ಬೆಂಗಳೂರು, (www.thenewzmirror.com);
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಮಾನ್ಯ ಆಯುಕ್ತ ಜಯರಾಮ್ ರವರ ನಿರ್ದೇಶನದಂತೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆರಕ್ಷಕ ಅಧೀಕ್ಷಕ ಕೆ. ನಂಜುಂಡೇಗೌಡ ನೇತೃತ್ವದಲ್ಲಿ ಇಂದು ನಡೆದ ಕಾರ್ಯಾಚರಣೆಯಲ್ಲಿ ಹೇರೋಹಳ್ಳಿ ಗ್ರಾಮದಲ್ಲಿ ಸುಮಾರು ರೂ. 35 ಕೋಟಿ ಆಸ್ತಿಯನ್ನು ವಶಪಡಿಸಿಕೊಂಡಿರುತ್ತದೆ.


ಬೆಂಗಳೂರು ಉತ್ತರ ತಾಲ್ಲೂಕು, ಯಶವಂತಪುರ ಹೋಬಳಿ, ಹೇರೋಹಳ್ಳಿ ಗ್ರಾಮದ ಸರ್ವೆ ನಂಬರ್ 64ರಲ್ಲಿನ ಪ್ರಾಧಿಕಾರದ 0-32.45 ಗುಂಟೆ ಜಮೀನಿನಲ್ಲಿ ಸ್ಥಳೀಯರು ಅನಧಿಕೃತವಾಗಿ ನಿರ್ಮಾಣ ಮಾಡಿಕೊಂಡಿದ್ದ ಶೆಡ್ ಗಳು / ಕಟ್ಟಡಗಳನ್ನು ತೆರವುಗೊಳಿಸಿ ಸುಮಾರು 35 ಕೋಟಿ ರೂ. ಬೆಲೆಯ ಜಮೀನನ್ನು ಪ್ರಾಧಿಕಾರವು ತನ್ನ ವಶಕ್ಕೆ ತೆಗೆದುಕೊಂಡಿರುತ್ತದೆ.
ಈ ಕಾರ್ಯಾಚರಣೆಯಲ್ಲಿ ಪಶ್ಚಿಮ ವಿಭಾಗದ ಕಾರ್ಯಪಾಲಕ ಅಭಿಯಂತರ ರವಿಕುಮಾರ್, ಸಹಾಯಕ ಕಾರ್ಯಪಾಲಕ ಅಭಿಯಂತರ ಚಂದ್ರಶೇಖರ್ ಹಾಗೂ ಆರಕ್ಷಕ ಉಪಾಧೀಕ್ಷಕ ಯು.ಡಿ. ಕೃಷ್ಣಕುಮಾರ್ ಮತ್ತು ಪೊಲೀಸ್ ಇನ್ಸ್ ಪೆಕ್ಟರ್ ಟಿ. ಸಂಜೀವರಾಯಪ್ಪ ಇವರುಗಳನ್ನು ಒಳಗೊಂಡಂತೆ ಸ್ಥಳೀಯ ಪೊಲೀಸ್ ಇಲಾಖೆಯ ಸಹಕಾರದೊಂದಿಗೆ ನೆರವೇರಿಸಲಾಯಿತು.