ಬೆಂಗಳೂರು, (www.thenewzmirror.com ) ;
ರಾಜ್ಯದಲ್ಲಿ ಸಾರ್ವತ್ರಿಕ ಚುನಾವಣೆ ಮುಕ್ತಾಯಗೊಂಡಿದೆ. ಚುನಾವಣೆ ಹಿನ್ನಲೆಯಲ್ಲಿ ರಾಜ್ಯದಲ್ಲಿ ಹೇರಿದ್ದ ಮಾದರಿ ನೀತಿ ಸಂಹಿತೆಯನ್ನೂ ವಾಪಾಸ್ ಪಡೆಯಲಾಗಿದೆಮ ಇದರ ಬೆನ್ನಲ್ಲೇ ಇದೀಗ ಬಿಬಿಎಂಪಿ ಆಸ್ತಿ ತೆರಿಗೆ ಪಾವತಿಗೆ ಶೇಕಡಾ 5 ರಷ್ಟು ರಿಯಾಯಿತಿ ನೀಡುವಂತೆ ಮನವಿ ಬಿಬಿಎಂಪಿಗೆ ಬಂದಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ವತ್ತುಗಳಿಗೆ ಆಸ್ತಿ ತೆರಿಗೆಯಲ್ಲಿ ಶೇಕಡಾ 5 ರಷ್ಟು ರಿಯಾಯಿತಿ ನೀಡುವಂತೆ ಬಿಬಿಎಂಪಿ ಮಾಜಿ ಸದಸ್ಯರು ಹಾಗೂ ಮಾಜಿ ಆಡಳಿತ ಪಕ್ಷದ ನಾಯಕರಾದ ಅಬ್ದುಲ್ ವಾಜೀದ್ ಹಾಗೂ ಶಿವರಾಜ್ ಮನವಿ ಮಾಡಿದ್ದು, ಮನವಿ ಪತ್ರವನ್ನ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಗೆ ಸಲ್ಲಿಸಿದ್ದಾರೆ.
ಪ್ರತಿ ವರ್ಷ ಪಾಲಿಕೆ ವ್ಯಾಪ್ತಿಯಲ್ಲಿನ ಸ್ವತ್ತುಗಳಿಗೆ ಏಪ್ರಿಲ್ ಮೇ ತಿಂಗಳಲ್ಲಿ ಶೇಕಡಾ 5 ರಷ್ಟು ರಿಯಾಯಿತಿ ನೀಡಿ ಆಸ್ತಿ ತೆರಿಗೆ ಕಟ್ಟಲು ಅವಕಾಶ ನೀಡಲಾಗುತ್ತಿತ್ತು. ಆದರೆ ಪ್ರಸ್ತುತ ವರ್ಷದಲ್ಲಿ ಚುನಾವಣೆ ಬಂದಿದ್ದರಿಂದ ಮಾದರಿ ನೀತಿ ಸಂಹಿತೆ ಜಾರಿ ಮಾಡಲಾಗಿತ್ತು.
ಹೀಗಾಗಿ 2023-24 ನೇ ಸಾಲಿನಲ್ಲಿ ರಿಯಾಯಿತಿ ಘೋಷಣೆ ಮಾಡಿರಲಿಲ್ಲ.ಇದೀಗ MCC. ಮುಕ್ತಾಯಗೊಂಡಿದ್ದು, ಶೇಕಡಾ 5 ರಷ್ಟು ಆಸ್ತಿ ತೆರಿಗೆ ಪಾವತಿದಾರರಿಗೆ ರಿಯಾಯಿತಿ ನೀಡುವಂತೆ ಮನವಿ ಮಾಡಿದ್ದಾರೆ.
ವಿಧಾನಸಭಾ ಚುನಾವಣೆ ಪ್ರಕ್ರಿಯೆಗಾಗಿ ಅಧಿಕಾರಿಗಳು ಕಚೇರಿಯಲ್ಲಿ ಲಭ್ಯವಿಲ್ಲದ ಕಾರಣ ಸಾಕಷ್ಟ ತೆರಿಗೆದಾರರು ರೆರಿಗೆ ಪಾವತಿ ಮಾಡಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಕನಿಷ್ಠ ಒಂದು ತಿಂಗಳು ರಿಯಾಯಿತಿ ನೀಡಿ ಅಂತ ಕಾಂಗ್ರೆಸ್ ನ ಮಾಜಿ ಕಾರ್ಪೋರೇಟರ್ಸ್ ಮನವಿ ಮಾಡಿದ್ದಾರೆ.