ಬೆಂಗಳೂರು, (www.thenewzmirror.com) ;
ಜೀವ ಬೆದರಿಕೆ, ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಶಾಸಕ ಮುನಿರತ್ನರನ್ನ ಕೋಲಾರದಲ್ಲಿ ವಶಕ್ಕೆ ಪಡೆಯಲಾಗಿದೆ.
ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ ಗ್ರಾಮದಲ್ಲಿ ಅವರನ್ನು ವಶಕ್ಕೆ ಪಡೆಯಲಾಗಿದೆ. ಕೋಲಾರದಿಂದ ಆಂಧ್ರದ ಚಿತ್ತೂರಿಗೆ ತೆರಳುತ್ತಿದ್ದ ವೇಳೆ ಶಾಸಕನ ಮೊಬೈಲ್ ಲೊಕೇಷನ್ ಆಧರಿಸಿ ಒತ್ತೆ ಮಾಡಿ ವಶಕ್ಕೆ ಪಡೆಯಲಾಗಿದೆ.
ಬಿಜೆಪಿ ಶಾಸಕ ಮುನಿರತ್ನ ಮತ್ತು ಬಿಬಿಎಂಪಿ ಗುತ್ತಿಗೆದಾರ ಚಲುವರಾಜು ಎಂಬುವವರ ನಡುವೆ ನಡೆದ ಸಂಭಾಷಣೆ ಎನ್ನಲಾದ ಆಡಿಯೋ ಒಂದು ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಬಿಬಿಎಂಪಿ ಗುತ್ತಿಗೆದಾರ ಮುನಿರತ್ನ ವಿರುದ್ಧ ಕೊಲೆ ಬೆದರಿಕೆ, ಜಾತಿ ನಿಂದನೆ ಆರೋಪದಡಿ ವಯಾಲಿಕಾವಲ್ ಠಾಣೆಯಲ್ಲಿ ಎಫ್‌ಐಆರ್ ದಾಖಲು ಮಾಡಿದ್ರು. ಹೀಗಾಗಿ ಮುನಿರತ್ನನ ವಿರುದ್ಧ ಎರಡು ಎಫ್ ಐಆರ್ ಕೂಡ ದಾಖಲಾಗಿತ್ತು. ಬಂಧನದ ಭೀತಿ ಎದುರಿಸುತ್ತಿದ್ದ ಶಾಸಕ ಮುನಿರತ್ನ ಆಂಧ್ರಪ್ರದೇಶಕ್ಕೆ ಪರಾರಿಯಾಗುತ್ತಿದ್ದ ವೇಳೆ ಕೋಲಾರದ ಗಡಿಭಾಗದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.