ಬೆಂಗಳೂರು, (www.thenewzmirror.com ) ;
ಬಿಬಿಎಂಪಿಯಲ್ಲಿ ಪ್ರತಿ ತಿಂಗಳು ನಿವೃತ್ತರಾದವರಿಗೆ ಸನ್ಮಾನ ಮಾಡುವ ಕಾರ್ಯಕ್ರಮ ನಿರಂತರವಾಗಿ ಮಾಡಿಕೊಂಡು ಬರಲಾಗುತ್ತಿದೆ. ಅದೇ ರೀತಿ ಈ ಬಾರಿಯೂ ಮೇ ತಿಂಗಳಲ್ಲಿ ನಿವೃತ್ತಿಯಾದ 52 ಅಧಿಕಾರಿ, ನೌಕರರಿಗೆ ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ದಿ ಸಂಘದ ವತಿಯಿಂದ ಸನ್ಮಾನ ಸಮಾರಂಭ ಅದ್ಧೂರಿಯಾಗಿ ಜರುಗಿತು.
ಜನ ಸೇವೆಯೆ ಜನಾರ್ಧನ ಸೇವೆ ಅಂದರೆ ದೇವರ ಸೇವೆ ಮಾಡಿದಂತೆ , ತಮ್ಮ ಜೀವನ ಬಹುಪಾಲು ಸಮಯವನ್ನು ನಗರ ಅಭಿವೃದ್ದಿ ಮತ್ತು ಜನರ ಸಮಸ್ಯೆ ನಿವಾರಣೆಗಾಗಿ ಹಗಲಿರುಳು ಶ್ರಮಿಸಿದ ಅಧಿಕಾರಿ ಮತ್ತು ನೌಕರರು ತಮ್ಮ ಸೇವೆಯಿಂದ ನಿವೃತ್ತರಾಗಿದ್ದಾರೆ.
ಹೀಗೆ ಸಾರ್ವಜನಿಕರಿಗೆ ಕೈಲಾದಷ್ಟು ಮಟ್ಟಿಗೆ ಸಹಾಯ ಮಾಡಿದ್ದ 52 ಅಧಿಕಾರಿಗಳಿಗೆ ಇಂದು
ಗೌರವ ಸನ್ಮಾನ ನೀಡಿ, ಗೌರವಪೂರ್ವಕವಾಗಿ ಬೀಳ್ಕೊಡುಗೆ ಮಾಡಲಾಯ್ತು.
ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷ ಎ.ಅಮೃತ್ ರಾಜ್ ನೇತೃತ್ವದಲ್ಲಿ ಇದೂವರಗೂ ಸಂಘ 63 ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ 1500ಕ್ಕೂ ಅಧಿಕಾರಿ, ನೌಕರರಿಗೆ ಗೌರವ ಸಮರ್ಪಣೆ ಮಾಡಲಾಗಿದೆ.
ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ದಿ ಸಂಘದ ಪದಾಧಿಕಾರಿಗಳಾದ ಸಾಯಿಶಂಕರ್, ಬಾಬಣ್ಣ, ಕೆ.ಜಿ.ರವಿ, ಡಿ.ರಾಮಚಂದ್ರ, ರುದ್ರೇಶ್,ನಂಜಪ್ಪ, ಮಂಜೇಗೌಡ, ಸಂತೋಷ್ ಕುಮಾರ್ ನಾಯಕ್, ನರಸಿಂಹ, ಸಂದ್ಯಾ, ರೇಣುಕಾಂಬ, ಸೂರ್ಯಕುಮಾರಿ, ಉಮಾದೇವಿ ಸೇರಿದಂತೆ ಇತರರು ಭಾಗವಹಿಸಿದ್ದರು.