ಬೆಂಗಳೂರು, (www.thenewzmirror.com) ;
ಅಖಿಲ ಭಾರತ ವೀರಶೈವ ಮಹಾಸಭಾದ ಕರ್ನಾಟಕ ಘಟಕದ ಕಾರ್ಯನಿರ್ವಾಹಕ ಸಮಿತಿಯ 27 ಸದಸ್ಯರು ಆಯ್ಕೆಯಾಗಿದ್ದಾರೆ. ಚುನಾವಣೆಗೆ ಸ್ಪರ್ಧೆ ಮಾಡಿದ್ದ 57 ಅಭ್ಯರ್ಥಿಗಳ ಪೈಕಿ ಅತಿ ಹೆಚ್ಚು ಮತ ಪಡೆದ 27 ಸದಸ್ಯರನ್ನ ಆಯ್ಕೆ ಮಾಡಲಾಗಿದೆ ಎಂದು ಅಖಿಲ ಭಾರತ ವೀರಶೈವ ಮಹಾಸಭಾದ ಕರ್ನಾಟಕ ರಾಜ್ಯ ಘಟಕದ ಚುನಾವಣಾಧಿಕಾರಿ ವೀರೇಶ್ ತಿಳಿಸಿದ್ದಾರೆ. ಇದರಲ್ಲಿ ಶಾಮನೂರು ಶಿವಶಂಕರಪ್ಪ ಬಣದ್ದೇ ಮೇಲುಗೈ ಸಾಧಿಸಿದ್ದು ಮತ್ತೊಂದು ವಿಶೇಷ.
ಕರ್ನಾಟಕದ ಜತೆಗೆ ಕೇರಳ, ತಮಿಳುನಾಡು, ತೆಲಂಗಾಣ, ಆಂಧ್ರಪ್ರದೇಶ ಮತ್ತು ಮಹಾರಾಷ್ಟ್ರ ರಾಜ್ಯಗಳಿಗೂ ಪದಾಧಿಕಾರಿಗಳ ಆಯ್ಕೆ ಇದೆ ವೇಳೆ ಮಾಡಲಾಗಿದೆ. ರ್ನಾಟಕ ರಾಜ್ಯದಲ್ಲಿ ಕಾರ್ಯನಿರ್ವಾಹಕ ಸಮಿತಿಯ27 ಸಾಮಾನ್ಯ ಸದಸ್ಯರುಗಳಿಗೆ ಕಳೆದ 25ರಂದು ರಾಜ್ಯದ ಜಿಲ್ಲಾ/ ತಾಲ್ಲೂಕು ಕೇಂದ್ರಗಳಲ್ಲಿ ಮತದಾನ ನಡೆದಿತ್ತು. ರಾಜ್ಯಾದ್ಯಂತ ಒಟ್ಟು 57 ಮಂದಿ ಸ್ಪರ್ಧೆ ಮಾಡಿದ್ದರು. ಇದರಲ್ಲಿ ಅತಿ ಹೆಚ್ಚು ಮತ ಪಡೆಸ 27 ಅಭ್ಯರ್ಥಿಗಳನ್ನ ಆಯ್ಕೆ ಮಾಡಲಾಗಿದೆ.