ಬೆಂಗಳೂರು, (www.thenewzmirror.com);
ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟ ದರ್ಶನ್ ರೌಡಿಶೀಟರ್ ಗಳ ಜೊತೆಗೆ ಕಾಫಿ ಕುಡಿಯುತ್ತಾ ಹಾಗೂ ಸಿಗರೇಟ್ ಸಿಗುತ್ತಾ ಕುಳಿತಿರುವ ಫೋಟೋ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಈ ಕುರಿತಂತೆ ಗೃಹ ಸಚಿವ ಜಿ ಪರಮೇಶ್ವರ್ ಕಾರಾಗೃಹದ ಇಲಾಖೆಯ ಡಿಜಿ ಮಾಲಿನಿ ಕೃಷ್ಣಮೂರ್ತಿ ಅವರೊಂದಿಗೆ ಚರ್ಚೆ ಮಾಡಿದ್ದು, ತನಿಖೆ ನಡೆಸಿ ವರದಿ ನೀಡುವಂತೆ ಸೂಚನೆ ಕೊಟ್ಟಿದ್ದಾರೆ.
ಇದರ ಬೆನ್ನಲ್ಲೇ ಶರಣಬಸವ ಅಮೀನ್ ಗಡ, ಪುಟ್ಟಸ್ವಾಮಿ, ಖಂಡೇವಾಲಾ, ಶ್ರೀಕಾಂತ್, ವೆಂಕಪ್ಪ, ವಾರ್ಡರ್ ಬಸಪ್ಪ, ಸಂಪತ್ ಸೇರಿದಂತೆ ಏಳು ಮಂದಿಯನ್ನು ಅಮಾನತು ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಹಾಗೆನೇ ಮುಂದೆ ಇಂತಹ ಘಟನೆಗಳು ನಡೆಯದಂತೆ ಕ್ರಮ ಕೈಗೊಳ್ಳಲಾಗಿದೆ.
ನಟ ದರ್ಶನ್ ಅವರು ಪರಪ್ಪನ ಅಗ್ರಹಾರ ಜೈಲಿನಿಂದ ವಿಡಿಯೋ ಕಾಲ್ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ. ಹಾಗೆನೇ ಜೈಲಲ್ಲಿ ಹಾಯಾಗಿ ಸಮಯ ಕಳೆಯುತ್ತಿದ್ದಾರೆ. ಅವರು ವಿಲ್ಸನ್ ಗಾರ್ಡನ್ ನಾಗ, ಮ್ಯಾನೇಜರ್ ನಾಗರಾಜ್ ಒಟ್ಟಿಗೆ ಸಮಯ ಕಳೆಯುತ್ತಿರೋ ಫೋಟೋನ ಯಾರೋ ವೈರಲ್ ಮಾಡಿದ್ದಾರೆ.