ಬೆಂಗಳೂರು, (www.thenewzmirror.com) ;
ರಾಜ್ಯ ಶಿಕ್ಷಣ ಇಲಾಖೆ ಖಾಸಗಿ ಶಾಲೆ ಆಡಳಿತ ಮಂಡಳಿಗೆ ಹಿಂಸೆ ನೀಡುತ್ತಿವೆ. ಖಾಸಗಿ ಶಾಲೆಗಳನ್ನ ನಿಯಮಗಳ ಹೆಸರಿನಲ್ಲಿ ಹಿಂಸೆ ಮಾಡುತ್ತಿವೆ ಇದರ ವಿರುದ್ಧ ಇದೀಗ ಹೋರಾಟಕ್ಕಿಳಿದಿರೋ ಖಾಸಗಿ ಶಾಲಾ ಆಡಳಿತ ಮಂಡಳಿ ಆ.15 ರಂದು ಖಾಸಗಿ ಶಾಲೆಗಳಲ್ಲಿ ಕರಾಳ ಸ್ವಾತಂತ್ರ್ಯ ದಿನಾಚರಣೆ ಆಚರಿಸೋಕೆ ತೀರ್ಮಾನ ಮಾಡಿವೆ.
ಸರ್ಕಾರದ ನೀತಿ ವಿರುದ್ಧ ಮುಂದಿನ ನಡೆ ಬಗ್ಗೆ ಬೆಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ಸಭೆ ಸೇರಲಾಗಿತ್ತು. ಈ ಸಭೆಗೆ ಕ್ಯಾಮ್ಸ್, ಕುಸ್ಮಾ, ಸೇರಿದಂತೆ ಸೇರಿ ಹಲವು ಖಾಸಗಿ ಶಾಲೆಗಳ ಸಂಘಟನೆಗಳು ಭಾಗಿಯಾಗಿದ್ವು.
ಅಗ್ನಿಶಾಮಕ ಪ್ರಮಾಣ ಪತ್ರ, ಭೂನಕ್ಷೆ ಮಂಜೂರು, ಭೂ ಪರಿವರ್ತನೆ ಸೇರಿ ಹಲವು ಪ್ರಮಾಣ ಪತ್ರ ನೀಡಲು ಶಿಕ್ಷಣ ಇಲಾಖೆಯಲ್ಲಿ ಹಿಂಸೆ ಕೊಡುವ ಕೆಲಸ ಆಗ್ತಿದೆ. ಕೋರ್ಟ್ ನಿಯಮ ಮೀರಿ ಶಿಕ್ಷಣ ಇಲಾಖೆ ನಡೆದುಕೊಳ್ತಿದೆ ಎಂದು ಆರೋಪಿಸಿರೋ ಖಾಸಗಿ ಶಿಕ್ಷಣ ಆಡಳಿತ ಮಂಡಳಿ ಸದಸ್ಯರು, ಶಿಕ್ಷಣ ಇಲಾಖೆ ಅಧಿಕಾರಿಗಳು ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದು, ಭ್ರಷ್ಟಾಚಾರ ಮಾಡಲೇ ಇಂತಹ ನಿಯಮ ಖಾಸಗಿ ಶಾಲೆಗಳ ಮೇಲೆ ಹೇರಲಾಗಿದೆ ಎಂದು ಕ್ಯಾಮ್ಸ್ ಕಾರ್ಯದರ್ಶಿ ಶಶಿಕುಮಾರ್ ಆರೋಪಿಸಿದ್ರು.
ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಆಗುತ್ತಿರೋ ಹಿಂಸೆ ಬಗ್ಗೆ ಸಿಎಂ, ಶಿಕ್ಷಣ ಸಚಿವರ ಗಮನಕ್ಕೆ ತರಲಾಗಿದೆ. ಹೀಗಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಅಂತ ಬೇಸರ ವ್ಯಕ್ತಪಡಿಸಿದ್ದಲ್ಲದೆ ನಮ್ಮ ಸಮಸ್ಯೆಗಳನ್ನ ಆಲಿಸದ ಹಾಗೂ ಸ್ಪಂದಿಸದ ಶಿಕ್ಷಣ ಸಚಿವರು ಕೂಡಲೇ ರಾಜೀನಾಮೆ ನೀಡುವಂತೆ ಆಗ್ರಹಿಸಿದ್ರು.
ನಮ್ಮ ನೋವು ಹಾಗೂ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸಬೇಕು. ಆದರೆ ಸರ್ಕಾರವೇ ನಮಗೆ ಸಂಕಷ್ಟ ಇದೆ ಅಂತ ಹೋದ್ರೆ ನಾಟ್ ರೀಚಬಲ್ ಆಗಿದೆ. ಹೀಗಾಗಿ ಸರ್ಕಾರ, ಶಿಕ್ಷಣ ಇಲಾಖೆ ನೀತಿ ಖಂಡಿಸಿ ಸ್ವಾತಂತ್ರ್ಯ ದಿನಾಚರಣೆಯನ್ನ ಸುಮಾರು 8000 ಸಾವಿರ ಖಾಸಗಿ ಶಾಲೆಗಳ ಶಿಕ್ಷಕರು ಕಪ್ಪುಪಟ್ಟಿ ಧರಿಸಿ ಆಚರಿಸುತ್ತೀವಿ ಅಂತ ಮಾಹಿತಿ ನೀಡಿದ್ರು.