ಬೆಂಗಳೂರು(www.thenewzmirror.com):ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ ಗೆದ್ದ ಪ್ರಯುಕ್ತ ಆಯೋಜನೆ ಮಾಡಲಾಗಿದ್ದ ಸಂಭ್ರಮಟಚರಣೆ ವೇಳೆ ಕಾಲ್ತುಳಿತದಿಂದ ಮೃತಪಟ್ಟವರ ಕುಟುಂಬ ಸದಸ್ಯರಿಗೆ ಘೋಷಣೆ ಮಾಡಿದ್ದ 10 ಲಕ್ಷ ರೂ.ಗಳ ಪರಿಹಾರವನ್ನು 25 ಲಕ್ಷ ರೂ.ಗಳಿಗೆ ಹೆಚ್ಚಿಸಿ ಪರಿಷ್ಕೃತ ಪರಿಹಾರದ ಆದೇಶವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹೊರಡಿಸಿದ್ದಾರೆ.
ಪರಿಹಾರದ ಮೊತ್ತ ಹೆಚ್ಚಿಸುವಂತೆ ಸಾಕಷ್ಟು ಒತ್ತಾಯಗಳು ಕೇಳಿ ಬಂದ ಬೆನ್ನಲ್ಲೇ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದ್ದು, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ದುರಂತದಲ್ಲಿ ಮೃತರಾದವರ ಕುಟುಂಬಗಳಿಗೆ ಘೋಷಿಸಿದ್ದ ಪರಿಹಾರವನ್ನು ತಲಾ 25 ಲಕ್ಷ ರೂ.ಗಳಿಗೆ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶಿಸಿದ್ದಾರೆ.
ಈ ಮೊದಲು ಮೃತರ ಕುಟುಂಬಕ್ಕೆ ತಲಾ ಹತ್ತು ಲಕ್ಷ ರೂ.ಗಳ ಪರಿಹಾರವನ್ನು ಸರ್ಕಾರ ಘೋಷಿಸಿತ್ತು.