ಬೆಂಗಳೂರು, (www.thenewzmirror.com);
ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಅನ್ನು ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಕೆಂದ್ರ ಕಾರಾಗೃಹಕ್ಕೆ ಸ್ಥಳಾಂತರ ಮಾಡಲಾಗುತ್ತಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್ಗೆ ರಾಜಾತಿಥ್ಯ ನೀಡಲಾಗುತ್ತಿದೆ ಎನ್ನುವ ಆರೋಪದ ಮೇರೆಗೆ ಈ ತೀರ್ಮಾನ ಮಾಡಲಾಗುತ್ತಿದೆ. ದೇಶದಲ್ಲೇ ಅತ್ಯಂತ ಕಠಿಣ ಕಾರಾಗೃಹ ಅಂತ ಖ್ಯಾತಿಗಳಿಸಿರೋ ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿ ದರ್ಶನ್ ಗೆ ಪರಪ್ಪನ ಅಗ್ರಹಾರದಲ್ಲಿ ಇದ್ದಷ್ಟು ಸೌಲಭ್ಯಗಳು ಇರೋದಿಲ್ಲ.
ಪರಪ್ಪನ ಅಗ್ರಹಾರ ಜೈಲಿಗೆ ಹೋಲಿಸಿದರೆ ಬಳ್ಳಾರಿ ಜೈಲಿನ ವಿಸ್ತೀರ್ಣ ಕಡಿಮೆ ಎನ್ನಲಾಗುತ್ತಿದೆ. ಬ್ಯಾರಕ್ಗಳು ಸಹ ಪರಪ್ಪನ ಅಗ್ರಹಾರ ಜೈಲಿನಲ್ಲಿ ವ್ಯವಸ್ಥಿತವಾಗಿಲ್ಲ ಎಂಬ ಮಾತುಗಳು ಇವೆ. ಇನ್ನು ಊಟದ ವಿಷಯಕ್ಕೆ ಬರುವುದಾದರೆ, ಸರಳವಾದ ಊಟದ ಮೆನು ಬಳ್ಳಾರಿ ಜೈಲಿನಲ್ಲಿದೆ.
ಪ್ರತಿದಿನ ಬೆಳಿಗ್ಗೆ ಉಪಹಾರಕ್ಕೆ ಉಪ್ಪಿಟ್ಟು, ಒಗ್ಗರಣೆ ಅವಲಕ್ಕಿ, ಬಿಸಿಬೇಳೆ ಬಾತ್, ಚಿತ್ರಾನ್ನ ಇರಲಿದೆ. ಮಧ್ಯಾಹ್ನದ ಊಟಕ್ಕೆ ರಾಗಿಮುದ್ದೆ, ಚಪಾತಿ, ಜೋಳದ ರೊಟ್ಟಿ, ಸಜ್ಜಿ ರೊಟ್ಟಿ ಕೊಡಲಾಗುತ್ತದೆ. ದರ್ಶನ್, ರೊಟ್ಟಿ, ಚಪಾತಿ ಅಥವಾ ಮುದ್ದೆಗಳಲ್ಲಿ ಯಾವುದಾದರೂ ಒಂದನ್ನು ಆಯ್ಕೆ ಮಾಡಿಕೊಳ್ಳಬಹುದಾಗಿರುತ್ತದೆ.
ರಾತ್ರಿ ವೇಳೆ ಅನ್ನ ಸಾಂಬಾರ್ ಲಭ್ಯವಾಗಲಿದೆ. ಪ್ರತಿ ಮಂಗಳವಾರ ಮೊಟ್ಟೆ ಕೊಡಲಾಗುತ್ತದೆ. ಇನ್ನು ಪ್ರತಿ ಭಾನುವಾರ ಮಾಂಸಾಹಾರವನ್ನು ನೀಡಲಾಗುತ್ತದೆ. ಒಂದು ಭಾನುವಾರ ಚಿಕನ್ ಕೊಟ್ಟರೆ ಮತ್ತೊಂದು ಭಾನುವಾರ ಮಟನ್ ನೀಡಲಾಗುತ್ತದೆ. ಇದು ಬಳ್ಳಾರಿ ಜೈಲಿನ ಸಾಮಾನ್ಯ ಊಟದ ಮೆನು ಆಗಿದ್ದು, ಇದೇ ಮೆನು ದರ್ಶನ್ಗೂ ಸಹ ಇರಲಿದೆ ಎಂದೇ ಹೇಳಲಾಗುತ್ತಿದೆ.