ಹೆಚ್ಚುವರಿ 1 ಲಕ್ಷ ಮೆಟ್ರಿಕ್ ಟನ್ ಜೋಳ ಖರೀದಿಸಲು ತೀರ್ಮಾನ: ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ

RELATED POSTS

ಬೆಂಗಳೂರು(www.thenewzmirror.com):ಸರ್ಕಾರದ ವತಿಯಿಂದ ಬೆಂಬಲ ಬೆಲೆ ಯೋಜನೆಯಡಿ 2024-2025 ನೇ ಸಾಲಿನಲ್ಲಿ  ಒಂದು ಲಕ್ಷ ಕ್ವಿಂಟಾಲ್  (LMT) ಜೋಳವನ್ನು ರೈತರಿಂದ ನೇರವಾಗಿ ಖರೀದಿ ಕೇಂದ್ರಗಳ ಮೂಲಕ ಖರೀದಿಸಲು ತೀರ್ಮಾನಿಸಿದ್ದು, ಪ್ರತಿ ಕ್ವಿಂಟಾಲ್ ಜೋಳದ ದರ ಹೈಬ್ರೀಡ್ 3371 ಮಾಲ್ದಂಡಿ ಜೋಳಕ್ಕೆ ಪ್ರತಿ ಕ್ವಿಂಟಾಲ್ ಗೆ  3421 ಧರವನ್ನು ನಿಗಧಿಪಡಿಸಲಾಗಿದೆ ಎಂದು ಆಹಾರ ನಾಗರಿಕ‌ ಸರಬರಾಜು ಮತ್ತು  ಗ್ರಾಹಕ ವ್ಯವಹಾರಗಳ ಸಚಿವ ಕೆ.ಹೆಚ್.ಮುನಿಯಪ್ಪ ತಿಳಿಸಿದ್ದಾರೆ.

ಆಹಾರ ನಾಗರಿಕ‌ ಸರಬರಾಜು ಮತ್ತು  ಗ್ರಾಹಕ ವ್ಯವಹಾರಗಳ ಸಚಿವ ಕೆ.ಹೆಚ್.ಮುನಿಯಪ್ಪ ಮತ್ತು ವಸತಿ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಜಮೀರ್ ಅಹ್ಮದ್ ಖಾನ್ ರವರ ನೇತೃತ್ವದಲ್ಲಿ ಅಧಿಕಾರಿಗಳೊಂದಿಗೆ ವಿಧಾನ ಸೌಧದದಲ್ಲಿ ಸಭೆ ನಡೆಯಿತು.ಈ ವೇಳೆ ಬಳ್ಳಾರಿ ಜಿಲ್ಲೆಯ ರೈತರ ನಿಯೋಗವು ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಮುನಿಯಪ್ಪ,ಬಳ್ಳಾರಿ, ರಾಯಚೂರು, ವಿಜಯನಗರ ಜಿಲ್ಲೆಯಲ್ಲಿ ಹೆಚ್ಚಾಗಿ ಜೋಳ ಬೆಳೆಯವ ಜಿಲ್ಲೆಗಳು  ಹಾಗೂ ರಾಜ್ಯದಾದ್ಯಂತ ಹಿಂಗಾರು ಹಂಗಾಮಿನ ಅವಧಿಯಲ್ಲಿ ಹೆಚ್ಚಿನ ಜೋಳವನ್ನು ಬೆಳೆಯುವ ಜಿಲ್ಲೆಗಳಲ್ಲಿ  ಸರ್ಕಾರದ ವತಿಯಿಂದ ಬೆಂಬಲ ಬೆಲೆ ಯೋಜನೆಯಡಿ 2024-2025 ನೇ ಸಾಲಿನಲ್ಲಿ  ಒಂದು ಲಕ್ಷ ಕ್ವಿಂಟಾಲ್  (LMT) ಜೋಳವನ್ನು ರೈತರಿಂದ ನೇರವಾಗಿ ಖರೀದಿ ಕೇಂದ್ರಗಳ ಮೂಲಕ ಖರೀದಿಸಲು ತೀರ್ಮಾನಿಸಿದ್ದು, ಪ್ರತಿ ಕ್ವಿಂಟಾಲ್ ಜೋಳದ ದರ ಹೈಬ್ರೀಡ್ 3371 ಮಾಲ್ದಂಡಿ ಜೋಳಕ್ಕೆ ಪ್ರತಿ ಕ್ವಿಂಟಾಲ್ ಗೆ  3421 ಧರವನ್ನು ನಿಗಧಿಪಡಿಸಲಾಗಿದೆ. ಈಗಾಗಲೇ ನೊಂದಾಯಿಸಿದ ರೈತರು ಹಾಗೂ ಹೊಸದಾಗಿ ನೊಂದಾಯಿಸುವ ರೈತರು ಸಹ ತಾವು ಬೆಳೆದ ಬೆಲೆಯನ್ನು ನಿರ್ದಿಷ್ಟ ಖರೀದಿ ಕೇಂದ್ರದ ಸ್ಥಳದಲ್ಲಿ ನೊಂದಣಿ ಮಾಡಿಕೊಂಡು ಸರ್ಕಾರಕ್ಕೆ ನೀಡಲು ಕೋರಿದೆ ಎಂದರು.

ಅನ್ನ ಭಾಗ್ಯ ಯೋಜನೆ ಫಲಾನುಭವಿಗಳಿಗೆ ಪ್ರತಿ ವ್ಯಕ್ತಿಗೆ 5 ಕೆಜಿ ಪಡಿತರ ಧಾನ್ಯ ನೀಡುತ್ತಿದ್ದು  ಉತ್ತರ ಕರ್ನಾಟಕದ ಭಾಗದಲ್ಲಿ  2 ಕೆಜಿ ಅಕ್ಕಿಯ ಜೊತೆಗೆ 3 ಕೆಜಿ ಜೋಳವನ್ನು ವಿತರಿಸಲು ತೀರ್ಮಾನಿಸಲಾಗಿದೆ ಎಂದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ನ ಸದಸ್ಯ ಬಸನಗೌಡ ಬಾದರ್ಲಿ, ವಸತಿ ಇಲಾಖೆ ಕಾರ್ಯದರ್ಶಿ ನವೀನ್ ರಾಜ್ ಸಿಂಗ್, ಆಹಾರ ಇಲಾಖೆ ಕಾರ್ಯದರ್ಶಿ ಮನೋಜ್ ಜೈನ್ ಸೇರಿದಂತೆ ಹಾಗೂ ರೈತ ಸಂಘದ ರಘುನಾಥ್, ಮಾದವರೆಡ್ಡಿ ಕರೂರ್, ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist