ಬೆಂಗಳೂರು, (www.thenewzmirror.com) ;
ಆರೋಪಿ ನಟ ದರ್ಶನ್ಗೆ ಜೈಲಿನಲ್ಲಿ ರಾಜಾತಿಥ್ಯ ಸಿಗುತ್ತಿರುವ ವಿಚಾರವಾಗಿ ದರ್ಶನ್ ಸೇರಿದಂತೆ ರೇಣುಕಾಸ್ವಾಮಿ ಪ್ರಕರಣದ ಆರೋಪಿಗಳನ್ನು ಬೇರೆ ಜೈಲಿಗೆ ಸ್ಥಳಾಂತರ ಮಾಡಲು ಸಿದ್ಧತೆ ನಡೆಸಿದ್ದು, ಜನರು ಪೊಲೀಸರ ವಿರುದ್ಧ ಕಿಡಿಕಾರುತ್ತಿದ್ದಾರೆ.
ಇತ್ತ ಈ ಘಟನೆ ಪರ-ವಿರೋಧದ ಚರ್ಚೆಗೆ ಆಸ್ಪದ ಮಾಡಿಕೊಟ್ಟಿದ್ದು, ಈ ಕುರಿತು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಪ್ರತಿಕ್ರಿಯೆ ನೀಡಿದ್ದಾರೆ. ಮೊದಲಿಗೆ ನೀವು ಈ ವಿಚಾರವನ್ನು ಗೃಹ ಸಚಿವರ ಬಳಿ ಕೇಳಬೇಕಿದೆ. ನಮ್ಮ ಪ್ರಕಾರ ಜೈಲಿನಲ್ಲಿರುವಾಗ ಒಬ್ಬ ವ್ಯಕ್ತಿಯು ಅಲ್ಲಿನ ಶಿಸ್ತು ಹಾಗೂ ನಿಯಮಗಳನ್ನು ಪಾಲಿಸಬೇಕಿದೆ. ಯಾರೇ ಆಗಿರಲಿ ಒಂದು ಪ್ರಕ್ರಿಯೆ ಇದೆ. ಎಲ್ಲರಿಗೂ ಒಂದೇ ನಿಯಮ ಇರಬೇಕೆಂದು ಅಭಿಪ್ರಾಯಪಟ್ಟಿದ್ದಾರೆ.