ಕಾಂಗ್ರೆಸ್ ಸರಕಾರ ಜನರ ಪಾಲಿಗೆ ಬದುಕಿದ್ದೂ ಸತ್ತಂತಿದೆ: ಬಿ.ವೈ.ವಿಜಯೇಂದ್ರ

RELATED POSTS

ದಾವಣಗೆರೆ(www.thenewzmirror.com): ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರಕಾರವು ಜನರ ಪಾಲಿಗೆ ಬದುಕಿದ್ದೂ ಸತ್ತಂತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಟೀಕಿಸಿದ್ದಾರೆ.

ಜನಾಕ್ರೋಶ ಯಾತ್ರೆ ಸಂಬಂಧ ಇಲ್ಲಿ ಏರ್ಪಡಿಸಿದ್ದ ಬೃಹತ್ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ಎರಡು ವರ್ಷಗಳಲ್ಲಿ ಈ ಸರಕಾರ ಬಂದ ಮೇಲೆ ಬೆಲೆ ಏರಿಕೆ ಗರಿಷ್ಠ ಮಟ್ಟಕ್ಕೆ ತಲುಪಿದೆ. ರೈತರಿಗೆ ತೊಂದರೆ ಕೊಡುತ್ತಿದ್ದಾರೆ. ಬೆಲೆ ಏರಿಕೆ ಪರಿಣಾಮವಾಗಿ ಬಡಜನರು ತತ್ತರಿಸಿ ಹೋಗಿದ್ದಾರೆ. ಯಾವುದೇ ಅಭಿವೃದ್ಧಿ ಕಾರ್ಯಗಳಿಲ್ಲ; ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ ಪರಿಸ್ಥಿತಿ ಇದೆ ಎಂದು ಆರೋಪಿಸಿದರು.

ಅಭಿವೃದ್ಧಿ ಆಗುತ್ತಿಲ್ಲ; ಒಂದು ತೊಟ್ಟು ವಿಷ ಕೊಡಿ; ಆತ್ಮಹತ್ಯೆ ಮಾಡಿಕೊಳ್ಳಬೇಕು ಎಂದು ಬಿಜೆಪಿ ಶಾಸಕರು ಹೇಳುತ್ತಿಲ್ಲ. ಆಡಳಿತ ಪಕ್ಷದ ಹಿರಿಯ ಶಾಸಕ ರಾಜು ಕಾಗೆಯವರು ಹೇಳುತ್ತಿದ್ದಾರೆ. ಬಿ.ಆರ್.ಪಾಟೀಲ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾರೆ. ಆರ್.ವಿ.ದೇಶಪಾಂಡೆ ಅವರಂಥ ಹಿರಿಯ ಶಾಸಕರೂ ಅಭಿವೃದ್ಧಿಗೆ ಹಣ ಕೊಡಲು ಸಾಧ್ಯ ಆಗುತ್ತಿಲ್ಲ. ಗ್ಯಾರಂಟಿಗಳಿಂದ ರಾಜ್ಯದಲ್ಲಿ ಅಭಿವೃದ್ಧಿ ಕೆಲಸ ಮಾಡಲಾಗುತ್ತಿಲ್ಲ ಎಂದು ಹೇಳಿದ್ದಾಗಿ ಗಮನ ಸೆಳೆದರು.

ಸಿದ್ದರಾಮಯ್ಯನವರು ಕೇವಲ ಮುಸಲ್ಮಾನರ ಮುಖ್ಯಮಂತ್ರಿಯಂತೆ ವರ್ತಿಸುತ್ತಿದ್ದಾರೆ. ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ. ಅದಕ್ಕಾಗಿ ಜನಾಕ್ರೋಶ ಯಾತ್ರೆ ಮಾಡುತ್ತಿರುವುದಾಗಿ ವಿವರಿಸಿದರು. ಅಹಿಂದ ಹೆಸರು ಹೇಳಿಕೊಂಡು ಅಧಿಕಾರಕ್ಕೆ ಬಂದ ಕಾಂಗ್ರೆಸ್ಸಿಗರು, ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದ ಸಮುದಾಯಗಳನ್ನು ಮರೆತು ಕೇವಲ ಅಲ್ಪಸಂಖ್ಯಾತರ ಹಿಂದೆ ಹೊರಟಿದ್ದಾರೆ. ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ಸಾವಿರಾರು ಕೋಟಿ ಹಣವನ್ನು ದುರುಪಯೋಗ ಮಾಡಿಕೊಂಡಿದ್ದಾರೆ. ಇದು ಖಂಡನೀಯ ಎಂದು ತಿಳಿಸಿದರು.

50ಕ್ಕೂ ಜನೋಪಯೋಗಿ ವಸ್ತುಗಳ ಬೆಲೆ ಏರಿಸಿದ್ದಾರೆ. ಪೆಟ್ರೋಲ್ ಬೆಲೆ 3.50 ರೂ. ಏರಿಸಿದ್ದರೆ ತೆರಿಗೆ ಮೂಲಕ ಡೀಸೆಲ್ ಬೆಲೆ 5.50 ರೂ. ಹೆಚ್ಚಿಸಿದ್ದಾರೆ. ಸ್ಟಾಂಪ್ ಡ್ಯೂಟಿ ಹೆಚ್ಚಿಸಿದ್ದಾರೆ. ಹಾಲಿನ ಬೆಲೆ 9 ರೂ. ಜಾಸ್ತಿ ಮಾಡಿದ್ದಾರೆ. ಬೆಲೆ ಏರಿಕೆಯಿಂದ ಜನರು ಪರದಾಡುವಂತಾಗಿದೆ. ರೈತರೂ ತೊಂದರೆಗೆ ಸಿಲುಕಿದ್ದಾರೆ ಎಂದು ವಿವರಿಸಿದರು. ಈ ಕಾರ್ಯಕ್ರಮಕ್ಕೆ ದೊಡ್ಡ ಸಂಖ್ಯೆಯಲ್ಲಿ ಬಂದ ಕಾರ್ಯಕರ್ತರು ಮತ್ತು ಮುಖಂಡರ ಪ್ರೀತಿ ವಿಶ್ವಾಸಕ್ಕೆ ಋಣಿ ಆಗಿರುವುದಾಗಿ ಇದೇವೇಳೆ ತಿಳಿಸಿದರು.

ಅಲಿಬಾಬ ಮತ್ತು 40 ಕಳ್ಳರ ಕಥೆಯ ತದ್ರೂಪವೇ ಸಿದ್ದರಾಮಯ್ಯರ ತಂಡ: 

ಸಿದ್ದರಾಮಯ್ಯ ಮತ್ತು ಅವರ ಸಚಿವ ಸಂಪುಟವು ಅಲಿಬಾಬ ಮತ್ತು 40 ಕಳ್ಳರ ಕಥೆಯ ತದ್ರೂಪ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಅವರು ಇಂದು ಆರೋಪಿಸಿದರು.ಜನಾಕ್ರೋಶ ಯಾತ್ರೆ ಸಂಬಂಧ ಇಲ್ಲಿ ಏರ್ಪಡಿಸಿದ್ದ ಬೃಹತ್ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು, ಯಾವುದೇ ರಾಜಕೀಯ ಪಕ್ಷಗಳು ಜನರ ಪರವಾಗಿ ಅಧಿಕಾರದಲ್ಲಿದ್ದಾಗ ಮಾತ್ರ ಕೆಲಸ ಮಾಡುವುದಲ್ಲ; ಪ್ರತಿಪಕ್ಷದಲ್ಲಿ ಇದ್ದಾಗ ಕೂಡ ಕೆಲಸ ಮಾಡಿದರೆ ಮಾತ್ರ ರಾಜಕೀಯ ಪಕ್ಷವೆಂದು ಅನಿಸಿಕೊಳ್ಳುತ್ತದೆ ಎಂದು ತಿಳಿಸಿದರು.

ನಮಗೆ ಇವತ್ತು ಅಧಿಕಾರ ಇಲ್ಲ; ಸಿದ್ದರಾಮಯ್ಯರವರು ನಡದಿದ್ದೇ ದಾರಿ ಎಂದು ನಾವು ಸುಮ್ಮನೆ ಕುಳಿತುಕೊಳ್ಳುಕೊಂಡರೆ ನೀವೆಲ್ಲರೂ ಕಣ್ಣೀರಿನಲ್ಲಿ ಕೈತೊಳೆಯುವ ಕೆಲಸವಾಗುತ್ತದೆ. ಅದಕ್ಕಾಗಿ ವಿಜಯೇಂದ್ರರ ನೇತೃತ್ವದಲ್ಲಿ, ನಮ್ಮೆಲ್ಲ ಹಿರಿಯ ನಾಯಕರು ನಾವೆಲ್ಲ ಈ ಜನಾಕ್ರೋಶ ಯಾತ್ರೆಯನ್ನು ಪ್ರಾರಂಭಿಸಿದ್ದೇವೆ. ನೀವುಗಳು ನಮ್ಮ ಜೊತೆ ಬನ್ನಿ; ರಾಜ್ಯದಲ್ಲಿ ಈ ಕಾಂಗ್ರೆಸ್ ಸರ್ಕಾರಕ್ಕೆ ತಕ್ಕ ಪಾಠವನ್ನು ಕಲಿಸಬೇಕೆಂದು ನಿಶ್ಚಯ ಮಾಡಿದ್ದೇವೆ ಎಂದರು.

 ಇವತ್ತಿನ ಸರ್ಕಾರ ಹೇಗಿದೆ ಎನ್ನುವುದು ನಿಮಗೆ ಚೆÀನ್ನಾಗಿ ಗೊತ್ತಿದೆ. ಅಲಿಬಾಬ ಮತ್ತು 40 ಕಳ್ಳರು ಕಥೆಯನ್ನು ನೀವು ಕೇಳಿದ್ದೀರಿ ಅದರ ತದ್ರೂಪವೇ ಸಿದ್ದರಾಮಯ್ಯ ನವರ 40 ಡೋಂಗಿ ಮಂತ್ರಿಗಳು ಈ ರಾಜ್ಯದಲ್ಲಿರುವವರು ಎಂದು ಟೀಕಿಸಿದರು. ಸರ್ಕಾರದ ಖಜಾನೆಯನ್ನು ಲೂಟಿ ಹೊಡೆದಾಯಿತು; ಕೊಳ್ಳೆ ಹೊಡೆದಾಯಿತು. ಸರ್ಕಾರದ ಖಜಾನೆ ಖಾಲಿಯಾಯಿತು. ಇನ್ನೆಲ್ಲಿಂದ ಕಳ್ಳತನ ಮಾಡೋದು? ಎಲ್ಲ ಜನರ ಕಿಸೆಗೆ ಕೈಹಾಕೋಣ ಅಲ್ಲಿಂದ ಕಳ್ಳತನ ಮಾಡೋಣ ಎಂದು ಹೇಳಿ ಬೆಲೆ ಏರಿಕೆಯನ್ನು ಮಾಡಿ ಖಜಾನೆ ತುಂಬಿ ಅಲ್ಲಿಂದ ಲೂಟಿ ಮಾಡುವ ಕೆಲಸ ಕಾರ್ಯಗಳನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ ಎಂದು ದೂರಿದರು.

ಕಾಂಗ್ರೆಸ್ ಸರ್ಕಾರವು 48 ಜನೋಪಯೋಗಿ ವಸ್ತುಗಳ ಮೇಲೆ ತೆರಿಗೆ ಹಾಕಿದೆ. ತೆರಿಗೆ ಹಾಕದೆ ಇರುವ ಎರಡು ಸ್ವತ್ತುಗಳು ಅಂದರೆ  ಸಮುದ್ರ ತೆರೆಗಳು ಮತ್ತು ಉಸಿರಾಡುವ ಗಾಳಿ. ಅವುಗಳಿಗೆ ತೆರಿಗೆ ವಿಧಿಸಿರುವುದಿಲ್ಲ ಎಂದು ವ್ಯಂಗ್ಯವಾಡಿದರು. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಜನರೇ ಮಾಲೀಕರು ಆದಕಾರಣ ನಾವು ನಿಶ್ಚಯ ಮಾಡಿದ್ದೇವೆ. ವಿಧಾನಸಭೆಯಲ್ಲಿ ಉತ್ತರ ಕೊಡದ ಅಲಿಬಾಬ ಮತ್ತು 40 ಕಳ್ಳರೇ ನಮಗೆ ನಮ್ಮ ಜನರಿದ್ದಾರೆ. ನಾವು ಅವರ ಆರ್ಶೀವಾದಕ್ಕಾಗಿ ವಿಜಯೇಂದ್ರ ರವರ ನೇತೃತ್ವದಲ್ಲಿ ಅವರ ಬಳಿ ನಾವು ಹೋಗುತ್ತೇವೆ ಎಂದು ಎಚ್ಚರಿಸಿದರು.

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist