ಬೆಂಗಳೂರು, (www.thenewzmirror.com) ;
ವಿಧಿಯಾಟ ಅಂದರೆ ಇದೇ ಅನ್ಸುತ್ತೆ.., ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ರಾಜಾತಿಥ್ಯ ವಿಚಾರ ಸಂಬಂಧ ಕಾರಾಗೃಹ ಇಲಾಖೆಯು ಇಂದು ಮಧ್ಯಾಹ್ನವೇ ನಟ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಲಿದ್ದಾರೆ. ಈ ಹಿಂದೆ ತರುಣ್ ಸುಧೀರ್ ನಿರ್ದೇಶನದ ಚೌಕ ಸಿನೆಮಾದಲ್ಲಿ ನಟ ದರ್ಶನ್ ಇದೇ ಜೈಲಿನಲ್ಲಿ ಶೂಟಿಂಗ್ ಮಾಡಿದ್ದರು. ಇದೀಗ ಅದೇ ಜೈಲಿಗೆ ಖೈದಿಯಾಗಿ ನಟ ಶಿಫ್ಟ್ ಆಗಲಿದ್ದಾರೆ. ಅಷ್ಟೇ ಅಲ್ದೆ ಇಡೀ ದೇಶದಲ್ಲೇ ಅತ್ಯಂತ ಕಠಿಣ ಜೈಲಗಳ ಪೈಕಿ ಬಳ್ಳಾರಿ ಸೆಂಟ್ರಲ್ ಜೈಲು ಮೂರನೇ ಸ್ಥಾನದಲ್ಲಿ ಬಂದು ನಿಲ್ಲುತ್ತೆ.
ಬಳ್ಳಾರಿ ಜೈಲು ಅಂದ್ರೆ ಅತ್ಯಂತ ಕಠಿಣ ಶಿಕ್ಷೆ ನೊಇಡುವ ಜೈಲು ಮೋಸ್ಟ್ ನಟೋರಿಯಸ್ ಖೈದಿಗಳು ಇದೇ ಬಳ್ಳಾರಿ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದಾರೆ. ಇಲ್ಲಿ ಪರಪ್ಪನ ಅಗ್ರಹಾರ ಜೈಲಿನ ಇರುವಷ್ಟು ವ್ಯವಸ್ಥೆ ಬಳ್ಳಾರಿ ಜೈಲಿನಲ್ಲಿ ಇರೋದಿಲ್ಲ. ಹಾಗೆನೇ ದರ್ಶನ್ ಬಳ್ಳಾರಿ ಜೈಲಿನಲ್ಲಿ ಇರುವ ಕೊಠಡಿಯಲ್ಲಿ ಸಿಸಿಟಿವಿಯೂ ಇದೆಯಂತೆ.
ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಗೆ ರಾಜಾತಿಥ್ಯ ನೀಡುತ್ತಿದ್ದಂತ ಪೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದವು. ಈ ಬೆನ್ನಲ್ಲೇ ಸರ್ಕಾರ ಕಾರಾಗೃಹ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ಪ್ರಕರಣದಲ್ಲಿ ಹೊಣೆ ಮಾಡಿ ಅಮಾನತುಗೊಳಿಸಿತ್ತು. ಈ ಬೆನ್ನಲ್ಲೇ ನಟ ದರ್ಶನ್ ಅವರನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ವರ್ಗಾಯಿಸುವ ಸಂಬಂಧ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಗೆ ಅನುಮತಿಗಾಗಿ ಅರ್ಜಿ ಸಲ್ಲಿಸಿದ್ದರು. ಇದಕ್ಕೆ ಕೋರ್ಟ್ ಅನುಮತಿ ನೀಡಿದೆ.
ಯಾವಾಗ ನಟ ದರ್ಶನ್ ಅವರನ್ನ ಬಳ್ಳಾರಿ ಜೈಲಿಗೆ ಶಿಫ್ಟ್ ಆಗ್ತಾರೆ ಅನ್ನೋದು ಗೊತ್ತಾಯ್ತೋ ಬಳ್ಳಾರಿ ಸೆಂಟ್ರಲ್ ಜೈಲ್ ಮುಂಭಾಗ ದರ್ಶನ್ ಅಭಿಮಾನಿಗಳು ಜಮಾಯಿಸುತ್ತಿದ್ದಾರೆ. ಮಧ್ಯಾಹ್ನ 1 ಗಂಟೆಗೆ ಶಿಫ್ಟ್ ಆಗಲಿದ್ದು, ಬಳ್ಳಾರಿ ಸೇರಿದಂತೆ ಬೇರೆ ಬೇರೆ ಜಿಲ್ಲೆಗಳಿಂದ ಅಭಿಮಾನಿಗಳು ಬಳ್ಳಾರಿ ಸೆಂಟ್ರಲ್ ಜೈಲಿನ ಬಳಿ ಕಾದು ಕುಳಿತಿದ್ದಾರೆ.
ಪೊಲೀಸ್ ಭದ್ರತೆಯಲ್ಲಿ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲು ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ. ಅದಕ್ಕೂ ಮೊದಲು ಒಂದು ಪ್ರಮುಖ ಪ್ರಕ್ರಿಯೆ ಮುಗಿಯಬೇಕಿದೆ. ಇಂದು (ಆಗಸ್ಟ್ 28) ದರ್ಶನ್ ಅವರ ನ್ಯಾಯಾಂಗ ಬಂಧನದ ಅವಧಿ ಪೂರ್ಣಗೊಳ್ಳಲಿದೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಅವರನ್ನು ಜಡ್ಜ್ ಮುಂದೆ ಹಾಜರು ಮಾಡಲಾಗುತ್ತದೆ. ದರ್ಶನ್ಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ ಮಾಡುವ ಸಾಧ್ಯತೆ ಇದೆ. ಕೋರ್ಟ್ ಪ್ರಕ್ರಿಯೆ ಬಳಿಕ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗುತ್ತದೆ.