Big News | ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಹೈ ಕೋರ್ಟ್ ನಿಂದ ನೊಟೀಸ್ ಜಾರಿ..

ಬೆಂಗಳೂರು, (www.thenewzmirror.com) :

ಕೋರ್ಟ್ ಆದೇಶವಿದ್ದರೂ ಅದನ್ನ ಪಾಲನೆ ಮಾಡದ ಹಿನ್ನಲೆಯಲ್ಲಿ ನ್ಯಾಯಾಂಗ ನಿಂದನೆ ಅರ್ಜಿಗೆ ಸಂಬಂಧಿಸಿದಂತೆ ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಹೈ ಕೋರ್ಟ್ ನೊಟೀಸ್ ಜಾರಿಮಾಡಿದೆ.

RELATED POSTS

ಮಲ್ಲತ್ತಹಳ್ಳಿ ಕೆರೆ ಪ್ರದೇಶದಲ್ಲಿ ಯಾವುದೇ ನಿರ್ಮಾಣ ಚಟುವಟಿಕೆ ಕೈಗೊಳ್ಳದಂತೆ ಕೋರ್ಟ್‌ ಆದೇಶವಿದ್ದರೂ ಅದನ್ನು ಉಲ್ಲಂಘಿಸಿ ರಸ್ತೆ ನಿರ್ಮಿಸಲಾಗುತ್ತಿತ್ತು. ಈ ಕುರಿತಂತೆ ಹೈ ಕೋರ್ಟ್ ಗೆ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆಯಾಗಿತ್ತು.

ವಕೀಲೆ ಗೀತಾ ಮಿಶ್ರಾ ಸಲ್ಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್‌.ವಿ.ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್‌.ದೀಕ್ಷಿತ್‌ ಅವರಿದ್ದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಜಿ.ಆರ್‌.ಮೋಹನ್‌, ಕೆರೆ ಪ್ರದೇಶದಲ್ಲಿ ಅಕ್ರಮ ನಿರ್ಮಾಣ ಚಟುವಟಿಕೆ ಆಕ್ಷೇಪಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ರಸ್ತೆ ಸೇರಿದಂತೆ ಯಾವುದೇ ಶಾಶ್ವತ ಅಥವಾ ತಾತ್ಕಾಲಿಕ ನಿರ್ಮಾಣ ಕಾರ್ಯ ಕೈಗೊಳ್ಳಬಾರದು. ಗಣೇಶ ಮೂರ್ತಿಗಳ ವಿಸರ್ಜನೆ ಸೇರಿದಂತೆ ಯಾವುದೇ ರೀತಿಯ ಉತ್ಸವಗಳಿಗೆ ಅವಕಾಶ ನೀಡಬಾರದು ಎಂದು ಹೈಕೋರ್ಟ್‌ 2023ರ ಮಾರ್ಚ್ 14ರಂದು ಆದೇಶಿಸಿತ್ತು. ಆದರೂ, ಈ ಆದೇಶವನ್ನು ಉಲ್ಲಂಘಿಸಿ ಅಲ್ಲಿ 80 ಅಡಿ ರಸ್ತೆ ನಿರ್ಮಾಣ ಕಾರ್ಯ ಕೈಗೊಳ್ಳಲಾಗಿದೆ. ಕೋರ್ಟ್ ಆದೇಶವನ್ನು ಬಿಬಿಎಂಪಿ ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ ಎಂದು ದೂರಿದರು.

ಮಲ್ಲತ್ತಹಳ್ಳಿ ಕೆರೆ ಒಟ್ಟು 71.18 ಎಕರೆ ಪ್ರದೇಶ ವ್ಯಾಪ್ತಿಯಲ್ಲಿದ್ದು, ಅದರಲ್ಲಿ ಮೂರು ಎಕರೆಗೆ ಸಂಬಂಧಿಸಿದಂತೆ ವ್ಯಾಜ್ಯ ನಡೆಯುತ್ತಿದೆ. 42 ಎಕರೆ ಪ್ರದೇಶದಲ್ಲಿ ಜಲಮೂಲ ಇದ್ದು, ಅದನ್ನು 44 ಎಕರೆಗೆ ವಿಸ್ತರಿಸಿ ಅಭಿವೃದ್ಧಿಪಡಿಸಬೇಕಾಗಿದೆ. ಸದ್ಯ ಆ ಕೆರೆಯಲ್ಲಿ ನೀರಿಲ್ಲ. ಕೆರೆಯ ಪ್ರದೇಶದಲ್ಲಿಯೇ ಕೊಳಚೆ ನೀರು ಹರಿಯುವ ಮಾರ್ಗವಿದೆ ಎಂದು ವಿವರಿಸಿದರು. ಅರ್ಜಿ ವಿಚಾರಣೆ ನಡೆಸಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ಗೆ ನೋಟಿಸ್‌ ಜಾರಿಗೊಳಿಸಲು ಹೈಕೋರ್ಟ್‌ ಆದೇಶಿಸಿ ವಿಚಾರಣೆ ಮುಂದೂಡಿತು

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist