ಮೈಸೂರು(www.thenewzmirror.com): ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಆಷಾಢ ಶುಕ್ರವಾರವಾದ ಇಂದು ಕುಟುಂಬ ಸಮೇತವಾಗಿ ಮೈಸೂರಿನಲ್ಲಿರುಬ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದರು.
ಪತ್ನಿ ಅನಿತಾ ಕುಮಾರಸ್ವಾಮಿ, ಸೊಸೆ ರೇವತಿ ನಿಖಿಲ್ ಕುಮಾರಸ್ವಾಮಿ ಹಾಗೂ ಮೊಮ್ಮಗ ಚಿ.ಅವ್ಯಾನ್ ದೇವ್ ಅವರೊಂದಿಗೆ ಕೇಂದ್ರ ಸಚಿವರು ಚಾಮುಂಡಿಬೆಟ್ಟಕ್ಕೆ ತೆರಳಿ ಅಮ್ಮನವರ ದರ್ಶನ ಮಾಡಿಕೊಂಡರು.ವಿಶೇಷ ಪೂಜೆ ಸಲ್ಲಿಕೆ ಮಾಡಿದರು.
ನಂತರ ಮಾತನಾಡಿದ ಕುಮಾರಸ್ವಾಮಿ, ಕುಟುಂಬ ಸಮೇತವಾಗಿ ತಾಯಿ ಶ್ರೀ ಚಾಮುಂಡೇಶ್ವರಿಯ ದರ್ಶನ ಪಡೆದು ಕೃತಾರ್ಥನಾದೆ. ಸರ್ವರಿಗೂ ಶುಭವಾಗಲಿ ಹಾಗೂ ಎಲ್ಲೆಡೆ ಸುಖ ಶಾಂತಿ, ನೆಮ್ಮದಿ ಸಮೃದ್ಧಿ ನೆಲೆಸಲಿ ಎಂದು ಅಮ್ಮನವರಲ್ಲಿ ಭಕ್ತಿಪೂರ್ವಕವಾಗಿ ಅರಿಕೆ ಮಾಡಿಕೊಂಡೆ ಎಂದು ತಿಳಿಸಿದರು.