Bengaluru Blast | ಬಾಂಬ್ ಇಟ್ಟವನ ಚಲನವಲನ ಪತ್ತೆ.! ಸಿಸಿಟಿವಿಯಲ್ಲಿ ಆರೋಪಿ ಚಹರೆ ಸೆರೆ.!

ಬೆಂಗಳೂರು,(www.thenewzmirror.com) :

ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ಸಿಸಿಟಿವಿಯಲ್ಲಿ ಶಂಕಿತ ಆರೋಪಿಯ ಚಹರೆ, ಚಲನವಲನ ದೃಶ್ಯ ಸೆರೆಯಾಗಿದೆ. ಘಟನಾ ಸ್ಥಳದ ಬಳಿಯ ಸಿಸಿಟಿವಿಯಲ್ಲಿ ಆರೋಪಿಯ ಚಲನವಲನ ದೃಶ್ಯ ಸೆರೆಯಾಗಿದ್ದು ಆರೋಪಿಯ ಗುರುತು ಪತ್ತೆಗಾಗಿ ಕಾರ್ಯಾಚರಣೆ ಮುಂದುವರಿದಿದೆ.

RELATED POSTS

ತಲೆ ಮೇಲೆ ಹ್ಯಾಟ್​​​​ ಹಾಕಿಕೊಂಡಿರುವ ಶಂಕಿತ ವ್ಯಕ್ತಿಯಿಂದ ಬಾಂಬ್​​​? ಇಡಲಾಗಿದೆ ಎಂಬ ಅನುಮಾನ ವ್ಯಕ್ತವಾಗಿದೆ. ಆರೋಪಿ ಹಾಕಿರುವ ಬಿಳಿ ಬಣ್ಣದ ಹ್ಯಾಟ್​​ ಮೇಲೆ ನಂಬರ್ 10 ಎಂದು ನಮೂದಿಸಲಾಗಿದೆ. ಸದ್ಯ ಆರೋಪಿಗಾಗಿ ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದಾರೆ.

ಆರೋಪಿ ಕಪ್ಪು ಬಣ್ಣದ ಮಾಸ್ಕ್​ ಹಾಕಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆರೋಪಿ ಕಪ್ಪು ಬಣ್ಣದ ಬ್ಯಾಗ್​ ಜೊತೆ ರಾಮೇಶ್ವರಂ ಕೆಫೆ​ಗೆ ಬಂದಿದ್ದ. ಕೆಫೆಯಲ್ಲಿ ತಿಂಡಿಯ ಪ್ಲೇಟ್ ಹಿಡಿದು ಓಡಾಡಿರುವ ದೃಶ್ಯ ಸೆರೆಯಾಗಿದೆ. ಹೋಗುತ್ತಾ ವಾಚ್​ನಲ್ಲಿ ಟೈಂ ನೋಡಿ ಹೋಗಿದ್ದು ಕೆಫೆಯಿಂದ ಹೊರಗೆ ಬಂದು ಎಡಭಾಗಕ್ಕೆ ಹೋಗಿದ್ದಾನೆ. ಶಂಕಿತ ಆರೋಪಿಯ ಚಲನವಲನ ಸೆರೆಯಾಗಿರುವ ಸಿಸಿಟಿವಿ ಲಭ್ಯವಾಗಿದೆ.

ಸದ್ಯ ಈ ಹಿಂದೆ UAPA ಪ್ರಕರಣದಲ್ಲಿ ಭಾಗಿಯಾಗಿದ್ದ ಹಾಗೂ ಪ್ರಕರಣದ ಆರೋಪಿಗಳ ಜೊತೆ ಸಂಪರ್ಕದಲ್ಲಿದ್ದವರ ವಿಚಾರಣೆ ನಡೆಸಲಾಗುತ್ತಿದೆ.

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist