ಬೆಂಗಳೂರು, (www.thenewzmirror.com) ;
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆಯಾಗಿದ್ದ 7ನೇ ವೇತನ ಆಯೋಗದ ಶಿಫಾರಸು ಜಾರಿಗೊಳಿಸುವ ತೀರ್ಮಾನವನ್ನು ಸಿಎಂ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ. ಆ ಮೂಲಕ ಬಹು ದಿನದ ಬೇಡಿಕೆಯನ್ನ ಈಡೇರಿಸಿದ ಖ್ಯಾತಿಗೆ ಸಿದ್ದರಾಮಯ್ಯ ಸರ್ಕಾರ ಪಾತ್ರವಾಗಿದೆ.
ರಾಜ್ಯ ಸರ್ಕಾರ ನೌಕರರು ನಿರೀಕ್ಷಿಸುತ್ತಿದ್ದ 7ನೇ ವೇತನ ಆಯೋಗದ ವರದಿ ಶಿಫಾರಸುಗಳ ಅನುಷ್ಠಾನ ಆಗಸ್ಟ್ 1ರಿಂದಲೇ ಜಾರಿಗೆ ಬರಲಿದೆ.
ಮಾರ್ಚ್ 16 ರಂದು ಕೆ. ಸುಧಾಕರ್ ರಾವ್ ನೇತೃತ್ವದ ರಾಜ್ಯ 7ನೇ ವೇತನ ಆಯೋಗದ ವರದಿ ಸ್ವೀಕಾರ ಮಾಡಿದ್ದ ಸಿಎಂ ಸಿದ್ದರಾಮಯ್ಯ, ಜಾರಿ ಬಗ್ಗೆ ಹಣಕಾಸು ಇಲಾಖೆಯ ಮಾಹಿತಿ ಕೇಳಿದ್ದರು. ಇದೀಗ ಹಣಕಾಸು ಇಲಾಖೆ ವರದಿ ಬಳಿಕ ಸಿದ್ದರಾಮಯ್ಯ ಅವರು ಆಗಸ್ಟ್ 1 ರಿಂದ ವೇತನ ಆಯೋಗದ ಶಿಫಾರಸು ಜಾರಿಗೊಳಿಸುವ ತೀರ್ಮಾನ ಪ್ರಕಟಿಸಿದ್ದಾರೆ.



7ನೇ ವೇತನ ಆಯೋಗವು ಶೇ 27.5 ವೇತನ ಪರಿಷ್ಕರಣೆಗೆ ಶಿಫಾರಸು ಮಾಡಿತ್ತು. ಮಾರ್ಚ್ 2023 ರಿಂದಲೇ ಶೇ.17 ಮಧ್ಯಂತರ ಪರಿಹಾರ ನೀಡಲಾಗಿದ್ದು, ಇನ್ನು ಗರಿಷ್ಠ ಶೇ 10.5 ವೇತನ ಹೆಚ್ಚಳ ಆಗಬೇಕಿದ್ದು, ಇದರಿಂದ ಬೊಕ್ಕಸಕ್ಕೆ ಸುಮಾರು 7,500 ಕೋಟಿ ರೂ. ಹೆಚ್ಚುವರಿ ಹೊರೆ ಬೀಳುವ ನಿರೀಕ್ಷೆಯಿದೆ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ 1-7- 22 ರಿಂದ ಕಾಲ್ಪನಿಕವಾಗಿ ವೇತನ ನಿಗದಿ, 1-8- 24 ರಿಂದ ಆರ್ಥಿಕ ಸೌಲಭ್ಯವನ್ನು ನೀಡಲು ಹಾಗೂ ವೇತನ ಆಯೋಗ ಶಿಫಾರಸು ಮಾಡಿದ 27.50% ವೇತನ ವೇತನ ನಿಗದಿಗೆ ಇಂದು ನಡೆದ ಸಚಿವ ಸಂಪುಟದಲ್ಲಿ ಅನುಮೋದನೆ ನೀಡಿದೆ.
ಸಿಎಂ ಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಅಭಿನಂದನೆ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆಯಾಗಿದ್ದ 7ನೇ ವೇತನ ಆಯೋಗ ಜಾರಿ ಮಾಡಿದ್ದು ನಿರೀಕ್ಷೆಯಂತೆಯೇ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ಸ್ವಾಗತ ಮಾಡಿದೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ 1-7- 22 ರಿಂದ ಕಾಲ್ಪನಿಕವಾಗಿ ವೇತನ ನಿಗದಿ, 1-8- 24 ರಿಂದ ಆರ್ಥಿಕ ಸೌಲಭ್ಯವನ್ನು ನೀಡಲು ಹಾಗೂ ವೇತನ ಆಯೋಗ ಶಿಫಾರಸು ಮಾಡಿದ 27.50% ವೇತನ ವೇತನ ನಿಗದಿಗೆ ಇಂದು ನಡೆದ ಸಚಿವ ಸಂಪುಟದಲ್ಲಿ ಅನುಮೋದನೆ ನೀಡಿದೆ. ಈ ಕಾರಣಕ್ಕಾಗಿಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ರಾಜ್ಯದ ಎಲ್ಲ ಸಚಿವರಿಗೆ ಹಾಗೂ ಉನ್ನತ ಮಟ್ಟದ ಅಧಿಕಾರಿಗೆ ಅಧಿಕಾರಿಗಳಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಅಭಿನಂದನೆ ಸಲ್ಲಿಸಿದ್ದಾರೆ.
ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘದಿಂದಲೂ ಅಭಿನಂದನೆ
ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗ ಜಾರಿ ಮಾಡಿದ್ದಕ್ಕೆ ಸಿಎಂ, ಡಿಸಿಎಂ ಸೇರಿದಂತೆ ಎಲ್ಲ ಸಚಿವರಿಗೂ ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘದ ಅಧ್ಯಕ್ಷ ಎ. ಅಮೃತ್ ರಾಜ್ ಕೂಡ ಅಭಿನಂದಿಸಿದ್ದಾರೆ.