ರಾಹುಲ್ ಗಾಂಧಿ ಜತೆ ಚರ್ಚೆ ಮಾಡಿ ಸಚಿವ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿ ಮಂಡಿಸಿದ್ದೇವೆ: ಸಿಎಂ

RELATED POSTS

ಬೆಳಗಾವಿ(www.thenewzmirror.com):ಜಾತಿಗಣತಿ ಕುರಿತು ರಾಹುಲ್ ಗಾಂಧಿಯವರಿಗೆ ನಾವು ಪತ್ರ ಬರೆದಿಲ್ಲ ಆದರೆ ಅವರೊಂದಿಗೆ ಚರ್ಚೆ ಮಾಡಿ ಸಚಿವ ಸಂಪುಟ ಸಭೆಯಲ್ಲಿ ಸಮೀಕ್ಷೆಯ ವರದಿಯನ್ನು ಮಂಡಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಬೆಳಗಾವಿಯ ಸಾಂಭ್ರಾ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ ಮೂಲ ಪ್ರತಿ ಮುಖ್ಯಮಂತ್ರಿಗಳ ಬಳಿಯಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಮತ್ತೊಮ್ಮೆ ಹಾಸ್ಯಾಸ್ಪದ ಹೇಳಿಕೆ ನೀಡಿದ್ದಾರೆ. ಅವರು ಯಾವತ್ತಾದರೂ ಸತ್ಯವನ್ನು ಹೇಳಿದ್ದಾರೆಯೇ? ಮೂಲ ಪ್ರತಿ ನನ್ನ ಬಳಿಯಿರಲು ಹೇಗೆ ಸಾಧ್ಯ? ರಾಹುಲ್ ಗಾಂಧಿಯವರಿಗೆ ನಾವು ಪತ್ರ ಬರೆದಿಲ್ಲ ಆದರೆ ಅವರೊಂದಿಗೆ ಚರ್ಚೆ ಮಾಡಿ ಸಚಿವ ಸಂಪುಟ ಸಭೆಯಲ್ಲಿ ಸಮೀಕ್ಷೆಯ ವರದಿಯನ್ನು ಮಂಡಿಸಿದ್ದೇವೆ ಎಂದರು.

ಸಚಿವ ಸಂಪುಟ ಸಭೆಯಲ್ಲಿ ಯಾರೂ ಈ ಬಗ್ಗೆ ವಿರೋಧ ವ್ಯಕ್ತಪಡಿಸಿ, ಜೋರಾಗಿ ಮಾತನಾಡಿಲ್ಲ. ಸಮೀಕ್ಷೆಯನ್ನು ಓದಿಕೊಂಡು ಅಭಿಪ್ರಾಯಗಳನ್ನು ತಿಳಿಸುವಂತೆ ಸೂಚಿಸಲಾಗಿದ್ದು, ಸಚಿವರು ಅಭಿಪ್ರಾಯ ತಿಳಿಸಿದ ನಂತರ ಪುನ: ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಿ ಅಂತಿಮ ತೀರ್ಮಾನಕ್ಕೆ ಬರಲಾಗುವುದು ಎಂದರು.

ಯಾವ ಜಾತಿಗೂ ಅನ್ಯಾಯವಾಗಬಾರದು ಎನ್ನುವುದು ಸರ್ಕಾರದ ಉದ್ದೇಶ. ಇದು ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ. ಸಂವಿಧಾನ ಜಾರಿಯಾಗಿ 75 ವರ್ಷಗಳಾಗಿದ್ದರೂ ಬಡವ ಬಡವನಾಗಿಯೇ ಉಳಿಯಬೇಕೆ? ಸಮಾನತೆ ಬೇಡವೇ, ಜಾತಿಗೆ ಅಂಟಿಕೊಂಡೇ ಇರಬೇಕೆ? ಎಂದು ಪ್ರಶ್ನಿಸಿದರು.

ಹಿಂದುಳಿದವರಿಗೆ, ಮುಸ್ಲಿಂಮರಿಗೆ ಮಾತ್ರವಲ್ಲದೆ ಎಲ್ಲಾ ಧರ್ಮದ, ಎಲ್ಲಾ ಜಾತಿಯ ಬಡವರಿಗೆ ಶಿಕ್ಷಣ ಸಿಗಬೇಕು, ಸಾಮಾಜಿಕ ಆರ್ಥಿಕ ಶಕ್ತಿ ತುಂಬಬೇಕು. ಇದೇ ನಮ್ಮ ಗುರಿ. ಇದು ಸಾಮಾಜಿಕ, ಶೈಕ್ಷಣಿಕ ಗಣತಿಯ ಆಶಯ ಎಂದರು.

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist