ಬೆಂಗಳೂರು(www.thenewzmirror.com):ಏಪ್ರಿಲ್-2025 ರ ಮಾಹೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ತನ್ನ ತನಿಖಾ ತಂಡಗಳಿಂದ ತಪಾಸಣಾ ಕಾರ್ಯವನ್ನು ಚುರುಕುಗೊಳಿಸಿ ನಿಗಮದ ವ್ಯಾಪ್ತಿಯಲ್ಲಿ ಸಂಚರಿಸುವ 43244 ವಾಹನಗಳನ್ನು ತನಿಖೆಗೊಳಪಡಿಸಿ 3882 ಪ್ರಕರಣಗಳನ್ನು ಪತ್ತೆಹಚ್ಚಿ, 3780 ಟಿಕೇಟ್ ರಹಿತ ಪ್ರಯಾಣಿಕರಿಂದ 7,32,495/- ರೂಗಳನ್ನು ದಂಡದ ರೂಪದಲ್ಲಿ ವಸೂಲಿ ಮಾಡಿರುತ್ತಾರೆ. ನಿಗಮದ ಆದಾಯದಲ್ಲಿ ಸೋರಿಕೆ ಆಗುತ್ತಿದ್ದ 97,576/- ರೂಗಳನ್ನು ತನಿಖಾಧಿಕಾರಿಗಳು ಪತ್ತೆಹಚ್ಚಿದ್ದಾರೆ. ಹಾಗೂ ತಪ್ಪಿತಸ್ಥರ ವಿರುದ್ದ ಇಲಾಖಾ ರೀತ್ಯಾ ಸೂಕ್ತ ಶಿಸ್ತಿನ ಕ್ರಮವನ್ನು ಜರುಗಿಸಲಾಗಿದೆ.
ಆದ್ದರಿಂದ ಸಾರ್ವಜನಿಕ ಪ್ರಯಾಣಿಕರು, ಬಸ್ಸಿನಲ್ಲಿ ಪ್ರಯಾಣಿಸುವಾಗ ಸರಿಯಾದ ಟಿಕೇಟ್/ ಪಾಸ್ ಪಡೆದು ಪ್ರಯಾಣ ಮಾಡುವಂತೆ, ನಿಗಮವು ಪ್ರಯಾಣಿಕರಲ್ಲಿ ಕೋರಿದೆ.