ಬೆಂಗಳೂರು,(www.thenewzmirror.com) :
ಮಾರ್ಚ್ 8 ರಂದು ಬಿಬಿಎಂಪಿ ವ್ಯಾಪ್ತಿಯಲ್ಲಿ ಮಾಂಸ ಮಾರಾಟ ಮಾಡುವಂತಿಲ್ಲ. ಹೀಗಂತ ಬಿಬಿಎಂಪಿ ಆದೇಶ ಹೊರಡಿಸಿದೆ.
ಮಾರ್ಚ್ 8 ಅಂದರೆ ನಾಳೆ ಮಹಾ ಶಿವರಾತ್ರಿ ಹಬ್ಬ. ಈ ಹಿನ್ನಲೆಯಲ್ಲಿ ಬೆಂಗಳೂರಲ್ಲಿ ಪ್ರಾಣಿವಧೆ ಮತ್ತು ಮಾಂಸ ಮಾರಾಟವನ್ನು ನಿಷೇಧಿಸಿ ಬಿಬಿಎಂಪಿ ಆದೇಶಿಸಿದೆ.
ಈ ಕುರಿತಂತೆ ಇಂದು ಬಿಬಿಎಂಪಿಯ ಪಶುಪಾಲನಾ ವಿಭಾಗದ ಜಂಟಿ ನಿರ್ದೇಶಕ ಡಾ.ರವಿಕುಮಾರ್ ಆದೇಶಿಸಿದ್ದು, ದಿನಾಂಕ: 08.03.2024ರ ಶುಕ್ರವಾರ “ಮಹಾ ಶಿವರಾತ್ರಿ” ಹಬ್ಬದ ಪ್ರಯುಕ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.