ಬೆಂಗಳೂರು(www.thenewzmirror.com): ರಾಜ್ಯ ರಸ್ತೆ ಸಾರಿಗೆ ನಿಗಮದ ಆದಾಯ ಸೋರಿಕೆಯಲ್ಲಿ ಟಿಕೆಟ್ ರಹಿತ ಪ್ರಯಾಣವೂ ಒಂದಾಗಿದೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಕೆಎಸ್ಆರ್ಟಿಸಿ ಕೇವಲ ಒಂದು ತಿಂಗಳಿನಲ್ಲೇ ಟಿಕೆಟ್ ಇಲ್ಲದೆ ಪ್ರಯಾಣಿಸಿದ 4010 ಪ್ರಯಾಣಿಕರನ್ನು ಪತ್ತೆ ಹಚ್ಚಿದ್ದು ಅವರಿಂದ 7.76 ಲಕ್ಷ ದಂಡ ವಸೂಲಿ ಮಾಡಿದೆ.
ಮೇ-2025 ರ ಮಾಹೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ತನ್ನ ತನಿಖಾ ತಂಡಗಳಿಂದ ತಪಾಸಣಾ ಕಾರ್ಯವನ್ನು ಚುರುಕುಗೊಳಿಸಿ ನಿಗಮದ ವ್ಯಾಪ್ತಿಯಲ್ಲಿ ಸಂಚರಿಸುವ 41209 ವಾಹನಗಳನ್ನು ತನಿಖೆಗೊಳಪಡಿಸಿ 4029 ಪ್ರಕರಣಗಳನ್ನು ಪತ್ತೆಹಚ್ಚಿ. 4010 ಟಿಕೇಟ್ ರಹಿತ ಪ್ರಯಾಣಿಕರಿಂದ 7,76,201/-ರೂಗಳನ್ನು ದಂಡದ ರೂಪದಲ್ಲಿ ವಸೂಲಿ ಮಾಡಿದೆ. ನಿಗಮದ ಆದಾಯದಲ್ಲಿ ಸೋರಿಕೆ ಆಗುತ್ತಿದ್ದ 1,08,784/- ರೂಗಳನ್ನು ತನಿಖಾಧಿಕಾರಿಗಳು ಪತ್ತೆಹಚ್ಚಿದ್ದಾರೆ, ಹಾಗೂ ತಪ್ಪಿತಸ್ಥರ ವಿರುದ್ದ ಇಲಾಖಾ ರೀತ್ಯಾ ಸೂಕ್ತ ಶಿಸ್ತಿನ ಕ್ರಮವನ್ನು ಜರುಗಿಸಲಾಗಿದೆ ಎಂದು ತಿಳಿಸಿದೆ.
ಸಾರ್ವಜನಿಕ ಪ್ರಯಾಣಿಕರು, ಬಸ್ಸಿನಲ್ಲಿ ಪ್ರಯಾಣಿಸುವಾಗ ಸರಿಯಾದ ಟಿಕೇಟ್/ ಪಾಸ್ ಪಡೆದು ಪ್ರಯಾಣ ಮಾಡುವಂತೆ, ನಿಗಮವು ಈ ಮೂಲಕ ಪ್ರಯಾಣಿಕರಲ್ಲಿ ಕೋರಿದೆ.