ಬೆಂಗಳೂರು(www.thenewzmirror.com):ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಐಎಎಸ್ ಅಧಿಕಾರಿ ಅಕ್ರಂ ಪಾಷಾ ನೂತನ ವ್ಯವಸ್ಥಾಪಕರು ನೇಮಕಗೊಂಡಿದ್ದು, ಇಂದು ಕಾರ್ಯಭಾರ ವಹಿಸಿಕೊಳ್ಳುವ ಮೂಲಕ ರಾಜ್ಯ ರಸ್ತೆ ಸಾರಿಗೆ ನಿಗಮದ ಜವಾಬ್ದಾರಿ ವಹಿಸಿಕೊಂಡರು.
ಶಾಂತಿನಗರದಲ್ಲಿರುವ ಕೆಎಸ್ಆರ್ಟಿಸಿ ಕೇಂದ್ರ ಕಚೇರಿಯಲ್ಲಿ ನಿಗಮದ ಸಮವರ್ತಿತ ಕಾರ್ಯಭಾರವನ್ನು ವಹಿಸಿಕೊಂಡಿದ್ದ ಬೆಂ.ಮ.ಸಾ.ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ರಾಮಚಂದ್ರನ್ ಅವರು ಕರಾರಸಾ ನಿಗಮದ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ನಿಯುಕ್ತಿಗೊಂಡಿದ್ದ ಅಕ್ರಂ ಪಾಷ ಅವರಿಗೆ ಅಧಿಕಾರ ಹಸ್ತಾಂತರ ಮಾಡಿದರು.
ಈ ಹಿಂದೆ ಕರ್ನಾಟಕ ಗೃಹ ಮಂಡಳಿ ಹಾಗೂ ಕಾರ್ಮಿಕ ಇಲಾಖೆಯ ಆಯುಕ್ತರಾಗಿ ಮತ್ತು ಹಾಸನ ಹಾಗೂ ಕೋಲಾರ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿರುವ ಐಎಎಸ್ ಅಧಿಕಾರಿ ಅಕ್ರಂ ಪಾಷ ಅವರು ಈಗ ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕರಾಗಿ ಹೊಸ ಜವಾಬ್ದಾರಿ ವಹಿಸಿಕೊಂಡಿದ್ದಾರೆ.
ನೂತನ ವ್ಯವಸ್ಥಾಪಕ ನಿರ್ದೇಶಕರಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಶುಭ ಕೋರಿದ್ದು ಕೇಂದ್ರ ಕಚೇರಿಯ ಸಿಬ್ಬಂದಿ ಗೌರವಪೂರ್ವಕವಾಗಿ ನೂತನ ಎಂಡಿ ಅವರನ್ನು ಸ್ವಾಗತಿಸಿದರು.