ಬೆಂಗಳೂರು, (www.thenewzmirror.com) ;

ಪಹಲ್ಗಾಮ್ ನಲ್ಲಿ ಉಗ್ರರ ದಾಳಿಯಲ್ಲಿ 27 ಮಂದಿ ಪ್ರವಾಸಿಗರು ಪ್ರಾಣ ಕಳೆದುಕೊಂಡಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ 27 ಹಿಂದೂಗಳನ್ನು ಕೊಂದಿರುವ ಉಗ್ರರ ನೀಚತನದ ಬಗ್ಗೆ ರಾಕಿಂಗ್ ಸ್ಟಾರ್ ಯಶ್ ಕೂಡ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಆ ಮೂಲಕ ತಮ್ಮ ಅಸಮಧಾನವನ್ನ ಹೊರಹಾಕಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಭಾವುಕ ಪೋಸ್ಟ್ ಹಾಕಿರುವ ಯಶ್, ಘಟನೆ ಕುರಿತಂತೆ ಬೇಸರ ಹೊರಹಾಕಿದ್ದಾರೆ. ಪಹಲ್ಗಾಮ್ನಲ್ಲಿ ಮುಗ್ಧ ಜನರ ಕ್ರೂರ ಹತ್ಯೆಗಳಿಂದ ತೀವ್ರ ದುಃಖವಾಗಿದೆ. ಮುಗ್ಧ ವ್ಯಕ್ತಿಗಳ ಮೇಲಿನ ದಾಳಿಯನ್ನು ಊಹಿಸಲು ಸಾಧ್ಯವಿಲ್ಲ. ಈ ಭೀಕರ ದುರಂತದ ಶೋಕದಲ್ಲಿ ಬಲಿಪಶುಗಳ ಕುಟುಂಬಗಳು ಮತ್ತು ರಾಷ್ಟ್ರದೊಂದಿಗೆ ದೃಢವಾಗಿ ನಿಲ್ಲುತ್ತೇವೆ ಎಂದು ಬರೆದುಕೊಂಡಿದ್ದಾರೆ.