Bike taxy Ban | ಇಂದಿನಿಂದ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಬ್ಯಾನ್ ; ಕಾರ್ಯಾಚರಣೆಗೆ ಇಳಿದ RTO!

Bike taxi ban in the state from today; RTO goes into operation!

ಬೆಂಗಳೂರು, (www.thenewzmirror.com);

ರಾಜ್ಯದಲ್ಲಿ ಇಂದಿನಿಂದ ಬೈಕ್ ಟ್ಯಾಕ್ಸಿ ಬ್ಯಾನ್ ಮಾಡಿ ಕೋರ್ಟ್ ಆದೇಶ ಮಾಡಿದೆ. ಹೀಗಾಗಿ ಇಂದಿನಿಂದ ಬೈಕ್ ಟ್ಯಾಕ್ಸಿ ಸೇವೆ ನೀಡಿದ್ರೆ ಅವ್ರ ವಿರುದ್ಧ ಸಾರಿಗೆ ಇಲಾಖೆ ಕ್ರಮಕ್ಕೆ ಮುಂದಾಗಿದೆ.

RELATED POSTS

ಇತ್ತೀಚೆಗೆ ವಿಚಾರಣೆ ನಡೆಸಿದ್ದ ಹೈ ಕೋರ್ಟ್ ವಿಭಾಗೀಯ ಪೀಠ, ಜೂನ್ 15 ರೊಳಗೆ ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತಗೊಳಿಸುವಂತೆ ಸಾರಿಗೆ ಇಲಾಖೆಗೆ ಸೂಚಿಸಿತ್ತು. ಈ ಹಿನ್ನಲೆಯಲ್ಲಿ ಇಂದು ಬೆಳಗ್ಗೆಯಿಂದಲೇ ಸಾರಿಗೆ ಇಲಾಖೆ ಕಾರ್ಯಾಚರಣೆ ನಡೆಸಿದ್ದು ಐನೂರಕ್ಕೂ ಹೆಚ್ಚು ಬೈಕ್ ಟ್ಯಾಕ್ಸಿಗಳನ್ನ‌ ಜಪ್ತಿ ಮಾಡಿದೆ.

ನಿಯಮ ಉಲ್ಲಂಘಿಸುವ ದ್ವಿಚಕ್ರ ವಾಹನಗಳನ್ನು ಮುಟ್ಟುಗೋಲು ಹಾಕಿಕೊಳ್ಳುತ್ತಿರೋ ಇಲಾಖೆ, ನ್ಯಾಯಾಂಗ ನಿಂದನೆಯಡಿ ಕೇಸ್ ಕೂಡ ದಾಖಲು ಮಾಡುತ್ತಿದೆ. ವಾಹನಗಳನ್ನ‌ ಜಪ್ತಿ ಮಾಡೋದಲ್ಲದೇ 2 ಸಾವಿರ ರೂ.ರಿಂದ 10 ಸಾವಿರ ರೂ.ಗಳವರೆಗೆ ದಂಡ ಅಥವಾ ಮೂರು ತಿಂಗಳಿಂದ ಒಂದು ವರ್ಷದವರೆಗೆ ಜೈಲು ಶಿಕ್ಷೆ ವಿಧಿಸುವ ಕೆಲ್ಸವನ್ನೂ ಸಾರಿಗೆ ಇಲಾಖೆ ಮಾಡುತ್ತಿದೆ.

ಮೋಟಾರು ವಾಹನ ಕಾಯ್ದೆ1988 ಸೆಕ್ಷನ್ 3ರಡಿ ರಾಜ್ಯ ಸರ್ಕಾರ ಮಾರ್ಗಸೂಚಿ ರೂಪಿಸೋ ವರೆಗೂ ಬೈಕ್‌ ಟ್ಯಾಕ್ಸಿ ಸೇವೆ ರದ್ದು ಮಾಡುವಂತೆ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿತ್ತು. ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳನ್ನು ನಿಷೇಧಿಸಿ ಈ ಹಿಂದೆ ನೀಡಿದ್ದ ಏಕ ಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದ ಹಿನ್ನಲೆಯಲ್ಲಿ ಜೂನ್ 16 ರಿಂದ  ರಾಜ್ಯದ್ಯಾಂತ ಬೈಕ್ ಟ್ಯಾಕ್ಸಿ ಸೇವೆಗಳು ಸಂಪೂರ್ಣ ಸ್ಥಗಿತಗೊಳಿಸುವಂತೆ ಸೂಚಿಸಿತ್ತು.

ಏಪ್ರಿಲ್ 2 ರಂದು ಏಕ ಸದಸ್ಯ ಪೀಠ ನೀಡಿದ್ದ ಆದೇಶಕ್ಕೆ ತಡೆ ಕೋರಿ ಓಲಾ, ಊಬರ್‌ನಂತಹ ಬೈಕ್ ಟ್ಯಾಕ್ಸಿ ಅಗ್ರಿಗೇಟರ್‌ಗಳು ಸಲ್ಲಿಸಿದ್ದ ಮೇಲ್ಮನವಿಗಳ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ. ಕಾಮೇಶ್ವರ ರಾವ್ ಮತ್ತು ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಅವರಿದ್ದ ವಿಭಾಗೀಯ ಪೀಠ, ತಡೆ ನೀಡಲು ನಿರಾಕರಿಸಿತ್ತು.

ಇದರ ನಡುವೆನೇ ರಾಜ್ಯ ಬೈಕ್ ಟ್ಯಾಕ್ಸಿ ಚಾಲಕರು ಸಿಎಂ ಹಾಗೂ ರಾಹುಲ್ ಗಾಂಧಿಗೆ ಪತ್ರ ಬರೆದು ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ರದ್ದು ಮಾಡದಂತೆ ಮನವಿ ಮಾಡಿದ್ದಾರೆ.

ರಾಜ್ಯದಲ್ಲಿ 1 ಲಕ್ಷಕ್ಕೂ ಹೆಚ್ಚು ಬೈಕ್ ಟ್ಯಾಕ್ಸಿಗಳನ್ನು ಅವಲಂಬಿಸಿ ಜೀವನ ನಡೆಸುತ್ತಿದ್ದಾರೆ. ಬೈಕ್ ಟ್ಯಾಕ್ಸಿ ನಿಷೇಧದಿಂದ ಆ ಕುಟುಂಬಗಳು ಸಂಕಷ್ಟಕ್ಕೀಡಾಗುವಂತಾಗುತ್ತದೆ ಅಂತ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಬೈಕ್ ಟ್ಯಾಕ್ಸಿ ವಿರುದ್ಧ ಕಾರ್ಯಾಚರಣೆ ವಿಚಾರದಲ್ಲಿ ಬೆಂಗಳೂರು ವ್ಯಾಪ್ತಿಯ ಎಲ್ಲ ಸಾರಿಗೆ ಕಚೇರಿಗಳಲ್ಲಿ ಇಂದು ಬೆಳಗ್ಗೆಯಿಂದಲೇ ಕಾರ್ಯಾಚರಣೆ ಬಿರುಸುಗೊಂಡಿತ್ತು. ಜ್ಞಾನಭಾರತಿ, ಕೋರಮಂಗಲ, ಎಲೆಕ್ಟ್ರಾನಿಕ್ ಸಿಟಿ, ಇಂದಿರಾನಗರ, ರಾಜಾಜಿನಗರ, ಯಶವಂತಪುರ, ಕೆ.ಆರ್. ಪುರಂ, ಜಯನಗರ ಸೇರಿದಂತೆ ಎಲ್ಲಾ RTO ಕಚೇರಿಗಳಲ್ಲಿ ನಿರೀಕ್ಷೆಗೂ ಮೀರಿ ಬೈಕ್ ಟ್ಯಾಕ್ಸಿಗಳನ್ನ ಜಪ್ತಿ ಮಾಡಲಾಗಿದೆ.

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist