Bengaluru Blast | AI ತಂತ್ರಜ್ಞಾನ ಬಳಸಿ ಬಾಂಬ್ ಇಟ್ಟವನ ಪತ್ತೆ ಮುಂದಾದ ಪೊಲೀಸ್.!

ಬೆಂಗಳೂರು, (www.thenewzmirror.com) :

ರಾಮೇಶ್ವರ ಕೆಫೆ  ಘಟನೆಯ ಸಂಪೂರ್ಣ ಸತ್ಯ ಹೊರಗೆ ಬರಲಿ. ತಂತ್ರಜ್ಞಾನದ ಸಾಧ್ಯತೆಗಳನ್ನು ತನಿಖೆಯಲ್ಲಿ ಪರಿಣಾಮಕಾರಿಯಾಗಿ ಬಳಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು.

RELATED POSTS

ಗೃಹ ಇಲಾಖೆಯ ಉನ್ನತ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ಕೊಟ್ಟರು ಹಾಗೆನೇ ಜನನಿಬಿಡ ಸ್ಥಳಗಳನ್ನು  ಗುರುತಿಸಿ ಅಂಥ  ಪ್ರದೇಶಗಳಲ್ಲಿ  ಪೊಲೀಸ  ಗಸ್ತು   ಹೆಚ್ಚಿಸಿ. ಜನರಿಗೆ ರಕ್ಷಣೆ ಒದಗಿಸಬೇಕು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.

ರಾಮೇಶ್ವರ ಕಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಲು ಸೂಚಿಸಿದ ಮುಖ್ಯಮಂತ್ರಿಗಳು ಇಂಥ ಪ್ರಕರಣ ಗಳು ಮರುಕಳಿಸದಂತೆ  ಎಚ್ಚರ ವಹಿಸಬೇಕೆಂದರು.

ಪೊಲೀಸರು ಇಂಥ ಘಟನೆ ನಡೆದಾಗ ಎಚ್ಚರಿಕೆ ವಹಿಸಿ ನಂತರ ಮರೆಯುವುದಾಗಬಾರದು. ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹಬ್ಬಿಸಿ ಜನರ ದಾರಿ ತಪ್ಪಿಸುವ ಕೆಲಸವನ್ನು ಮಟ್ಟ ಹಾಕುವಂತೆ ಸೂಚನೆ ನೀಡಿದರು.

ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡುವ ಸಮಾಜ ದ್ರೋಹಿಗಳ ಬಗ್ಗೆ ಯಾವುದೇ ಸಹಾನುಭೂತಿ ಇಲ್ಲದೇ ಕ್ರಮ ಜರುಗಿಸಬೇಕು ಎಂದು ಸೂಚಿಸಿದರು. ಈ ಬಗ್ಗೆಯೇ ಪೊಲೀಸ್ ಇಲಾಖೆ ಜೊತೆಗೆ ಪ್ರತ್ಯೇಕ ಸಭೆ ಕರೆಯುವುದಾಗಿ ಹೇಳಿದರು.  ಸಮಯ ಸಂದರ್ಭಕ್ಕೆ ತಕ್ಕಂತೆ ನಾವೂ ಬದಲಾಗಬೇಕು. ತ್ವರಿತ ಗತಿಯಲ್ಲಿ ಕೆಲಸ ಮಾಡಬೇಕು ಎಂದರು.

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist