ವಿಶೇಷ ವರ್ಗ, ಕ್ಲಾಸ್‌ ʼಬಿʼ ಯಿಂದ ʼಝೆಡ್‌ʼ ಸಿಇಟಿ: ಮೇ 5ರಿಂದ ದಾಖಲೆ ಪರಿಶೀಲನೆ..!

RELATED POSTS

ಬೆಂಗಳೂರು(www.thenewzmirror.com): ಕ್ರೀಡೆ, ಎನ್‌ಸಿಸಿ, ರಕ್ಷಣೆ ಸೇರಿದಂತೆ ಇತರ ವಿಶೇಷ ವರ್ಗ ಹಾಗೂ ಕ್ಲಾಸ್‌ ‘ಬಿ’ ಯಿಂದ ‘ಝೆಡ್‌’ ವರೆಗೆ ಸಿಇಟಿ ಅರ್ಜಿಯಲ್ಲಿ ಕ್ಲೇಮ್‌ ಮಾಡಿರುವ ಅಭ್ಯರ್ಥಿಗಳ ದಾಖಲೆ ಪರಿಶೀಲನೆ ಮೇ 5ರಿಂದ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಚೇರಿಯಲ್ಲಿ ಮಾಡಲಾಗುತ್ತದೆ. ಇದಕ್ಕಾಗಿ ಕೆಇಎ ವೆಬ್‌ಸೈಟ್‌ನಲ್ಲಿ ತಮಗೆ ಬೇಕಾದ ದಿನಾಂಕ ಮತ್ತು ಸಮಯವನ್ನು ಮುಂಗಡವಾಗಿ ಕಾಯ್ದಿರಿಸಿಕೊಳ್ಳಲು ಒಂದೆರಡು ದಿನಗಳಲ್ಲಿ ಲಿಂಕ್ ಬಿಡುಗಡೆ ಮಾಡಲಾಗುವುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್‌.ಪ್ರಸನ್ನ ತಿಳಿಸಿದ್ದಾರೆ.

ಈ ಹಿಂದೆ ಸಿಇಟಿ ರಾಂಕ್‌ ಬಂದ ನಂತರ ದಾಖಲೆಗಳ ಪರಿಶೀಲನೆ ಮಾಡಲಾಗುತ್ತಿತ್ತು. ಆದರೆ, ಈ ಬಾರಿ ಅದಕ್ಕೂ ಮೊದಲೇ ದಾಖಲೆ ಪರಿಶೀಲನೆ ಮಾಡಿಕೊಂಡು, ಫಲಿತಾಂಶ ನಂತರ ಆಪ್ಷನ್‌ ಎಂಟ್ರಿಗೆ ಅವಕಾಶ ನೀಡಲು ಯೋಜಿಸಲಾಗಿದೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ವಿಶೇಷ ವರ್ಗ ಮತ್ತು ವಿವಿಧ ಕ್ಲಾಸ್‌ ಗಳ ಅಡಿ ಸುಮಾರು 10 ಸಾವಿರ ಮಂದಿ ಅರ್ಜಿ ಸಲ್ಲಿಸಿದ್ದು, ಅವರೆಲ್ಲರೂ ಹತ್ತು ದಿನಗಳ ಕಾಲ ದಾಖಲೆ ಪರಿಶೀಲನೆ ಮಾಡಿಸಿಕೊಂಡು, ಅರ್ಹತೆ ಪಡೆಯಲು ಅವಕಾಶ ನೀಡಲಾಗಿದೆ. ಈ ಸಂದರ್ಭದಲ್ಲಿ ಕ್ಲೇಮ್‌ಗೆ ಅನುಸಾರವಾಗಿ ಮೂಲ ದಾಖಲೆಗಳ ಸಮೇತ ಬಂದು ಪರಿಶೀಲನೆ ಮಾಡಿಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದ್ದಾರೆ.

ಯಾರು ಯಾವ ದಿನಾಂಕದಂದು ಬರಲು ದಿನಾಂಕ ಮತ್ತು ಸಮಯ ನಿಗದಿ ಮಾಡಿಕೊಳ್ಳುತ್ತಾರೊ ಅಂದು ಬಂದು ದಾಖಲೆ ಪರಿಶೀಲನೆ ಮಾಡಿಸಿಕೊಳ್ಳಬಹುದು. ದಿನಕ್ಕೆ ಸಾವಿರ ಮಂದಿಯ ದಾಖಲೆ ಪರಿಶೀಲನೆ ಮಾಡಲು ಯೋಜನೆ ರೂಪಿಸಲಾಗಿದೆ ಎಂದು ಹೇಳಿದರು.

ಎಡಿಟ್‌ ನಂತರ ಪರಿಶೀಲನೆ ಮಾಡಿಸಿಕೊಳ್ಳಿ:

ಪರಿಶೀಲನೆ ನಂತರ ಅರ್ಜಿಯಲ್ಲಿನ ತಪ್ಪುಗಳನ್ನು ತಿದ್ದುಪಡಿ ಮಾಡಿಕೊಂಡಿರುವವರು ಪುನಃ ತಮ್ಮ ಅರ್ಜಿಯನ್ನು ಪರಿಶೀಲನೆಗೆ ಒಳಪಡಿಸಬೇಕು. ಇಲ್ಲದಿದ್ದರೆ, ತಮ್ಮ ತಿದ್ದುಪಡಿ ಅಥವಾ ಕ್ಲೇಮ್‌ಗಳು ಊರ್ಜಿತವಾಗುವುದಿಲ್ಲ ಎಂದೂ ಅವರು ತಿಳಿಸಿದ್ದಾರೆ.

ಮೇ 2ರವರೆಗೆ ಅರ್ಜಿಯಲ್ಲಿನ ದೋಷಗಳನ್ನು ಸರಿಪಡಿಸಿಕೊಳ್ಳಲು ಬಿಟ್ಟಿದ್ದು, ಇದುವರೆಗೂ 16 ಸಾವಿರಕ್ಕೂ ಹೆಚ್ಚು ಮಂದಿ ತಿದ್ದುಪಡಿ ಮಾಡಿಕೊಂಡಿದ್ದಾರೆ. ಇವರೆಲ್ಲರೂ ಮತ್ತೊಮ್ಮೆ ತಮ್ಮ ಸಂಬಂಧಪಟ್ಟ ಪಿಯು ಕಾಲೇಜು ಅಥವಾ ಹತ್ತಿರದ ಸರ್ಕಾರಿ ಪಿಯು ಕಾಲೇಜಿಗೆ ಹೋಗಿ ತಮ್ಮ ಅರ್ಜಿಗಳನ್ನು ಪರಿಶೀಲನೆ ಮಾಡಿಸಿಕೊಳ್ಳಬೇಕು ಎಂದು ಅವರು ಸಲಹೆ‌ ನೀಡಿದ್ದಾರೆ.

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist