ಹೆಚ್.ಎ.ಎಲ್ ಉಳಿಸಿಕೊಳ್ಳುತ್ತೇವೆ,ನಮ್ಮ ರಾಜ್ಯದ ಆಸ್ತಿ ರಕ್ಷಿಸಿಕೊಳ್ಳುತ್ತೇವೆ: ಡಿಸಿಎಂ ಡಿಕೆ ಶಿವಕುಮಾರ್

RELATED POSTS

ಬೆಂಗಳೂರು(www.thenewzmirror.com):ನಮ್ಮಲ್ಲೂ ಹೆಚ್ಎಎಲ್ ಗೆ ಅಗತ್ಯವಾದ ಭೂಮಿಯನ್ನು ನೀಡಲಾಗಿದೆ. ಹೆಚ್.ಎ.ಎಲ್ ಅನ್ನು ಉಳಿಸಿಕೊಳ್ಳುತ್ತೇವೆ,“ನಮ್ಮ ರಾಜ್ಯದ ಆಸ್ತಿಗಳನ್ನು ನಾವು ರಕ್ಷಣೆ ಮಾಡಿಕೊಳ್ಳುತ್ತೇವೆ” ಎಂದು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು,ಹೆಚ್ಎಎಲ್ ಅನ್ನು ಆಂಧ್ರ ಪ್ರದೇಶಕ್ಕೆ ಸ್ಥಳಾಂತರಿಸಲು ಆಂಧ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಅವರ ಮನವಿ ಹೆಚ್ಚಿನ ಚರ್ಚೆಯಾಗುತ್ತಿದೆ ಆದರೆ “ಹೆಚ್ಎಎಲ್ ಅನ್ನು ಯಾವುದೇ ಬಿಜೆಪಿ ಸರ್ಕಾರ ನೀಡಿಲ್ಲ. ಮೊದಲಿನಿಂದಲೂ ನಮ್ಮಲಿರುವ ತಾಂತ್ರಿಕ, ಮಾನವ ಸಂಪನ್ಮೂಲದಿಂದ ನೆಹರೂ ಅವರು ಇದನ್ನು ಬೆಂಗಳೂರಿನಲ್ಲಿ ಸ್ಥಾಪಿಸಿದ್ದಾರೆ. ದಕ್ಷಿಣ ಭಾರತದಲ್ಲಿ ಏರ್ ಬೇಸ್, ಏರ್ ಶೋಗಳನ್ನು ನೀಡಿದ್ದಾರೆ. ಬೆಂಗಳೂರು, ಬೀದರ್ ಗಳಲ್ಲಿ ವಾಯುನೆಲೆ ಸ್ಥಾಪಿಸಲಾಗಿದೆ. ಚಂದ್ರಬಾಬು ನಾಯ್ಡು ಅವರು ರಾಜಕೀಯವಾಗಿ ಮಾಡಿರುವ ಮನವಿ ಬಗ್ಗೆ ನಾನು ಹಸ್ತಕ್ಷೇಪ ಮಾಡುವುದಿಲ್ಲ. ನಮ್ಮಲ್ಲೂ ಹೆಚ್ಎಎಲ್ ಗೆ ಅಗತ್ಯವಾದ ಭೂಮಿಯನ್ನು ನೀಡಲಾಗಿದೆ. ತುಮಕೂರಿನಲ್ಲಿ ಹೆಲಿಕಾಪ್ಟರ್ ವಿಭಾಗಕ್ಕೆ ಜಮೀನು ನೀಡಲಾಗಿದೆ. ಅವರು ಹೊಸದಾಗಿ ಏನಾದರೂ ಮಾಡಿಕೊಳ್ಳಲಿ. ನೆರೆ ರಾಜ್ಯಗಳಲ್ಲಿ ಏನು ಆಗಬಾರದು ಎಂಬ ಉದ್ದೇಶ ನಮ್ಮದಲ್ಲ. ನಮ್ಮ ರಾಜ್ಯದಲ್ಲಿನ ಆಸ್ತಿಯನ್ನು ನಮ್ಮ ಸರ್ಕಾರ ಕಾಪಾಡಲಿದೆ. ನಮ್ಮ ಆಸ್ತಿ, ನಮ್ಮ ನವರತ್ನಗಳು ಅವು. ಇವುಗಳನ್ನು ಉಳಿಸಿಕೊಳ್ಳುತ್ತೇವೆ ಎಂದರು.

ಇಷ್ಟೆಲ್ಲಾ ಚರ್ಚೆಯಾಗುತ್ತಿದ್ದರೂ ನಮ್ಮ ರಾಜ್ಯದಿಂದ ಆಯ್ಕೆಯಾಗಿರುವ ಸಂಸದರು ಏನು ಮಾಡುತ್ತಿದ್ದಾರೆ? ಕೇಂದ್ರ ಸಚಿವರು ಮಾತನಾಡುತ್ತಿಲ್ಲ. ಕೂಡಲೇ ಎಲ್ಲರೂ ಮಾತನಾಡಬೇಕು” ಎಂದು ಡಿಸಿಎಂ ಆಗ್ರಹಿಸಿದರು.

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist