಲ. ಇದರ ಜೊತೆಗೆ ತಾಳಿ, ಓಲೆಗೂ ಕೈ ಹಾಕಿದ್ದಾರೆ ಎಂದು ದೂರಿದರು.

ಹಿಂದೂಗಳು ಕುಂಕುಮ ಇಟ್ಟುಕೊಳ್ಳಲು, ಜನಿವಾರ ಹಾಕಿಕೊಳ್ಳಲು ಅವಕಾಶವಿಲ್ಲ. ಹಿಜಾಬ್‌ ಹಾಕಿಕೊಂಡವರನ್ನು ತಪಾಸಣೆ ಮಾಡುವುದಿಲ್ಲ. ಹಿಂದೂಗಳ ಮೇಲೆ ಸಿಎಂ ಸಿದ್ದರಾಮಯ್ಯನವರಿಗೆ ಕೋಪ ಇದೆ. ಈ ಸರ್ಕಾರ ಹಿಂದೂಗಳನ್ನು ದಮನ ಮಾಡುತ್ತಿದೆ. ಈ ಮೂಲಕ ವಿಕೃತ ಸಂತೋಷ ಕಂಡುಕೊಳ್ಳುತ್ತಿದೆ. ಇದನ್ನು ಜನರು ಅರ್ಥ ಮಾಡಿಕೊಳ್ಳಲಿ ಎಂದರು.

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist