ಕೆಎಸ್ಆರ್ಟಿಸಿ ಚಾಲಕ-ಕಂ-ನಿರ್ವಾಹಕ ಹುದ್ದೆ: ಚಾಲನಾ ವೃತ್ತಿ ಪರೀಕ್ಷಾ ದಿನಾಂಕ ವಿಸ್ತರಣೆ

International Level 3 Award Winner KSRTC

RELATED POSTS

ಬೆಂಗಳೂರು(www.thenewzmirror.com):  ಕೆಎಸ್ಆರ್ಟಿಸಿ ಚಾಲಕ-ಕಂ-ನಿರ್ವಾಹಕ ಹುದ್ದೆಗೆ ಅರ್ಜಿ ಸಲ್ಲಿಸಿ ಚಾಲನಾ ವೃತ್ತಿ ಪರೀಕ್ಷೆಗೆ ಗೈರಾಗಿದ್ದ ಅಭ್ಯರ್ಥಿಗಳಿಗೆ ಇದೀಗ ಮತ್ತೊಮ್ಮೆ ಪರೀಕ್ಷೆಗೆ ಹಾಜರಾಗಲು ಅವಕಾಶ ಕಲ್ಪಿಸಿದ್ದು ಪರೀಕ್ಷಾ ದಿನಾಂಕವನ್ನು ವಿಸ್ತರಣೆ ಮಾಡುವ ಮೂಲಕ ಅಭ್ಯರ್ಥಿಗಳಿಗೆ ಹೆಚ್ಚಿನ ಅವಕಾಶ ಕಲ್ಪಿಸಿದೆ‌

ಈ ಕುರಿತು ಪ್ರಕಟಣೆ ಹೊರಡಿಸಿರುವ ಕೆಎಸ್ಆರ್ಟಿಸಿ ಚಾಲಕ-ಕಂ-ನಿರ್ವಾಹಕ ಹುದ್ದೆಗೆ ಅರ್ಜಿ ಸಲ್ಲಿಸಿ ಹಾಸನ ತರಬೇತಿ ಕೇಂದ್ರದಲ್ಲಿ ಚಾಲನಾ ವೃತ್ತಿ ಪರೀಕ್ಷೆ ಪಡೆಯಲು ಆಯ್ಕೆ ಮಾಡಿಕೊಂಡಿದ್ದ ಅಭ್ಯರ್ಥಿಗಳಿಗೆ ಚಾಲನಾ ವೃತ್ತಿ ಪರೀಕ್ಷೆಯನ್ನು ದಿನಾಂಕ: 16-12-2024 ರಿಂದ ನಡೆಸಲಾಗುತ್ತಿದೆ. ಸದರಿ ಚಾಲನಾ ವೃತ್ತಿ ಪರೀಕ್ಷೆಗೆ ಗೈರುಹಾಜರಾದ ಅಭ್ಯರ್ಥಿಗಳಿಗೆ   ದಿನಾಂಕ:  08-05-2025 ರಿಂದ 20-05-2025 ರವೆರೆಗೆ ಅವಕಾಶ ಕಲ್ಪಿಸಲಾಗಿತ್ತು. ಗೈರುಹಾಜರಾದ ಅಭ್ಯರ್ಥಿಗಳಿಗೆ ಮತ್ತೊಂದು ಅವಕಾಶ ನೀಡಲು ನಿರ್ಧರಿಸಿ ಚಾಲನಾ ವೃತ್ತಿ ಪರೀಕ್ಷೆಯನ್ನು ದಿನಾಂಕ: 23-05-2025 ರವರೆಗೆ ವಿಸ್ತರಿಸಲಾಗಿದೆ ಎಂದು ತಿಳಿಸಿದೆ. 

ಈ ಸಂಬಂಧ ಆಕ್ಷೇಪಣೆಗಳಿದ್ದಲ್ಲಿ  ದಿನಾಂಕ: 22-05-2025 ರ ಸಂಜೆ 5.00 ಗಂಟೆಯೊಳಗೆ ಸಲ್ಲಿಸುವಂತೆ ಸೂಚಿಸಿರುವ ಕೆಎಸ್ಆರ್ಟಿಸಿ ಅಭ್ಯರ್ಥಿಗಳು ನಿಗಮದ ಅಧಿಕೃತ ವೆಬ್-ಸೈಟ್ ಆದ ksrtcjobs.karnataka.gov.in ರಲ್ಲಿ ಕರೆಪತ್ರ ಡೌನ್-ಲೋಡ್ ಮಾಡಿಕೊಂಡು ಕರೆಪತ್ರದಲ್ಲಿ ತಿಳಿಸಿರುವ ಅಗತ್ಯ ದಾಖಲಾತಿಗಳೊಂದಿಗೆ  ದಿನಾಂಕ: 23-05-2025 ರೊಳಗೆ ಹಾಜರಾಗುವಂತೆ ಸೂಚಿಸಿದೆ. ಈ ಅವಕಾಶವು ಅಂತಿಮ ಅವಕಾಶವಾಗಿದ್ದು, ತದನಂತರ ಹಾಸನ ಚಾಲನಾ ಪಥದಲ್ಲಿ ಚಾಲನಾ ವೃತ್ತಿ ಪರೀಕ್ಷೆಗೆ ಅವಕಾಶ ನೀಡಲಾಗುವುದಿಲ್ಲ ಎಂಬುದನ್ನು ಸ್ಪಷ್ಟಪಡಿಸಲಾಗಿದೆ.  

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist