ಬೆಂಗಳೂರು, (www.thenewzmirror.com) ;
ಉದ್ಯೋಗಿಗಳಿಗೆ ಫಿಎಫ್ ಹಣ ಪಾವತಿಸದೇ ವಂಚಿಸಿರುವ ಹಿನ್ನೆಲೆಯಲ್ಲಿ ಈಗ ಮಾಜಿ ಕ್ರಿಕೆಟ್ ಆಟಗಾರ ರಾಬಿನ್ ಉತ್ತಪ್ಪ ಅವರನ್ನು ಬಂಧಿಸುವಂತೆ ಅರೆಸ್ಟ್ ವಾರೆಂಟ್ ಜಾರಿ ಮಾಡಲಾಗಿದೆ.
ಪಿಎಫ್‌ಓ ರಿಜಿನಲ್ ಕಮಿಷನರ್ ಷಡಾಕ್ಷಿರಿ ರೆಡ್ಡಿ ಡಿಸೆಂಬರ್ 4 ರಂದು ಪುಲಕೇಶಿ ನಗರ ಪೊಲೀಸರಿಗೆ ಪತ್ರ ಬರೆದು ವಾರೆಂಟ್ ಜಾರಿ ಮಾಡಿ ಪೊಲೀಸರಿಗೆ ಅರೆಸ್ಟ್ ಮಾಡುವಂತೆ ಮನವಿ ಮಾಡಿದ್ದಾರೆ.
ಏನಿದು ವಂಚನೆ?
ಮಾಜಿ ಕ್ರಿಕೆಟರ್ ಹಾಗೂ ಕನ್ನಡಿಗ ರಾಬಿನ್ ಉತ್ತಪ್ಪ ಸೆಂಚುರಿಸ್ ಲೈಫ್ ಸ್ಟೈಲ್ ಬ್ರಾಂಡ್ ಪ್ರೈವೆಟ್ ಲಿಮಿಟೆಡ್ ಎಂಬ ಖಾಸಗಿ ಕಂಪನಿ ನಡೆಸುತ್ತಿದ್ದರು ಎನ್ನಲಾಗುತ್ತಿದೆ. ಈ ಕಂಪನಿಯಲ್ಲಿ ಕೆಲಸ ಮಾಡುತಿದ್ದ ಕೆಲವು ಉದ್ಯೋಗಿಗಳ ಪಿಎಫ್ ಖಾತೆಗೆ ಹಣ ಹಾಕದೆ ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ವಿರುದ್ಧ 23 ಲಕ್ಷ ರೂ. ವಂಚನೆ ಮಾಡಿದ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಪತ್ರ ಬರೆದ ಹಿನ್ನಲೆಯಲ್ಲಿ ಪೊಲೀಸರು ಕ್ರಮಕೈಗೊಂಡಿದ್ದಾರೆ. ಅಧಿಕಾರಿಗಳು ನೀಡಿದ್ದ ವಿಳಾಸದಲ್ಲಿ ರಾಬಿನ್ ಉತ್ತಪ್ಪ ವಾಸವಿಲ್ಲದಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ ವಾಪಸ್ ಆಗಿದ್ದಾರೆ.
ಸದ್ಯ ರಾಬಿನ್ ವಿದೇಶದಲ್ಲಿ ನೆಲೆಸಿರುವುದರಿಂದ ಯಾವ ರೀತಿ ಕ್ರಮವನ್ನು ಪುಲಕೇಶಿ ನಗರ ಪೊಲೀಸರು ತೆಗೆದುಕೊಳ್ಳುತ್ತಾರೆ ಕಾದು ನೋಡಬೇಕಾಗಿದೆ.