ಸಿಎಂ,ಡಿಸಿಎಂ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಬೃಹತ್ ಪ್ರತಿಭಟನೆ:ವಿಜಯೇಂದ್ರ,ಅಶೋಕ್, ಛಲವಾದಿ ನಾರಾಯಣಸ್ವಾಮಿ ಸೇರಿ ಪ್ರಮುಖರ ಬಂಧನ

RELATED POSTS

ಬೆಂಗಳೂರು(www.thenewzmirror.com):ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಗೃಹ ಸಚಿವ ಡಾ.ಜಿ ಪರಮೇಶ್ವರ್ ರಾಜೀನಾಮೆಗೆ ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆಗೆ ಮುಂದಾದ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.

ಆರ್.ಸಿ.ಬಿ. ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತದಲ್ಲಿ ಮೃತಪಟ್ಟ 11 ಜನ ಅಮಾಯಕರ ಸಾವಿಗೆ ರಾಜ್ಯ ಕಾಂಗ್ರೆಸ್ ಸರ್ಕಾರದ ವೈಫಲ್ಯ ಕಾರಣವಾಗಿದ್ದು, ಈ ಸಂಬಂಧ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ ನಡೆಸಲು ಬಿಜೆಪಿ ಕರೆ ನೀಡಿತ್ತು.ಅದರಂತೆ

ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ನೇತೃತ್ವದಲ್ಲಿ ಈ ಪ್ರತಿಭಟನೆಯನ್ನು ಆಯೋಜಿಸಲಾಗಿತ್ತು. 

ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆಗೆ ಮುಂದಾದ ಸಮಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ,ವಿಪಕ್ಷ ನಾಯಕ ಆರ್.ಅಶೋಕ್, ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.

ವಿಧಾನಸಭೆ ವಿಪಕ್ಷ ಮುಖ್ಯ ಸಚೇತಕ ದೊಡ್ಡನಗೌಡ ಹೆಚ್. ಪಾಟೀಲ್, ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ್, ಮಾಜಿ ಉಪಮುಖ್ಯಮಂತ್ರಿ ಮತ್ತು ಸಂಸದ ಗೋವಿಂದ ಕಾರಜೋಳ, ಸಂಸದ ಪಿ.ಸಿ. ಮೋಹನ್, ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್, ಬಿಜೆಪಿ ರಾಜ್ಯ ಉಪಾಧ್ಯಕ್ಷ ಮತ್ತು ಶಾಸಕ ಭೈರತಿ ಬಸವರಾಜ್, ಮಾಜಿ ಸಚಿವ ಮತ್ತು ಶಾಸಕ ಕೆ. ಗೋಪಾಲಯ್ಯ, ಶಾಸಕ ಎಲ್. ರವಿಸುಬ್ರಹ್ಮಣ್ಯ, ಉದಯ್ ಗರುಡಾಚಾರ್, ಎಸ್. ಮುನಿರಾಜು, ಎಂ. ಕೃಷ್ಣಪ್ಪ, ವಿಧಾನಪರಿಷತ್ ಸದಸ್ಯ ಕೇಶವ್ ಪ್ರಸಾದ್, ಭಾರತಿ ಶೆಟ್ಟಿ, ಯುವ ಮೋರ್ಚಾ ರಾಜ್ಯ ಅಧ್ಯಕ್ಷ ಮತ್ತು ಶಾಸಕ ಧೀರಜ್ ಮುನಿರಾಜು, ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಮತ್ತು ಶಾಸಕ ಸಿ.ಕೆ. ರಾಮಮೂರ್ತಿ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ರಾಜ್ಯ ಪದಾಧಿಕಾರಿಗಳು ಮತ್ತು ಪಕ್ಷದ ಮುಖಂಡರು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist