ಬೆಂಗಳೂರು, (www.thenewzmirror.com) ;
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ 1 ಆರೋಪಿ ಹಾಗೂ ನಟಿ ಪವಿತ್ರಾಗೌಡ ಆರೋಗ್ಯದಲ್ಲಿ ಏರುಪೇರಾಗಿದೆ. ಮುಂಜಾಗ್ರತಾ ದೃಷ್ಟಿಯಿಂದ ಆಕೆಯನ್ನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ವಿಚಾರಣೆ ನಡೆಯುತ್ತಿರೋ ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆಯಲ್ಲಿ ವಿಚಾರಣೆ ವೇಳೆ ಆರೋಗ್ಯದಲ್ಲಿ ಏರುಪೇರು ಉಂಟಾಗಿತ್ತು. ತಕ್ಷಣವೇ ವೈದ್ಯರ ತಂಡ ವೈದ್ಯಕೀಯ ತಪಾಸಣೆ ನಡೆಸಿ ನಂತರ ಆಸ್ಪತ್ರೆಗೆ ದಾಖಲು ಮಾಡಲು ಸೂಚನೆ ನೀಡಿತ್ತು. ಅಂತೆಯೇ ಪವಿತ್ರಾ ಗೌಡರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ನಿನ್ನೆಯಷ್ಟೇ ನಟಿಯ ನಿವಾಸದಲ್ಲಿ ಶೋಧಕಾರ್ಯ ನಡೆಸಲಾಗಿತ್ತು. ರೇಣುಕಾಸ್ವಾಮಿಗೆ ಹಲ್ಲೆ ನಡೆಸಿದ್ದು ಎನ್ಬಲಾದ ಚಪ್ಪಲಿ ಸೇರಿಸಂತೆ ತನಿಖಡಗೆ ಸಹಾಯಕವಾಗುವ ವಸ್ತುಗಳನ್ನ ಪೊಲೀಸರು ಜಪ್ತಿ ಮಾಡಿದ್ದರು.