ಬೆಂಗಳೂರು, ((www.thenewzmirror.com);
ಸ್ಟಾರ್ ಖ್ಯಾತಿಯ ನಟ ದರ್ಶನ್ ಅವರನ್ನು ಪೊಲೀಸರು ಬೆಳ್ಳಂಬೆಳಗ್ಗೆ ಬಂಧನ ಮಾಡಿದ್ದಾರೆ. ಮೈಸೂರಿನ ಹೊಟೇಲ್ ನಲ್ಲಿ ವಶಕ್ಕೆ ಪಡೆದಿದ್ದು, ಇದೀಗ ಇಡೀ ಸ್ಯಾಂಡಲ್‌ವುಡ್ ಬೆಚ್ಚಿ ಬೀಳುವಂತೆ ಮಾಡಿದೆ.
ಕೊಲೆ ಪ್ರಕರಣದಲ್ಲಿ ಈಗಾಗಲೇ ಬಂಧಿತರು ನೀಡಿರುವ ಹೇಳಿಕೆ ಆಧರಿಸಿ ನಟ ದರ್ಶನ್ ಅವರನ್ನ ಕಾಮಾಕ್ಷಿಪಾಳ್ಯ ಪೊಲೀಸರು ವಶಕ್ಕೆ ಪಡೆದಿರೋದಾಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ ಮಾಹಿತಿ ನೀಡಿದ್ದಾರೆ.
ನಟ ದರ್ಶನ್ ಪರಿಚಯಸ್ಥ ಮಹಿಳೆ ಪವಿತ್ರಾ ಗೌಡ ಎಂಬಾಕೆಗೆ ಕೊಲೆಯಾದ ರೇಣುಕಾಸ್ವಾಮಿ ಎಂಬ ವ್ಯಕ್ತಿ ಸೋಶಿಯಲ್ ಮೀಡಿಯಾದಲ್ಲಿ ಕೆಟ್ಟದಾಗಿ ಕಾಮೆಂಟ್ ಮಾಡಿದ್ದ. ಹೀಗಾಗಿ ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಆರ್‌ಆರ್ ನಗರದಲ್ಲಿ ಇರುವ ಶೆಡ್‌ಗೆ ಕರೆದುಕೊಂಡು ಹೋಗಿ ಚಿತ್ರಹಿಂಸೆ ನೀಡಿ ಕೊಲೆ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.
ಆತನನ್ನು ಕೊಲೆ ಮಾಡಿದ ಬಳಿಕ ಆರೋಪಿಗಳು ಆತನ ಮೃತದೇಹವನ್ನು ಕಾಮಾಕ್ಷಿಪಾಳ್ಯದ ಡ್ರೈನೇಜ್ ಬಳಿ ಎಸೆದು ಹೋಗಿದ್ದರು. ಈ ಹಿನ್ನೆಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು. ಕೊಲೆಗೈದ ಆರೋಪಿಗಳು ಬೆಂಗಳೂರಿನ ಗಿರಿನಗರ ಮೂಲದವರು ಎಂದು ಹೇಳಲಾಗ್ತಿದೆ. ಇದೇ ತಿಂಗಳ 10 ರಂದು ಅಪರಿಚಿತ ಮೃತ ದೇಹ ಪತ್ತೆಯಾಗಿತ್ತು. ಪ್ರಕರಣದ ತನಿಖೆ ನಡೆಸಿದ ಬಳಿಕ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಎಂದು ತಿಳಿದುಬಂದಿದೆ.
ಆರಂಭದಲ್ಲಿ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಎಂಬಾತನದ್ದು ಕೊಲೆ ಅಲ್ಲ, ಆತ್ಮಹತ್ಯೆ ಎಂದು ಊಹಿಸಲಾಗಿದ್ದು, ಆನಂತರ ಕೂಲಂಕುಶವಾಗಿ ತನಿಖೆ ನಡೆಸಿದಾಗ ಇದೊಂದು ಕೊಲೆ ಎಂದು ತಿಳಿದು ಬಂದಿದೆ. ನಂತರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಇದರ ಹಿಂದೆ ಇರುವವರನ್ನು ಪತ್ತೆ ಹಚ್ಚಿದ್ದಾರೆ. ರೇಣುಕಾಸ್ವಾಮಿ ಚಿತ್ರದುರ್ಗದ ಲಕ್ಷ್ಮೀ ವೆಂಕಟೇಶ್ವರ ಬಡಾವಣೆಯ ನಿವಾಸಿಯಾಗಿದ್ದು, ಅಪೊಲೋ ಮೆಡಿಕಲ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದನು. ಶನಿವಾರ ಮನೆಯಿಂದ ಹೊರಟವನು ವಾಪಸ್ ಬಂದಿರಲಿಲ್ಲ.
ಕೊಲೆ ಪ್ರಕರಣದಲ್ಲಿ ಆರೋಪಿಗಳ ಜೊತೆ ನಟ ದರ್ಶನ್ ನಿರಂತರ ಸಂಪರ್ಕ ಇರುವ ಶಂಕೆ ವ್ಯಕ್ತವಾಗಿದ್ದು, ಆರೋಪಿಯ ವಿಚಾರಣೆ ವೇಳೆಯೂ ನಟ ದರ್ಶನ್ ಹೆಸರು ಬಾಯಿಬಿಟ್ಟಿದ್ದರಿಂದ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೃತನಿಗೆ ಹಲ್ಲೆ ನಡೆಸಿರುವ ಸಮಯದಲ್ಲಿ ನಟ ದರ್ಶನ್ ಕೂಡ ಸ್ಥಳದಲ್ಲೇ ಇದ್ದರು ಎಂಬ ಆರೋಪ ವ್ಯಕ್ತವಾಗಿದೆ
ಕೊಲೆಯಾಗಿರುವ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯ ಪೋಷಕರು ಬೆಂಗಳೂರಿಗೆ ಆಗಮಿಸಿದ್ದು, ತಮ್ಮ ಮಗನನ್ನು ಕಳೆದುಕೊಂಡಿರುವ ಬಗ್ಗೆ ಪೊಲೀಸರ ಮುಂದೆ ಕಣ್ಣೀರು ಹಾಕಿದ್ದಾರೆ ಎಂದು ತಿಳಿದು ಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ 10 ಮಂದಿಯನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.
ಚಾಲೆಂಜಿಂಗ್ ಸ್ಟಾರ್ ಖ್ಯಾತಿಯ ನಟ ದರ್ಶನ್ ಅವರನ್ನು ಪೊಲೀಸರು ಬೆಳ್ಳಂಬೆಳಗ್ಗೆ ಬಂಧನ ಮಾಡಿದ್ದಾರೆ. ಮೈಸೂರಿನ ನಿವಾಸದಲ್ಲಿ ನಟ ದರ್ಶನ್ ಬಂಧನಕ್ಕೊಳಗಾಗಿದ್ದು, ಈ ಪ್ರಕರಣ ಇದೀಗ ಇಡೀ ಸ್ಯಾಂಡಲ್‌ವುಡ್ ಬೆಚ್ಚಿ ಬೀಳುವಂತೆ ಮಾಡಿದೆ.