ಶ್ರೀನಗರ/ಬೆಂಗಳೂರು, (www.thenewzmirror.com);
ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾಕದ ದಾಳಿ ನಡೆದು 15 ದಿನಗಳು ಕಳೆಯುತ್ತಾ ಬಂದಿದೆ. ಇದಕ್ಕೆ ಪ್ರತಿಯಾಗಿ ಭಾರತ ಸರ್ಕಾರ ‘ಆಪರೇಷನ್ ಸಿಂಧೂರ್’ ಹೆಸರಿನ ಕಾರ್ಯಾಚರಣೆ ನಡೆಸಿದೆ. ಭಾರತೀಯ ಸೇನೆಯ ‘ಆಪರೇಷನ್ ಸಿಂಧೂರ್’ ದಾಳಿಯಲ್ಲಿ 100 ಕ್ಕೂ ಹೆಚ್ಚು ಉಗ್ರರು ಬಲಿಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರ ನಲ್ಲಿರುವ 9 ಭಯೋತ್ಪಾದಕ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ.
ಈ ದಾಳಿಗಳಲ್ಲಿ ಸುಮಾರು ನೂರಕ್ಕೂ ಹೆಚ್ಚು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಮತ್ತು 55 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಭಾರತೀಯ ಸೇನೆಯ ರಫೇಲ್ ಜೆಟ್ ಗಳು ಭಯೋತ್ಪಾದಕ ಶಿಬಿರಗಳನ್ನು ‘ಸ್ಕ್ಯಾಲ್ಪ್ ಕ್ಷಿಪಣಿಗಳು’ ಬಳಸಿ ಹೊಡೆದು ಹಾಕಿವೆ.
ಆಪರೇಷನ್ ಸಿಂಧೂರ್ ಅಡಿಯಲ್ಲಿ, ಫ್ರಾನ್ಸ್‌ನಿಂದ ಆಮದು ಮಾಡಿಕೊಂಡ ರಫೇಲ್ ಯುದ್ಧ ವಿಮಾನವನ್ನು ಬಳಸಲಾಗಿದೆ.
ಪಾಕಿಸ್ತಾನದ ಸ್ಥಳೀಯ ವರದಿಗಳ ಪ್ರಕಾರ, ಬೆಳಗಿನ ಜಾವ 2 ಗಂಟೆಗೆ ನಡೆದ ದಾಳಿಯಲ್ಲಿ ಬಹಾವಲ್ಪುರದಲ್ಲಿ ನಡೆದ ವಾಯುದಾಳಿಯ ನಂತರ 30 ಜನರು ಸಾವನ್ನಪ್ಪಿದ್ದಾರೆ. ಲಷ್ಕರ್ ಮತ್ತು ಜೈಶ್‌ನ ಪ್ರಧಾನ ಕಚೇರಿಗಳು ನಾಶವಾಗಿವೆ. ಪಾಕಿಸ್ತಾನದ ಅಂತರ ಸೇವೆಗಳ ಸಾರ್ವಜನಿಕ ಸಂಪರ್ಕ (ISPR) ನಿರ್ದೇಶಕ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ, ಭಾರತ 24 ಕ್ಷಿಪಣಿಗಳನ್ನು ಹಾರಿಸಿದೆ ಎಂದು ತಿಳಿಸಿದ್ದಾರೆ.
ಪಾಕ್ ಉಗ್ರ ನೆಲೆಗಳ ಮೇಲೆ ಭಾರತೀಯ ಸೇನೆ ಕ್ಷಿಪಣಿ ದಾಳಿ ನಡೆಸಿದ್ದು, 9 ಉಗ್ರರ ನೆಲೆಗಳನ್ನು ದ್ವಂಸಗೊಳಿಸಿದೆ. ಪಾಕಿಸ್ತಾನದ 4 ಉಗ್ರ ನೆಲೆಗಳು, ಪಿಒಕೆಯ 5 ನೆಲೆಗಳ ಮೇಲೆ ಭಾರತೀಯ ಸೇನೆ ದಾಳಿ ನಡೆಸಿದೆ. ಈ ದಾಳಿಯಲ್ಲಿ ಪಾಕಿಸ್ತಾನದ ಬಹವಾಲ್ಪುರದಲ್ಲಿ ಭಾರತ ನಡೆಸಿದ ದಾಳಿಯಲ್ಲಿ 30 ಜೈಶ್ ಭಯೋತ್ಪಾದಕರು ಸಾವನ್ನಪ್ಪಿದ್ದಾರೆ.


ಕೊಟ್ಲಿ, ಬಹವಾಲ್ಪುರ್, ಮುಜಾಫರ್ ಬಾದ್, ಗುಲ್ಫರ್, ಭೀಂಬರ್, ಬಾಘ್, ಸಿಯಾಲ್ ಕೋಟ್, ಮುರಿದ್ಕೆ, ಚಕಾಮ್ರ ಮೇಲೆ ದಾಳಿ ನಡೆಸಿದೆ.
ಭಾರತದ ಸೇನೆ ದಾಳಿ ಹಿನ್ನೆಲೆಯಲ್ಲಿ ಪಾಕಿಸ್ತಾನದಲ್ಲಿ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದೆ. ತುರ್ತು ಸೇವೆ ಹೊರತುಪಡಿಸಿ ಎಲ್ಲಾ ಸೇವೆಗಳನ್ನು ಬಂದ್ ಮಾಡಲಾಗಿದೆ.
ದಾಳಿಯ ನಂತರ, ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್‌ಎಸ್‌ಎ) ಅಜಿತ್ ದೋವಲ್ ಅವರು ಅಮೆರಿಕದ ಎನ್‌ಎಸ್‌ಎ ಮತ್ತು ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಅವರನ್ನು ಸಂಪರ್ಕಿಸಿ ಕಾರ್ಯಾಚರಣೆಯ ಬಗ್ಗೆ ಮಾಹಿತಿ ನೀಡಿದರು. ದಾಳಿಯ ವರದಿಗಳು ತಮಗೆ ಬಂದಿವೆ ಎಂದು ಅಮೆರಿಕ ವಿದೇಶಾಂಗ ಇಲಾಖೆಯ ವಕ್ತಾರರು ಎಎನ್‌ಐಗೆ ತಿಳಿಸಿದ್ದಾರೆ.