ಬೆಂಗಳೂರಿಗರೇ ಗಮನಿಸಿ:ಜೂನ್‌ 19 ರಂದು ಕಾವೇರಿ ನೀರು ಬರಲ್ಲ

RELATED POSTS

ಬೆಂಗಳೂರು(www.thenewzmirror.com) : ತುರ್ತು ನಿರ್ವಹಣಾ ಕಾಮಗಾರಿಗಳನ್ನ ಕೈಗೊಳ್ಳುವುದರಿಂದ ಜೂನ್ 19 ರಂದು ಬೃಹತ್ ಬೆಂಗಳೂರು ನಗರ ಪ್ರದೇಶದ ವ್ಯಾಪ್ತಿಯಲ್ಲಿ ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯಯವಾಗುವುದರಿಂದ ಬೆಂಗಳೂರಿನ ನಾಗರೀಕರಿಗೆ ಹಾಗೂ ವಾಣಿಜ್ಯ/ಕೈಗಾರಿಕಾ ಪ್ರದೇಶಗಳಿಗೆ ಮುಂಜಾಗ್ರತೆಯಾಗಿ ಅಗತ್ಯವಿರುವ ನೀರನ್ನು ಸಂಗ್ರಹಣೆ ಮಾಡಿಕೊಳ್ಳುವಂತೆ ಬಿಡಬ್ಲ್ಯುಎಸ್ಎಸ್ಬಿ ಕೋರಿದೆ.

ಬೃಹತ್ ಬೆಂಗಳೂರು ನಗರದ ಜನತೆಗೆ ಯಾವುದೇ ಅಡತಡೆಯಿಲ್ಲದೇ ನೀರನ್ನು ಸರಬರಾಜು ಮಾಡುವ ಸದುದ್ದೇಶದಿಂದ ಟಿ.ಕೆ. ಹಳ್ಳಿಯಲ್ಲಿ ಕಾವೇರಿ 5ನೇ ಹಂತದ ಕೊಳವೆ ಮಾರ್ಗಕ್ಕೆ ಹೊಸ 3000 ಮಿ.ಮೀ. ವ್ಯಾಸ ಕೊಳವೆ ಮಾರ್ಗದ ಜೋಡಣೆ, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮವು ಸೂಚಿಸಿರುವ ವಿದ್ಯುತ್ ಸ್ಥಾವರಗಳ ವಾರ್ಷಿಕ ನಿರ್ವಹಣೆ, ತುರ್ತು ಕಾಮಗಾರಿ ಮತ್ತು ವಿವಿಧ ವಾರ್ಷಿಕ/ನಿಯಮಿತ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಶೀಘ್ರವಾಗಿ ಕೈಗೆತ್ತಿಕೊಳ್ಳಬೇಕಾಗಿರುತ್ತದೆ. ಆದ್ದರಿಂದ ತುರ್ತು ನಿರ್ವಹಣಾ ಕಾಮಗಾರಿಗಳನ್ನ ಕೈಗೊಳ್ಳುವ ಸಲುವಾಗಿ ಜೂನ್ 19 ರ ಗುರುವಾರ ಬೆಳಿಗ್ಗೆ 6-00 ಗಂಟೆಯಿಂದ 20ರ ಶುಕ್ರವಾರದ ಬೆಳಿಗ್ಗೆ 6-0 ಗಂಟೆಯವರೆಗೆ ಒಟ್ಟು 24 ಗಂಟೆಗಳ ಕಾಲ ಕಾವೇರಿ ನೀರು ಸರಬರಾಜು ಯೋಜನೆಯ ಹಂತ-1 ರಿಂದ ಹಂತ – 5 ರ ಎಲ್ಲಾ ಜಲರೇಚಕ ಯಂತ್ರಾಗಾರಗಳನು ಸ್ಥಗಿತಗೊಳಿಸಲು ಸಕ್ಷಮ ಪ್ರಾಧಿಕಾರದಿಂದ ಅನುಮತಿ ದೊರೆತಿರುತ್ತದೆ ಎಂದು ಜಲಮಂಡಳಿ ಮಾಹಿತಿ ನೀಡಿದೆ.

ತುರ್ತು ಕೆಲಸದ ಹಿನ್ನಲೆಯಲ್ಲಿ 24 ಗಂಟೆಗಳ ಕಾಲ ಕಾವೇರಿ ನೀರು ಸರಬರಾಜು ಯೋಜನೆಯ ಹಂತ-1 ರಿಂದ ಹಂತ-5ರವರೆಗಿನ ಜಲರೇಚಕ ಯಂತ್ರಾಗಾರಗಳನ್ನು ಸ್ಥಗಿತಗೊಳಿಸಲಾಗುವುದು. ಇದರಿಂದಾಗಿ ಬೃಹತ್ ಬೆಂಗಳೂರು ನಗರ ಪ್ರದೇಶದ ವ್ಯಾಪ್ತಿಯಲ್ಲಿ ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯಯವಾಗುವುದರಿಂದ ಬೆಂಗಳೂರಿನ ನಾಗರೀಕರಿಗೆ ಹಾಗೂ ವಾಣಿಜ್ಯ/ಕೈಗಾರಿಕಾ ಪ್ರದೇಶಗಳಿಗೆ ಮುಂಜಾಗ್ರತೆಯಾಗಿ ಅಗತ್ಯವಿರುವ ನೀರನ್ನು ಸಂಗ್ರಹಣೆ ಮಾಡಿಕೊಳ್ಳುವಂತೆ ಕೋರಿದೆ.

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist