ಬೆಂಗಳೂರು, (www.thenewzmirror.com ) ;
ಬೆಂಗಳೂರಿನಲ್ಲಿ ಇನ್ನೂ ಮೂರು ದಿನ ಭಾರೀ ಮಳೆಯಾಗಲಿದೆ ಅಂತ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಜೂನ್ ಮೊದಲ ವಾರದಲ್ಲಿ ರಾಜ್ಯಕ್ಕೆ ಮುಂಗಾರು ಪ್ರವೇಶಿಸಲಿದ್ದು. ಅದಕ್ಕೂ ಮುನ್ನವೇ ವರುಣನ ಆರ್ಭಟ ಶುರುವಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಇಂದಿನಿಂದ ಮೂರು ದಿನ ಭಾರೀ ಮಳೆ ಯ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನಾಳೆ ಮತ್ತು ನಾಡಿದ್ದು ಅಂದರೆ ಮೇ 30 ಮತ್ತು 31 ರಂದು ಧಾರಾಕಾರವಾಗಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೊಡಗು, ಚಾಮರಾಜನಗರ, ತುಮಕೂರು, ಮಂಡ್ಯ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ರಾಮನಗರ ಜಿಲ್ಲೆಗಳಲ್ಲಿ ಮಳೆ ಸುರಿಯಲಿದೆ.
ಹೀಗಾಗಿ 10 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಎಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ಹೆಚ್ಚು ಅಪಾಯದ ಜಿಲ್ಲೆಗಳು ( ಹವಾಮಾನ ಇಲಾಖೆ ಮಾಹಿತಿ)
ಕಲ್ಬುರ್ಗಿ, ಗದಗ, ಹಾವೇರಿ, ಚಾಮರಾಜನಗರ, ಕೊಡಗು, ಮೈಸೂರು, ತುಮಕೂರು, ಹಾಸನ, ಚಿಕ್ಕಮಗಳೂರು, ರಾಮನಗರ, ಚಿತ್ರದುರ್ಗ, ದಾವಣಗೆರೆ