ಬೆಂಗಳೂರು, (www.thenewzmirrir.com) :
ಲೋಕಸಭೆ ಚುನಾವಣೆ ಹೊತ್ತಲ್ಲೇ ಆಡಳಿತ ರೂಢ ಕಾಂಗ್ರೆಸ್ ನಲ್ಲಿ ಯಾವುದೂ ಸರಿ ಇಲ್ವಾ ಎನ್ನುವ ಪ್ರಶ್ನೆ ಮೂಡುತ್ತಿದೆ. ಇದಕ್ಕೆ ಪೂರಕ ಎನ್ನುವಂತೆ ಸಚಿವ ಮುನಿಯಪ್ಪ ಚಿತ್ರವಿರುವ ಬ್ಯಾನರ್ ಅನ್ನ ಬಿಬಿಎಂಪಿ ಸಿಬ್ಬಂದಿ ತೆಗೆದಿದ್ದಾರೆ. ಬೆಂಗಳೂರು ಉಸ್ತುವಾರಿ ವಹಿಸಿರುವ ಡಿಸಿಎಂ ಡಿಕೆಶಿ ಸೂಚನೆ ಮೇರೆಗೆ ಅಧಿಕಾರಿಗಳು ಈ ಕ್ರಮ ಕೈಗೊಂಡಿದ್ದಾರೆ.
ನಗರದ ಪೂರ್ವ ವಲಯ ವಸಂತನಗರ ವ್ಯಾಪ್ತಿಗೆ ಬರುವ ಸ್ಯಾಂಕಿ ರಸ್ತೆಯ, ರೇನ್ ಟ್ರಿ ಬೊಲೆವಾರ್ಡ್ ಕಟ್ಟಡ ಹತ್ತಿರ ಅಳವಡಿಸಿಸ್ದ ಬ್ಯಾನರ್ ಅನ್ನು ತೆರವುಗೊಳಿಸಿ, ಬ್ಯಾನರ್ ಅಳವಡಿಸಿದ್ದವರಿಗೆ 50000 ರೂ. ದಂಡ ವಿಧಿಸಲಾಗಿದೆ.
ವಸಂತನಗರ ವ್ಯಾಪ್ತಿಗೆ ಬರುವ ಸ್ಯಾಂಕಿ ರಸ್ತೆಯ, ರೇನ್ ಟ್ರಿ ಬೊಲೆ ವಾರ್ಡ್ ಕಟ್ಟಡ ಹತ್ತಿರ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ 2023ರ ಕಾಂಗ್ರೆಸ್ ಅಭ್ಯರ್ಥಿ, ಕೆ.ಪಿ.ಸಿ.ಸಿ ಕೋ-ಅರ್ಡಿನೇಟರ್ ಹಾಗೂ ಎ.ಬಿ.ಡಿ.ಗ್ರೂಪ್ ಟ್ರಸ್ಟ್ ಸಂಸ್ಥಾಪಕ ಅಧ್ಯಕ್ಷರಾದ ರಾಜೀವ್ ಗೌಡ ಆಹಾರ ಮತ್ತು ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರ ಸಚಿವ ಕೆ.ಹೆಚ್.ಮುನಿಯಪ್ಪ ಜನ್ಮ ದಿನಾಚರಣೆಯ ಅಂಗವಾಗಿ ಅನಧಿಕೃತವಾಗಿ ಬ್ಯಾನರ್ ಅನ್ನು ಅಳವಡಿಸಿರುವುದು ಕಂಡುಬಂದಿರುತ್ತದೆ.
ಸದರಿ ಸ್ವತ್ತಿನಲ್ಲಿ ಅನಧಿಕೃತವಾಗಿ ಬ್ಯಾನರ್ ಅಳವಡಿಸಿರುವ ಬಗ್ಗೆ ಪಾಲಿಕೆವತಿಯಿಂದ ಅಧಿಕೃತವಾಗಿ ಪರವಾನಿಗೆ/ಅನುಮತಿಯನ್ನು ಪಡೆದಿರುವುದಿಲ್ಲ. ಮೇಲ್ಕಂಡ ಉಲ್ಲೇಖಗಳ ಆಧಾರ 50000 ರೂ. ದಂಡ ವಿಧಿಸಿ ಪಾಲಿಕೆ ಮಾನ್ಯ ಮುಖ್ಯ ಆಯುಕ್ತರ ಖಾತೆಗೆ ಪಾವತಿಸುವಂತೆ ವಸಂತನಗರದ ಸಹಾಯಕ ಕಂದಾಯ ಅಧಿಕಾರಿ ರವರು ಪತ್ರದ ಮೂಲಕ ಸೂಚಿಸಿರುತ್ತಾರೆ.