ಬೆಂಗಳೂರು, (www.thenewzmirror.com) ;
ಕೇಂದ್ರ ಸರ್ಕಾರದ ಅಯವ್ಯಯ ರಾಜ್ಯಕ್ಕೆ ಮಾರಕವಾಗಿದ್ದು, ನಿರಾಶದಾಯಕ ಬಜೆಟ್ ಅಂತ ಸಿಎಂ ಸಿದ್ದರಾಮಯ್ಯ ಅಭಿಪ್ರಾಯ ಪಟ್ಟಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೇಂದ್ರದ ಬಜೆಟ್ ಪೂರ್ವ ಸಭೆಯಲ್ಲಿ ನಾವಿಟ್ಟ ಬೇಡಿಕೆಗಳಲ್ಲಿ ಒಂದನ್ನೂ ಈಡೇರಿಸಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ರು.
ಈ ಬಜೆಟ್ ಅನ್ನ ನೋಡಿದ್ರೆ ರಾಜ್ಯದ ಜನರಿಗೆ ಚೊಂಬು ಕೊಡುವ ಅಭಿಯಾನವನ್ನು ಕೇಂದ್ರ ಮುಂದುವರೆಸಿದಂತೆ ಕಾಣುತಿದೆ ಅಂತ ವ್ಯಂಗ್ಯವಾಡಿದ್ರು. ಅಷ್ಟೇ ಅಲ್ದೇ ರಾಜ್ಯಕ್ಕೆ ಏಕೆ ಚೊಂಬು ಕೊಟ್ಟಿದ್ದೀರಿ ಎಂದು ಬಿಜೆಪಿ-ಜೆಡಿಎಸ್ ಸಂಸದರು ಮತ್ತು ಕೇಂದ್ರ ಸಚಿವರು ಪ್ರಧಾನಿ ಮೋದಿಯವರಿಗೆ ಕೇಳಿ ಎಂದು ಸಲಹೆ ನೀಡಿದ್ರು.
ಆದಾಯ ತೆರಿಗೆ ಮಿತಿ 12 ಲಕ್ಷ ರೂಪಾಯಿಗಳಿಗೆ ಏರಿಸಿರುವುದನ್ನು ಕೊಂಡಾಡಲಾಗುತ್ತಿದೆ. ಆದರೆ ನಮ್ಮಲ್ಲಿ ಕಳೆದ ಹಣಕಾಸು ವರ್ಷದಲ್ಲಿ ಆದಾಯ ತೆರಿಗೆ ಪಾವತಿ ಮಾಡಿದವರು ಕೇವಲ 8.09 ಕೋಟಿ ಜನ ಇದು ನಮ್ಮ ಒಟ್ಟು ಜನಸಂಖ್ಯೆಯ ಶೇಕಡಾ 6.64ರಷ್ಟಾಗುತ್ತದೆ ಅವರಲ್ಲಿ 4.90 ಕೋಟಿ ಜನ ಸೊನ್ನೆ ತೆರಿಗೆ ಪಾವತಿ ದಾರರು. ಆದ್ದರಿಂದ ಆದಾಯ ತೆರಿಗೆ ಮಿತಿಯ ಹೆಚ್ಚಳ ಮೇಲು ಮಧ್ಯಮ ವರ್ಗದ ಕೆಲವೇ ಕುಟುಂಬಗಳಿಗೆ ನೆರವಾಗಬಹುದೇ ವಿನಹ ದಿನದ ಆದಾಯ 100-150 ರೂಪಾಯಿಯಷ್ಟೆ ಹೊಂದಿದ ಶೇಕಡಾ 70ರಷ್ಟು ಜನಸಂಖ್ಯೆಗೆ ಇದರಿಂದ ಯಾವ ಲಾಭವೂ ಇಲ್ಲ ಎಂದು ತಿಳಿಸಿದರು.
ದೇಶದಲ್ಲೇ ಅತಿ ಹೆಚ್ಚು ತೆರಿಗೆ ಪಾವತಿಸುವ ರಾಜ್ಯಗಳಲ್ಲಿ ಎರಡನೇ ಸ್ಥಾನದಲ್ಲಿರುವ ಕರ್ನಾಟಕ ರಾಜ್ಯಕ್ಕೆ ಈ ಬಜೆಟ್‌ನಲ್ಲಿ ಯಾವುದೇ ಹೊಸ ಘೋಷಣೆ ಇಲ್ಲ. ದಕ್ಷಿಣ ಭಾರತದ ರಾಜ್ಯಗಳಲ್ಲಿ ಸಣ್ಣ ಪ್ರಮಾಣದಲ್ಲಿ ಆಂಧ್ರ ಪ್ರದೇಶ ಬಿಟ್ಟರೆ ಉಳಿದ ಯಾವ ರಾಜ್ಯಗಳಿಗೂ ಯಾವುದೇ ಯೋಜನೆ ಘೋಷಣೆ ಮಾಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ರು.
ಅಭಿವೃದ್ದಿಯ ಪಥದಲ್ಲಿ ಮುನ್ನಡೆಯುತ್ತಿದ್ದ ಭಾರತವನ್ನು ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಹಿಂದಕ್ಕೆ ಎಳೆದೊಯ್ಯುತ್ತಿದೆ. ಇದು ಯಥಾಪ್ರಕಾರ ಕರ್ನಾಟಕದ ಪಾಲಿಗೆ ಮಾತ್ರವಲ್ಲ ಇಡೀ ದೇಶಕ್ಕೆ ನಿರಾಶದಾಯಕ, ನಷ್ಟದಾಯಕ ಮತ್ತು ಹಾನಿಕಾರಕ ಬಜೆಟ್ ಎಂದು ವಿಶ್ಲೇಷಿಸಿದ್ರು.