ಬೆಂಗಳೂರು, (www.thenewzmirror.com) :
ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಿಗೂಢ ಸ್ಪೋಟ ಸಂಭವಿಸಿದ್ದು, ಹಲವರಿಗೆ ಗಾಯಗಳಾಗಿದ್ದು, ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ರಾಮೇಶ್ವರಂ ಹೋಟೆಲ್ ನಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಹೆಚ್ ಎ ಎಲ್ ಪೊಲೀಸರು ಹಾಗೂ ಅಗ್ನಿಶಾಮಕ ದಳ ದೌಡಾಯಿಸಿದೆ.


ಘಟನೆಯಲ್ಲಿ ಹಲವರಿಗೆ ಗಾಯಗಳಾಗಿದ್ದು, ಎಲ್ಲರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯಕ್ಕೆ ಸಿಕ್ಕಿರುವ ಮಾಹಿತಿ ಪ್ರಕಾರ ನಾಲ್ವರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಅವರನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಳುಗಳ ಪೈಕಿ ಮೂವರು ಸಿಬ್ಬಂದಿ ಓರ್ವ ಗ್ರಾಹಕ ಎಂದು ತಿಳಿದುಬಂದಿದೆ.
ಪ್ರಾಥಮಿಕ ವರದಿ ಪ್ರಕಾರ ಹೊಟೇಲ್ ನಲ್ಲಿ ಇದ್ದ ಬ್ಯಾಗ್ ಒಳಗೆ ಇರಿಸಲಾಗಿದ್ದ ವಸ್ತುವಿನಿಂದ ಸ್ಫೋಟ ಸಂಭವಿಸಿರಬಹುದು ಎಂದು ಅಂದಾಜಿಲಾಗಿದೆ. ಘಟನೆಗೆ ಸ್ಪಷ್ಟ ಕಾರಣ ಇನ್ನಷ್ಟೇ ಬರಬೇಕಿದೆ.