ಬೆಂಗಳೂರು, (www.thenewzmirror.com);
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್, ಪವಿತ್ರಾ ಗೌಡ ಸೇರಿ ಎಲ್ಲಾ17 ಆರೋಪಿಗಳ ನ್ಯಾಯಾಂಗ ಬಂಧನ ಮತ್ತೆ ವಿಸ್ತರಣೆಯಾಗಿದ್ದು, ಸೆಪ್ಟೆಂಬರ್ 30ರವರೆಗೆ ನ್ಯಾಯಾಂಗ ಬಂಧನವನ್ನು ವಿಸ್ತರಣೆ ಮಾಡಿ ವಿಚಾರಣಾ ನ್ಯಾಯಾಲಯ ಆದೇಶ ಹೊರಡಿಸಿದೆ.
ಈಗಾಗಲೇ ಮೂರು ತಿಂಗಳು ಜೈಲಿನಲ್ಲಿ ಕಳೆದಿರುವ ದಾಸ ಇದೀಗ ಸೆಪ್ಟೆಂಬರ್ ಅಂತ್ಯದ ವರೆಗುಯ ಬಳ್ಳಾರಿ ಜೈಲಿನಲ್ಲೇ ಇರುವಂತಾಗಿದೆ.
ಬೆಂಗಳೂರು, ಬಳ್ಳಾರಿ ಸೇರಿದಂತೆ ರಾಜ್ಯದ ವಿವಿಧ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿರುವ 17 ಆರೋಪಿಗಳನ್ನ ವಿಡಿಯೋ ಕಾನ್ಫರೆನ್ಸ್ ಮೂಲಕ ಕೋರ್ಟ್‌ನ ಎದುರು ಹಾಜರುಪಡಿಸಲಾಗಿತ್ತು. ಬೆಂಗಳೂರಿನ ಎಸಿಎಂಎಂ ನ್ಯಾಯಾಲಯದಲ್ಲಿ ವಿಚಾರಣೆ ನಡೆದು ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿ ಜಡ್ಜ್ ಆದೇಶ ಹೊರಡಿಸಿದರು.
ನಟ ದರ್ಶನ್ ಬಳ್ಳಾರಿ ಜೈಲಿನಲ್ಲಿದ್ದು, ಪವಿತ್ರಾ ಗೌಡ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ತುಮಕೂರು, ಮೈಸೂರು, ಧಾರವಾಡ, ಶಿವಮೊಗ್ಗ, ವಿಜಯಪುರ, ಹಿಂಡಲಗಾ ಜೈಲಿನಿಂದ ಆರೋಪಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಿದ್ದರು.