ಬೆಂಗಳೂರು, (www.thenewzmirror.com) ;
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಹೆಚ್ಚಳದ ಕುರಿತು ಇತ್ತೀಚೆಗೆ ಕೆಲ ಮಾಧ್ಯಮಗಳಲ್ಲಿ ವರದಿಯಾಗಿದ್ದು, ಆಸ್ತಿ ತೆರಿಗೆ ಹೆಚ್ಚಳದ ಸಂಬಂಧ ಯಾವುದೇ ಪ್ರಸ್ತಾವನೆಯಾಗಲಿ, ಚಿಂತನೆಯಾಗಲಿ ಇರುವುದಿಲ್ಲವೆಂದು ಬಿಬಿಎಂಪಿ ಕಂದಾಯ ವಿಭಾಗದ ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್ ಸ್ಪಷ್ಟೀಕರಿಸಿದ್ದಾರೆ.
ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಹೆಚ್ಚಳ ವಿಚಾರವಾಗಿ ಯಾವುದೇ ಪ್ರಸ್ತಾವನೆ ಇರುವುದಿಲ್ಲ. ಈ ರೀತಿಯ ಊಹಾಪೋಹಗಳಿಗೆ ಯಾರೂ ಕಿವಿಗೊಡಬಾರದೆಂದು ಪ್ರಕರಣೆಯಲ್ಲಿ ಮಾಹಿತಿ ನೀಡಿದ್ದಾರೆ. ಲೋಕ ಸಮರ ಮುಗಿಯುತ್ತಿದ್ದಂತೆ ಆಸ್ತಿ ತೆರಿಗೆ ಹೆಚ್ಚಳ ಮಾಡಲು ಸರ್ಕಾರ ಮುಂದಾಗಿದೆ ಎಂಬ ಸುದ್ದಿ ಹರಿದಾಡುತ್ತಿತ್ತು.