ಬೆಂಗಳೂರು, (www.thenewzmirror.com);
ಯುವಕರಲ್ಲಿ ಮತದಾನದ ಬಗ್ಗೆ ಅರಿವು ಮೂಡಿಸೋ ನಿಟ್ಟಿನಲ್ಲಿ ಸಾಕಷ್ಟಯ ಕಾರ್ಯಕ್ರಮಗಳನ್ನ ಚುನಾವಣಾ ಆಯೋಗ ಹಮ್ಮಿಕೊಳ್ಳುತ್ತಿದೆ. ಇದಕ್ಕೆ ಬೆಂಬಲ ಸೂಚಿಸಿರುವ ಬೆಂಗಳೂರು ವಿವಿ ವತಿಯಿಂದ ಮತದಾನ ಜಾಗೃತಿ ಕಾರ್ಯಕ್ರಮ ನಡೆಸಲಾಯಿತು.
14 ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಹಿನ್ನೆಲೆ ಯಲ್ಲಿ ಆಯೋಜಿಸಿದ್ದ ಅಭಿಯಾನವನ್ನ ಕುಲಪತಿ ಡಾ.ಜಯಕರ ಎಸ್ ಎಂ ವಿವಿಯ ಪ್ರಾಧ್ಯಾಪಕರು, ವಿಭಾಗ ಮುಖ್ಯಸ್ಥರು, ಅಧಿಕಾರಿಗಳು, ಸಿಬ್ಬಂದಿಗಳು, ಶಿಕ್ಷಕರಿಗೆ ರಾಷ್ಟ್ರೀಯ ಮತದಾನದ ಪ್ರತಿಜ್ಞಾ ವಿಧಿ ಭೋದಿಸಿದರು. ಮತದಾನದ ಪ್ರತಿಜ್ಞಾ ವಿಧಿ ಓದುವ ಮೂಲಕ ಪ್ರತಿಯೊಬ್ಬರು ತಮ್ಮ ಮತದಾನದ ಕರ್ತವ್ಯ ಪ್ರದರ್ಶಿಸುವ ಸಂಕಲ್ಪ ಮಾಡಿದರು.
ಚುನಾವಣಾ ಮತದಾನ ಪ್ರಕ್ರಿಯೆಯಲ್ಲಿ ನೊಂದಾಯಿಸಿಕೊಳ್ಳದ ವಿದ್ಯಾರ್ಥಿಗಳಿಗೆ, ನೊಂದಾಯಿಸಿಕೊಳ್ಳುವಂತೆ ಜಾಗೃತಿ ಮೂಡಿಸಲಾಯಿತು. ವೆಬ್‌ಸೈಟ್ ಮೂಲಕ ನೋಂದಣಿ ಪ್ರಕ್ರಿಯೆಯ ಬಗ್ಗೆ ಇದೇ ವೇಳೆ ಮಾಹಿತಿ ನೀಡಲಾಯಿತು. ಸ್ಪಾಟ್ ರಿಜಿಸ್ಟ್ರೇಷನ್ ಮೂಲಕ ಚುನಾವಣಾ ಮತದಾನದ ಪ್ರಕ್ರಿಯೆಯಲ್ಲಿ ನೋಂದಣಿಗೆ ಶಿಕ್ಷಕರು ಕೂಡ ಸಹಕರಿಸಿದರು.
ರಾಷ್ಟ್ರೀಯ ಮತದಾರರ ದಿನಾಚರಣೆ ಹಿನ್ನೆಲೆ ವಿಶ್ವವಿದ್ಯಾಲಯ ನಿರಂತರವಾಗಿ ಸಾಮಾಜಿಕ ಕಳಕಳಿ ಸಾರ್ವಜನಿಕ ಜವಾಬ್ದಾರಿ ಮತ್ತು ಮತದಾನ ಕುರಿತು ಅರಿವು ಮೂಡಿಸುವ ಕಾರ್ಯದಲ್ಲಿ ನಿರತವಾಗಿದೆ. ಅದರ ಭಾಗವಾಗಿ ವಿದ್ಯಾರ್ಥಿಗಳಲ್ಲಿ ಮತದಾನ ಪ್ರಕ್ರಿಯೆಯ ಬಗ್ಗೆ ಅರಿವು ಮೂಡಿಸಲು ಪ್ರಬಂಧ ಸ್ಪರ್ಧೆ ನಡೆಸಲಾಗಿತ್ತು. 28 ವಿದ್ಯಾರ್ಥಿಗಳು ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿದ್ದು,ಸೂಕ್ತ ಪ್ರಬಂಧಕ್ಕೆ ಇಂದು ಬಹುಮಾನ ಕೂಡ ವಿತರಿಸಲಾಯಿತು. ಮತ್ತು ಈ ರೀತಿಯ ಕಾರ್ಯಕ್ರಮಗಳಲ್ಲಿ ಭಾಗಿಯಾಗುವಂತೆ ವಿದ್ಯಾರ್ಥಿಗಳಿಗೆ ತಿಳಿಸಲಾಯಿತು.
ಈ ಸಂದರ್ಭದಲ್ಲಿ ಕುಲಸಚಿವ ಶೇಕ್ ಲತೀಫ್,ಕುಲಸಚಿವ ಮೌಲ್ಯಮಾಪನ ಡಾ.ಶ್ರೀನಿವಾಸ್ ಕೂಡ ಉಪಸ್ಥಿತರಿದ್ದರು.