ಬೆಂಗಳೂರು, (www.thenewzmirror.com) ;
ದೆಹಲಿ ನೂತನ ಸಿಎಂ ಆಗಿ ಅತಿಶಿ ಆಯ್ಕೆಯಾಗಿದ್ದಾರೆ. ಇಂದು ನಡೆದ ಆಮ್ ಆದ್ಮಿ ಪಾರ್ಟಿಯ ಶಾಸಕಾಂಗ ಸಭೆಯಲ್ಲಿ ಅತಿಶಿ ಅವರನ್ನ ದೆಹಲಿಯ ನೂತನ ಸಿಎಂ ಆಗಿ ಆಯ್ಕೆ ಮಾಡಲಾಗಿದೆ.
ಇಂದಿನ ಆಪ್ ನ ಶಾಸಕಾಂಗ ಪಕ್ಷದ ಸಭೆಯಲ್ಲಿ ಪಕ್ಷದ ನಾಯಕ ದಿಲೀಪ್ ಪಾಂಡೆ, ನೂತನ ಮುಖ್ಯಮಂತ್ರಿ ಹೆಸರನ್ನ ಪ್ರಸ್ತಾಪಿಸುವಂತೆ ಮನವಿ ಮಾಡಿದರು. ಈ ವೇಳೆ ಆಪ್ ನ ರಾಷ್ಟ್ರೀಯ ಸಂಚಾಲಕ ಅತಿಶಿ ಹೆಸರನ್ನ ಪ್ರಸ್ತಾಪ ಮಾಡಿದ್ರು. ಇದಕ್ಕೆ ಸಭೆಯಲ್ಲಿದ್ದ ಶಾಸಕರೆಲ್ಲರೂ ಸಹಮತ ಸೂಚಿಸಿದ್ರು.
ಅತಿಶಿ ಪ್ರಸ್ಸುತ ದೆಹಲಿ ಸರ್ಕಾರದಲ್ಲಿ ಶಿಕ್ಷಣ ಮತ್ತು ಲೋಕೋಪಯೋಗಿ ಖಾತೆಯನ್ನ ಹೊಂದಿದ್ದು, ಅತ್ಯಂತ ಯಶಸ್ವಿಯಾಗಿ ನಿಭಾಯಿಸುತ್ತಿದ್ದಾರೆ. ಆಕ್ಸ್‌ಫರ್ಡ್ ವಿಶ್ವವಿದ್ಯಾನಿಲಯದ ಹಳೆಯ ವಿದ್ಯಾರ್ಥಿ ಮತ್ತು ರೋಡ್ಸ್ ವಿದ್ವಾಂಸರಾಗಿರುವ ಅತಿಶಿ, ಕಲ್ಕಾಜಿಯ ಶಾಸಕರಾಗಿ ಆಯ್ಕೆಯಾಗಿದ್ದಾರೆ.
ಕೇಜ್ರಿವಾಲ್ ಮತ್ತು ಸಿಸೋಡಿಯಾ ಜೈಲಿನಲ್ಲಿದ್ದಾಗ ಅತಿಶಿ ಪಕ್ಷದ ಕಾರ್ಯಕ್ರಮಗಳು ಮತ್ತು ಮಾಧ್ಯಮ ಸಂವಾದದಲ್ಲಿ ಪಕ್ಷದ ನಿಲುವನ್ನು ಸ್ಪಷ್ಪಡಿಸುವ ಮೂಲಕ ಬಿಜೆಪಿ ಹಾಗೂ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದರು.
ದೆಹಲಿಯ ಅಬಕಾರಿ ನೀತಿಯಡಿ ಬಂಧನಕ್ಕೀಡಾಗಿ ಇತ್ತೀಚೆಗೆ ಬಿಡುಗಡೆಯಾಗಿದ್ದರು. ಇದಾದ ಬಳಿಕ ನಡೆದ ಸಭೆಯೊಂದರಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡೋದಾಗಿ ತಿಳಿಸಿದ್ದರು. ಈ ವೇಳೆ ಅವವಧಿಗೂ ಮುನ್ನವೇ ದೆಹಲಿಯಲ್ಲಿ ಚುನಾವಣೆ ನಡೆಯುತ್ತೆ ಎಂದು ಭಾವಿಸಲಾಗಿತ್ತು. ಇದರ ಬೆನ್ನಲ್ಲೇ ಇಂದಿನ ಆಪ್ ಶಾಸಕಾಂಗ ಸಭೆಯಲ್ಲಿ ನೂತನ ಸಿಎಂ ಆಯ್ಕೆ ಮಾಡಲಾಗಿದೆ.
ಸೆಪ್ಟೆಂಬರ್ 26 ಮತ್ತು 27ರಂದು ದೆಹಲಿ ವಿಧಾನಸಭೆಯ ವಿಶೇಷ ಅಧಿವೇಶನ ಕರೆಯಲಾಗಿದೆ. ಅರವಿಂದ್ ಕೇಜ್ರಿವಾಲ್ ಇಂದು ಲೆಫ್ಟಿನೆಂಟ್ ಗವರ್ನರ್ ಭೇಟಿಯಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಯಿದೆ.