ರಾಜ್ಯಪಾಲರ ಭೇಟಿಯಾದ ಕೃಷಿ ಸಚಿವ ಚಲುವರಾಯಸ್ವಾಮಿ

RELATED POSTS

ಬೆಂಗಳೂರು(www.thenewzmirror.com):ಮಂಡ್ಯದಲ್ಲಿ ನೂತನ ಕೃಷಿ ವಿಶ್ವವಿದ್ಯಾಲಯ ವಿಧೇಯಕ ಅನುಮೋದನೆಗೆ ಸಂಬಂಧಿಸಿದಂತೆ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಇಂದು ರಾಜಭವನದಲ್ಲಿ ರಾಜ್ಯಪಾಲರನ್ನ ಭೇಟಿ ಮಾಡಿ ಚರ್ಚೆ ನಡೆಸಿದರು.

ಕಳೆದ ಮಾರ್ಚ್ ನಲ್ಲಿ ನಡೆದ ಬಜೆಟ್ ಅಧಿವೇಶನದಲ್ಲಿ ನೂತನ ಮಂಡ್ಯ ಕೃಷಿ ವಿಶ್ವವಿದ್ಯಾಲಯ ಪ್ರಾರಂಭಿಸುವ ಕುರಿತು ಉಭಯ ಸದನಗಳಲ್ಲಿ ವಿಧೇಯಕವನ್ನು ಅಂಗೀಕರಿಸಿ ರಾಜ್ಯಪಾಲರ ಸಹಮತಿಗೆ ಕಳುಹಿಸಲಾಗಿತ್ತು. ಮಂಡ್ಯ ಕೃಷಿ ವಿಶ್ವವಿದ್ಯಾಲಯ ವಿಧೇಯಕದ ಬಗ್ಗೆ ಚರ್ಚಿಸಿ ರಾಜ್ಯಪಾಲರಿಗೆ ಸಹಮತಿ ನೀಡುವಂತೆ ಮನವಿ ಸಲ್ಲಿಸಿದರು. ಮನವಿ ಪುರಸ್ಕರಿಸಿದ ರಾಜ್ಯಪಾಲರು ನೂತನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ವಿಧೇಯಕಕ್ಕೆ ಸಹಮತಿ ನೀಡಿ ಅನುಮೋದಿಸಿರುತ್ತಾರೆ.ನೂತನ ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ವಿಧೇಯಕವನ್ನು ಅಂಗೀಕರಿಸಿದ್ದಕ್ಕಾಗಿ ಕೃಷಿ ಸಚಿವರು ರಾಜ್ಯಪಾಲರಿಗೆ ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕೃಷಿ ಸಚಿವರೊಂದಿಗೆ ವಿಧಾನ ಪರಿಷತ್ ಸದಸ್ಯ ಹಾಗೂ ಮುಖ್ಯಮಂತ್ರಿಗಳ ಕಾರ್ಯದರ್ಶಿ ಗೋವಿಂದ ರಾಜು, ಕೃಷಿ ಇಲಾಖೆ ಕಾರ್ಯದರ್ಶಿ ಅನ್ಬುಕುಮಾರ್,  ಕೃಷಿ ಸಚಿವರ ಆಪ್ತ ಕಾರ್ಯದರ್ಶಿ ಹೆಚ್. ಜಿ.ಪ್ರಭಾಕರ್, ಮಂಡ್ಯ ಕೃಷಿ ವಿಶ್ವ ವಿದ್ಯಾಲಯ ವಿಶೇಷಾಧಿಕಾರಿ ಹರಿಣಿಕುಮಾರ್, ಹಾಗೂ ಸಚಿವರ ವಿಶೇಷ ಕರ್ತವ್ಯಾಧಿಕಾರಿ ಎ.ಬಿ.ಪಾಟೀಲ್ ಹಾಜರಿದ್ದರು.

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist