ಬೆಂಗಳೂರು, (www.thenewzmirror.com) ;
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ಎಲ್ಲ 17 ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ನ್ನು ಪೊಲೀಸರು ನ್ಯಾಯಾಲಯಕ್ಕೆ ಈಗಾಗಲೇ ಸಲ್ಲಿಕೆ ಮಾಡಿದ್ದಾರೆ. ಅದರಲ್ಲಿರುವ ಅಂಶಗಳ ಬಗ್ಗೆ ಈಗಾಗಲೇ ಸಾಕಷ್ಟು ವರದಿಗಳು ಮಾಧ್ಯಮಗಳಲ್ಲಿ, ಸೋಷಿಯಲ್ ಮೀಡಿಯಾಗಳಲ್ಲಿ ಪ್ರಸಾರನೂ ಆಗಿದೆ. ಇದರ ಬೆನ್ನಲ್ಲೇ ದೋಷಾರೋಪ ಪಟ್ಟಿಯಲ್ಲಿರುವ ಯಾವುದೇ ರಹಸ್ಯ ಮಾಹಿತಿಯನ್ನು ಪ್ರಸಾರ ಮಾಡದಂತೆ ಹೈಕೋರ್ಟ್ ನಿರ್ಬಂಧ ವಿಧಿಸಿ ಆದೇಶ ನೀಡಿದೆ
ದೋಷಾರೋಪಣ ಪಟ್ಟಿಯಲ್ಲಿರುವ ಗೌಪ್ಯ ಹಾಗೂ ಆರೋಪ ಪಟ್ಟಿಯಲ್ಲಿರುವ ಮಾಹಿತಿ ಸೋರಿಕೆ ಮಾಡದಂತೆ ಪೊಲೀಸರಿಗೆ ಸೂಚಿಸಬೇಕು ಬಹಿರಂಗಪಡಿಸದಂತೆ ಮಾಧ್ಯಮಗಳಿಗೆ ನಿರ್ಬಂಧ ವಿಧಿಸಿ ಆದೇಶಿಸಬೇಕೆಂದು ಕೋರಿ ನಟ ದರ್ಶನ್ ಅರ್ಜಿ ಸಲ್ಲಿಸಿದ್ದರು.ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ ಚಂದನ್ಗೌಡರ್ ನೇತೃತ್ವದ ಪೀಠ ಯಾವುದೇ ರಹಸ್ಯ ಮಾಹಿತಿಯನ್ನು ಪ್ರಸಾರ ಮಾಡದಂತೆ ಆದೇಶಿಸಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಮಾಕ್ಷಿಪಾಳ್ಯ ಪೊಲೀಸರು 3,991 ಪುಟಗಳ ದೋಷಾರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.