Ban Plastic | ಅಂತಾರಾಷ್ಟ್ರೀಯ ಪ್ಲಾಸ್ಟಿಕ್ ಚೀಲ ಮುಕ್ತ ದಿನಾಚರಣೆಯ ಅಂಗವಾಗಿ BBMP ಯಿಂದ ಜಾಗೃತಿ ಜಾಥಾ

ಬೆಂಗಳೂರು, (www.thenewzmirror.com) ;

ಇಂದು ಅಂತರಾಷ್ಟ್ರೀಯ ಪ್ಲಾಸ್ಟಿಕ್‌ ಚೀಲ ಮುಕ್ತ ದಿನಾಚರಣೆ. ಇದರ ಅಂಗವಾಗಿ ಬಿಬಿಎಂಪಿ ವತಿಯಿಂದ ಪ್ಲಾಸ್ಟಿಕ್‌ ಚೀಲ ಮುಕ್ತ ಅಭಿಯಾನವನ್ನ ಹಮ್ಮಿಕೊಳ್ಳಲಾಗಿತ್ತು. ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌, ಜಾಗೃತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಪ್ಲಾಸ್ಟಿಕ್‌ ಬಳಕೆ ನಿಲ್ಲಿಸುವಂತೆ ವ್ಯಾಪಾರಸ್ಥರಲ್ಲಿ ಹಾಗೂ ಸಾರ್ವಜನಿಕರಲ್ಲಿ ಮನವಿ ಮಾಡಿದ್ರು.

RELATED POSTS

ಜಾಗೃತಾ ಜಾಥಾದಲ್ಲಿ ಬೀದಿ ಬದಿ ವ್ಯಾಪಾರಿಗಳು, ಅಂಗಡಿ-ಮುಂಗಟ್ಟುಗಳಲ್ಲಿ ಮಾರಾಟ ಮಾಡುವವರಿಗೆ ಯಾವ್ಯಾವ ಪ್ಲಾಸ್ಟಿಕ್ ನಿಷೇಧವಾಗಿದೆ, ಯಾವುದನ್ನು ಬಳಸಲು ಅನುಮತಿಯಿದೆ ಎಂಬುದರ ಬಿತ್ತಿಪತ್ರಗಳನ್ನು ನೀಡಿ ಅರಿವು ಮೂಡಿಸಬೇಕು ಕರೆ ನೀಡಿದ್ರು.

ಜಾಗೃತಿ ಜಾಥಾ ಸಮಯದಲ್ಲಿ ಬೀದಿ ಬದಿ ವ್ಯಾಪಾರಿಗಳು ಹಾಗೂ ಅಂಗಡಿಗಳ ಬಳಿ ತೆರಳಿ ಬಿತ್ತಿಪತ್ರಗಳನ್ನು ವಿತರಿಸುವ ಜತೆಗೆ ಬಟ್ಟೆ ಚೀಲಗಳನ್ನು ವಿತರಿಸಿ ಇನ್ನು ಮುಂದೆ ಪ್ಲಾಸ್ಟಿಕ್ ಚೀಲಗಳನ್ನು ಬಳಸದೆ ಇದೇ ರೀತಿಯ ಬಟ್ಟೆ ಚೀಲಗಳನ್ನು ಮಾತ್ರ ಬಳಸಬೇಕು. ಯಾವದೇ ಕಾರಣಕ್ಕೂ ಪ್ಲಾಸ್ಟಿಕ್ ಚೀಲಗಳನ್ನು ಬಳಸಬಾರದೆಂದು ಮನವಿ ಮಾಡಿದರು. ಅಷ್ಟೇ ಅಲ್ದೇ ಎಳನೀರು ಮಾರಾಟ ಮಾಡುವವರಿಗೆ ಪೇಪರ್ ಸ್ಟ್ರಾ ವಿತರಣೆ ಮಾಡಿ ಪ್ಲಾಸ್ಟಿಕ್ ನಿಂದ ತಯಾರಿಸಿದ ಉತ್ಪನ್ನಗಳನ್ನು ಯಾವುದೇ ಕಾರಣಕ್ಕೂ ಬಳಸದಂತೆ ಮನವಿ ಮಾಡಿದರು. ಇದೇ ವೇಳೆ ಸಾರ್ವಜನಿಕರಿಗೆ ಮನೆಯಿಂದಲೇ ಕೈ ಚೀಲಗಳನ್ನು ತರಲು ಅಭ್ಯಾಸಮಾಡಿಕೊಳ್ಳಬೇಕು. ಇಲ್ಲವಾದಲ್ಲಿ ಸ್ಥಳಿಯವಾಗಿ ಲಭ್ಯವಿರುವ ಬಟ್ಟೆ ಚೀಲಗಳನ್ನು ಖರೀದಿಸಲು ಮನವಿ ಮಾಡಿದರು.

ಮೊದಲು ಎಚ್ಚರಿಕೆ ನಂತರ ದಂಡ:

ನಿಷೇಧಿತ ಪ್ಲಾಸ್ಟಿಕ್ ಬಳಸುವವರಿಗೆ ಪ್ಲಾಸ್ಟಿಕ್ ಚೀಲ ಬಳಸುತ್ತಿದ್ದರೆ ಮೊದಲು ಎಚ್ಚರಿಕೆ ನೀಡುತ್ತೇವೆ. ಮತ್ತೆ ಪ್ಲಾಸ್ಟಿಕ್ ಬಳಸುವುದು ಕಂಡುಬಂದರೆ ದಂಡ ವಿಧಿಸಲಾಗುವುದು. ಒಮ್ಮೆ ಬಳಸುವ ಪ್ಲಾಸ್ಟಿಕ್ ಪರಿಸಕ್ಕೆ ಹಾನಿಕಾರಕವಾಗಿದ್ದು, ಅದನ್ನು ನಾವೆಲ್ಲರೂ ಸೇರಿ ನಿಷೇಧಿಸೋಣ ಎಂದು ಅರಿವು ಮೂಡಿಸಿದರು.

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist